11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು  8,704 ನೇರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ

23

ಬೆಂಗಳೂರು:ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ 27,607 ಕೋಟಿ ಹೂಡಿಕೆಗೆ ಒಪ್ಪಿಗೆ. 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆ. 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸಚಿವ ಎಂ ಬಿ ಪಾಟೀಲ ಮಾಹಿತಿ.

ಕರ್ನಾಟಕ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸುದ್ದಿಗಾರರಿಗೆ ತಿಳಿಸಿದರು. ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದಿದ್ದಾರೆ.

11 ಹೊಸ ಹೂಡಿಕೆ ಯಾವ ಕಂಪನಿಗಳಿಂದ? ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ ವಾಯು ಅಸೆಟ್ಸ್ 1,251 ಕೋಟಿ ರೂ ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ ಗ್ರಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ ಸ್ನೈಡರ್ ಎಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ. ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ 80 ಕೋಟಿ ರೂ. ಬಾಲಾಜಿ ವೇಫರ್ಸ್ ಕಂಪನಿಗಳು 298.75 ಕೋಟಿ ರೂ. ಸರಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು.

ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಚಿವ ಪಾಟೀಲರು ಮಾತನಾಡಿ, ಕೆಎಸ್ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ. 2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು.

2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಅವರು ನುಡಿದಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...