ಪರಿಸ್ಥಿತಿ ಸಾಮಾನ್ಯವಾದ ನಂತರ ಪಥಸಂಚಲನ ಸೂಕ್ತ: RSS ಮುಖಂಡರಿಗೆ ಕೊಂಚ ನಿರಾಸೆ

36

ಕಲಬುರಗಿ: ಅಕ್ಟೋಬರ್ 28 ರಂದು ಉದ್ದೇಶಿತ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ರೂಟ್ ಮಾರ್ಚ್‌ನ ಆಯೋಜಕರೊಂದಿಗೆ ಶಾಂತಿ ಸಭೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ತಹಶೀಲ್ದಾರ್ ಕ್ರಮ ಪ್ರಶ್ನಿಸಿ ಆರ್‌ಎಸ್‌ಎಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಪೀಠ, ಚಿತ್ತಾಪುರ ಪಟ್ಟಣದಲ್ಲಿ ಕೆಲವು ರೀತಿಯ ಉದ್ವಿಗ್ನತೆ ಉಂಟಾಗಿದೆ ಎಂದು ಅಧಿಕಾರಿಗಳು ಸಲ್ಲಿಸಿದ ವರದಿಯನ್ನು ಗಮನಿಸಿ, ಅಕ್ಟೋಬರ್‌ 28ಕ್ಕೆ ಶಾಂತಿ ಸಭೆ ನಡೆಸಬೇಕು.

ಅಕ್ಟೋಬರ್‌ 30ರಂದು ವರದಿ ನೀಡುವಂತೆ ಸೂಚಿಸಿದೆ. ಈ ವರದಿ ಆಧಾರದ ಮೇಲೆ ಹೈಕೋರ್ಟ್ ತೀರ್ಪು ನೀಡಲಿದೆ. ಇದರೊಂದಿಗೆ ನವೆಂಬರ್ 2ರಂದು ಪಥಸಂಚಲನಕ್ಕೆ ಹೈಕೋರ್ಟ್ ಇಂದು ಅನುಮತಿ ನೀಡುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದ ಆರ್ಎಸ್ಸ್ ಮುಖಂಡರಿಗೆ ಕೊಂಚ ನಿರಾಸೆಯಾಗಿದೆ.

ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ ಎರಡು ಅಭಿಪ್ರಾಯಗಳನ್ನು ನೀಡಿದ್ದಾರೆ. ಜನರಿಗೆ ತೊಂದರೆಯಾಗುವ ಬಗ್ಗೆ ಕಲಬುರಗಿ ಎಸ್‌ಪಿ ವರದಿ ನೀಡಿದ್ದಾರೆ. ಪಥಸಂಚಲನದ ಮಾರ್ಗದಲ್ಲಿ ಸಂಚಾರ ದಟ್ಟಣೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ. ಪರಿಸ್ಥಿತಿ ಸಾಮಾನ್ಯವಾದ ನಂತರ ಪಥಸಂಚಲನ ಸೂಕ್ತ. ಕೆಲ ವಾರಗಳ ಬಳಿಕ ಪಥಸಂಚಲನ ನಡೆಸುವುದು ಸೂಕ್ತವೆಂದು ವರದಿಯಿದೆ. ಇದರಿಂದ ಯಾವುದೇ ಸಂಘಟನೆಗಳಿಗೂ ಅನುಮತಿ ನೀಡದಂತೆ ವರದಿಯಿದೆ ಎಂದು ಹೇಳಿದರು”

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...