ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪಥಸಂಚಲನ ಕುರಿತು ವಿಚಾರಣೆ :  ಹೈಕೋರ್ಟ್ ನ. 2ರಂದು ಅನುಮತಿ ನೀಡಿದ್ದು ಅರ್ಜಿದಾರರ ಮನವಿಯನ್ನು ಪರಿಗಣಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ.

40

ಬೆಂಗಳೂರು:ಇಂದು ಪಥ ಸಂಚಲನ ನಡೆಸಲು ಅವಕಾಶ ನೀಡದ ಚಿತ್ತಾಪುರ ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂಜಿಎಸ್ ಕಮಲ್ ಅವರಿದ್ದ ಪೀಠ ಈ ಸೂಚನೆ ನೀಡಿದೆ.

ಜೊತೆಗೆ ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿ, ಅಕ್ಟೋಬರ್ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ. ಇಂದು ಪಥ ಸಂಚಲನ ನಡೆಸಲು ಅವಕಾಶ ನೀಡದ ಚಿತ್ತಾಪುರ ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂಜಿಎಸ್ ಕಮಲ್ ಅವರಿದ್ದ ಪೀಠ ಈ ಸೂಚನೆ ನೀಡಿದೆ.

ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರದಲ್ಲಿ ಇಂದು RSS ಪಥ ಸಂಚಲನಕ್ಕೆ ಅನುಮತಿ ನಿರಾಕರಣೆ: ತಹಶಿಲ್ದಾರ್ ಆದೇಶ ವಿಚಾರಣೆ ವೇಳೆ, ಕಾನೂನು ಸುವ್ಯವಸ್ಥೆ ಕಾಪಾಡಬೇಕಾಗಿರುವುದರಿಂದ ಹಲವು ಸಂಘಟನೆಗಳು ಒಂದೇ ದಿನ, ಒಂದೇ ಸ್ಥಳ ಮತ್ತು ಒಂದೇ ಮಾರ್ಗದಲ್ಲಿ ರ‍್ಯಾಲಿ ನಡೆಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದ್ದಾರೆ. ಆದ ಕಾರಣ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳಂದು ಅವಕಾಶ ಕಲ್ಪಿಸಬೇಕು ಎಂದು ಹೈಕೋರ್ಟ್ ತಿಳಿಸಿತು.

ಅದ್ದರಿಂದ ಇದೇ ದಿನ ಹೊಸದಾಗಿ ಮನವಿ ಸಲ್ಲಿಸಿ, ಯಾವ ಮಾರ್ಗದಲ್ಲಿ ರ‍್ಯಾಲಿ ನಡೆಸಲಾಗುವುದು ಎಂಬುದನ್ನು ತಿಳಿಸಿ, ಜಿಲ್ಲಾಡಳಿತ ಮತ್ತು ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ಗೆ ಮನವಿ ಸಲ್ಲಿಸಬೇಕು. ಅದರಂತೆ, ಜಿಲ್ಲಾ ಮತ್ತು ತಾಲೂಕು ಆಡಳಿತ ರ‍್ಯಾಲಿಗೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ ಪೀಠ, ಅರ್ಜಿಯ ವಿಚಾರಣೆಯನ್ನು ಮುಂದೂಡಿತು

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...