ಆರ್‌ಎಸ್‌ಎಸ್‌ ಶತಮಾನೋತ್ಸವ ಪಥಸಂಚಲನದಲ್ಲಿ ಗಣವೇಷಧಾರಿಯಾಗಿ ಭಾಗವಹಿಸಿದ್ದ ಪಿಡಿಒ ಸೇವೆಯಿಂದ ಅಮಾನತು

27

ಲಿಂಗಸುಗೂರು (ರಾಯಚೂರು): ನಿಯಮಗಳ ಪ್ರಕಾರ ಸರಕಾರಿ ಅಧಿಕಾರಿಗಳು, ನೌಕರರು ಆರ್‌ಎಸ್‌ಎಸ್‌ ಸದಸ್ಯರಾಗುವ ಹಾಗಿಲ್ಲ, ಅಥವಾ ಯಾವುದೇ ರೂಪದಲ್ಲಿ ಸಹಾಯ-ವಂತಿಗೆ ನೀಡುವಂತಿಲ್ಲ, ಈ ರೀತಿ ಮಾಡುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಗಣವೇಷಧಾರಿಯಾಗಿ ಭಾಗವಹಿಸಿದ್ದ ಸಿರವಾರ ಪಿಡಿಒ ಪ್ರವೀಣ್‌ಕುಮಾರ್‌ ಕೆ.ಪಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಹೌದು ರಾಯಚೂರು ಪಟ್ಟಣದಲ್ಲಿ ಅ.12ರಂದು ನಡೆದ ಆರ್‌ಎಸ್‌ಎಸ್‌ ಶತಮಾನೋತ್ಸವ ಪಥಸಂಚಲನದಲ್ಲಿ ಗಣವೇಷಧಾರಿಯಾಗಿ ಭಾಗವಹಿಸಿದ್ದ ಸಿರವಾರ ಪಿಡಿಒ ಪ್ರವೀಣ್‌ಕುಮಾರ್‌ ಕೆ.ಪಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಪಂಚಾಯತ್‌ ರಾಜ್‌, ಗ್ರಾಮೀಣಾಭಿವೃದ್ಧಿ ಮತ್ತು ಸಕ್ಷಮ ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರಿ ಡಾ.ಅರುಂಧತಿ ಚಂದ್ರಶೇಖರ್‌ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಪ್ರವೀಣಕುಮಾರ್‌ ಕೆ.ಪಿ. ಅವರು, ಸ್ಥಳೀಯ ಶಾಸಕ ಮಾನಪ್ಪ ವಜ್ಜಲ್‌ ಅವರ ಆಪ್ತ ಸಹಾಯಕರೂ ಆಗಿದ್ದಾರೆ. ಈ ಪಥಸಂಚಲನದಲ್ಲಿ ಸಮವಸ್ತ್ರ ಧರಿಸಿದ್ದಲ್ಲದೇ ಕೈಯಲ್ಲಿದೊಣ್ಣೆ ಹಿಡಿದು ಪಾಲ್ಗೊಂಡಿದ್ದರು. ‘‘ಈ ವರ್ತನೆಯನ್ನು ಸರಕಾರಿ ಸೇವಾ ನಿಯಮ ಉಲ್ಲಂಘನೆ ಎಂದು ಪರಿಗಣಿಸಲಾಗಿದೆ. ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತ್ತುಗೊಳಿಸಲಾಗಿದೆ,’’ ಎಂದು ಆದೇಶದಲ್ಲಿ ತಿಳಿಸಲಾಗಿದೆ.  

ಬಾಗಲಕೋಟೆ : ಗಣರಾಜ್ಯೋತ್ಸವ ಪರೇಡ್ ನಲ್ಲಿ ಆರೆಸ್ಸೆಸ್ ಸ್ವಯಂಸೇವಕರಿಗೆ ಅವಕಾಶ ನೀಡುವಂತೆ ರಾಜ್ಯಸಭೆ ಸದಸ್ಯ ನಾರಾಯಣಸಾ ಭಾಂಡಗೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಅವರು ” ಶತಮಾನದಿಂದ ಆರೆಸ್ಸೆಸ್ ರಾಷ್ಟ್ರೀಯತೆ ಪೋಷಿಸಿ ದೇಶ ಸೇವೆಗೆ ಸಮರ್ಪಿಸಿಕೊಂಡಿದೆ. ಸಂಘದ ಶತಮಾನೋತ್ಸವ ಸಂಭ್ರಮದಲ್ಲಿ ಸ್ವಯಂಸೇವಕರನ್ನು ಗಣರಾಜ್ಯೋತ್ಸವ ಪರೇಡ್ ಗೆ ಆಹ್ವಾನಿಸಿ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಬೇಕು” ಎಂದು ಮನವಿ ಮಾಡಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...