ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ಮಣಿಪಾಲ್ ಪೊಲೀಸರಿಂದ ದಾಳಿ ಇಬ್ಬರ ಬಂಧನ

78

ಮಂಗಳೂರು ನಲ್ಲಿ ಮೊದಲು ಕಾರ್ಯಾಚರಿಸುತ್ತಿದ್ದ ಮಸಾಜ್ ಪಾರ್ಲರಗಳು ದಕ್ಷ ಮಂಗಳೂರು ಕಮಿಷನರ್ ಹಾಗೂ ಎಸ್ ಪಿ ಅವರ ಅಧಿಕಾರಿಗಳ ಆಗಮನದಿಂದ ಉಡುಪಿ ಜಿಲ್ಲೆಗೆ ಒಕ್ಕರಿಸಿ ಇದೀಗ ಉಡುಪಿಯಲ್ಲಿ ಮಣಿಪಾಲ ಸೇರಿದಂತೆ ಹಲವು ಕಡೆಗಳಲ್ಲಿ ನಾಯಕೊಡೆಗಳಂತೆ ತಲೆ ಎತ್ತಿವೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದ್ದ ಸಂದರ್ಭದಲ್ಲಿ

ಉಡುಪಿ ಜಿಲ್ಲೆಗೆ ವಕ್ಕರಿಸಿದ ಮಸಾಜ್ ಪಾರ್ಲರ್ ಹೆಸರಿನ ವೇಶ್ಯಾವಾಟಿಕೆ ದಂಧೆಗೆ ಮಣಿಪಾಲ ಪೊಲೀಸರಿಂದ ದಾಳಿ ಮಹೇಶ್‌ ಪ್ರಸಾದ್‌ , ಪೊಲೀಸ್‌ ನಿರೀಕ್ಷಕರು, ಮಣಿಪಾಲ ಪೊಲೀಸ್‌ ಠಾಣೆ ಇವರಿಗೆ ಮಣಿಪಾಲದಲ್ಲಿ ಬಾಡಿ ಮಸಾಜ್‌ ಹೆಸರಿನಲ್ಲಿ ಅಕ್ರಮ ಲಾಭಕ್ಕಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಬಂದ ಮಾಹಿತಿಯಿಂದ

ದಾಳಿ ಮಾಡಿ ನೊಂದ ಮಹಿಳೆಯರನ್ನು ರಕ್ಷಿಸಿ, ಆರೋಪಿತರುಗಳಾದ ಇಮ್ರಾನ್ ಹಾಗೂ ಜೈಬಾಯ್‌ ಅಲಿಯಾಸ್‌ ಎಲಿಸಾ ಎಂಬುವವರನ್ನು ವಶಕ್ಕೆ ಪಡೆದುಕೊಂಡು ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಆರೋಪಿತರುಗಳಾದ ಮಹೇಶ್ ಹಾಗೂ ಅಶೋಕ್ ಎಂಬವರು

ತಮ್ಮ ಸ್ವಂತ ಲಾಭಕ್ಕಾಗಿ ಅಕ್ರಮವಾಗಿ ಹಣಗಳಿಸುವ ಉದ್ದೇಶದಿಂದ ಸೆಲೂನ್‌ & ಸ್ಪಾ ಬಾಡಿ ಮಸಾಜ್‌ ಸೆಂಟರ್‌ ಇಟ್ಟುಕೊಂಡಿರುವುದು ಕಂಡು ಬಂದಿದ್ದು ಆರೋಪಿತರುಗಳಾದ ಇಮ್ರಾನ್ ಹಾಗೂ ಜೈಬಾಯ್‌ ಅಲಿಯಾಸ್‌ ಎಲಿಸಾ ಅವರೊಂದಿಗೆ ಸೇರಿಕೊಂಡು ಅವರ ವ್ಯವಹಾರಕ್ಕೆ ಸಹಕರಿಸುತ್ತಿರುವುದು ತಿಳಿದು ಬಂದಿದೆ.ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...