ಟೆರಿಟೋರಿಯಲ್ ಆರ್ಮಿಯ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆಯ ಲಾಂಛನವನ್ನು     ಅಲಂಕರಿಸಿದ ನೀರಜ್ ಚೋಪ್ರಾ

18

ನವದೆಹಲಿ: ಜಾವೆಲಿನ್ ಥ್ರೋ ತಾರೆ, ಒಲಿಂಪಿಕ್‌ ಚಿನ್ನದ ಪದಕ ವಿಜೇತ ಕ್ರೀಡಾಪಟು ನೀರಜ್ ಚೋಪ್ರಾ ಅವರು ಭಾರತೀಯ ಸೇನೆಯ ಮೀಸಲು ಘಟಕವಾದ ಟೆರಿಟೋರಿಯಲ್ ಆರ್ಮಿ (ಪ್ರಾದೇಶಿಕ ಸೇನೆ) ಸೇರ್ಪಡೆಯಾಗಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದೆಹಲಿಯ ಕಚೇರಿಯಲ್ಲಿ ನೀರಜ್ ಚೋಪ್ರಾ ಅವರಿಗೆ ಟೆರಿಟೋರಿಯಲ್ ಆರ್ಮಿಯ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆಯ ಲಾಂಛನವನ್ನು ತೊಡಿಸಿ ಅಭಿನಂದಿಸಿದರು.

ಈ ವೇಳೆ ಭಾರತೀಯ ಸೇನೆಯ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಅವರು ಹಾಜರಿದ್ದರು. ನೀರಜ್ ಚೋಪ್ರಾ ಭಾರತದ ಅತ್ಯುತ್ತಮ ಕ್ರೀಡಾಪಟು. ಅವರ ನಿರಂತರ ಪರಿಶ್ರಮ, ದೇಶಭಕ್ತಿಯು ಭಾರತೀಯ ಮನೋಭಾವದ ಸಂಕೇತ. ಭವಿಷ್ಯದಲ್ಲಿ ಅವರ ಎಲ್ಲಾ ಪ್ರಯತ್ನಗಳಲ್ಲಿ ಅವರಿಗೆ ಯಶಸ್ಸು ಸಿಗಲಿ ಎಂದು ರಾಜನಾಥ್ ಸಿಂಗ್ ತಮ್ಮ ಎಕ್ಸ್ ಖಾತೆಯಲ್ಲಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.

2020ರ ಟೊಕಿಯೊ ಒಲಿಂಪಿಕ್ಸ್‌ನಲ್ಲಿ ನೀರಜ್ ಚಿನ್ನದ ಪದಕ ಗೆದ್ದಿದ್ದರು. 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಅವರಿಗೆ ಪರಮ ವಿಶಿಷ್ಟ ಸೇವಾ ಮೆಡಲ್, ಪದ್ಮ ಶ್ರೀ ಹಾಗೂ ವಿಶಿಷ್ಟ ಸೇವಾ ಮೆಡಲ್ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ನೀರಜ್ ಚೋಪ್ರಾ ಸಹ ಟೆರಿಟೋರಿಯಲ್ ಆರ್ಮಿ ಸೇರಿದ್ದರ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...