ಎಲೆಕ್ಟ್ರಿಕ್‌ ಬಸ್‌ಗಳಿಗೆ ಖಾಸಗಿ ಚಾಲಕರ ನೇಮಕ ರದ್ದು ಕೋರಿ ಕೇಂದ್ರಕ್ಕೆ ಪತ್ರ ಬರೆಯಲು ಸಾರಿಗೆ ಸಚಿವ ನಿರ್ಧಾರ

32

ಬೆಂಗಳೂರು: ಶುಕ್ರವಾರ ಬಿಎಂಟಿಸಿ ನಿಗಮ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ರಾಮಲಿಂಗ ರೆಡ್ಡಿ 2 ದಿನಗಳಿಂದ ಮುಷ್ಕರ ಹಮ್ಮಿಕೊಂಡಿರುವ ಇವಿ ಬಸ್‌ ಖಾಸಗಿ ಚಾಲಕರು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

  ಬೆಂಗಳೂರಿನಲ್ಲಿ ಇತ್ತಿಚೇಗೆ ಎಲೆಕ್ಟ್ರಿಕ್ ಬಸ್ ಗಳಿಂದ ಒಂದಲ್ಲ ಒಂದು ಅವಘಡಗಳು ಸಂಭವಿಸುತ್ತಲೇ ಇದೆ. ಇದಕ್ಕೇ ಕಡಿವಾಣ ಹಾಕಲು ಈಗ ಇವಿ ಬಸ್‌ಗಳಿಗೆ ಖಾಸಗಿ ಚಾಲಕರನ್ನು ನೇಮಿಸುವ ವ್ಯವಸ್ಥೆ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಿರ್ಧರಿಸಿದ್ದಾರೆ. ಎಲೆಕ್ಟ್ರಿಕ್‌ ಬಸ್‌ ಚಾಲಕರ ಮುಷ್ಕರ ವೇತನ, ಭತ್ಯೆ ಹೆಚ್ಚಳ, ಬೋನಸ್‌ ಸೇರಿದಂತೆ ವಿವಿಧ ಕಾರಣ ನೀಡಿ ಖಾಸಗಿ ಸಂಸ್ಥೆಯಿಂದ ನೇಮಕವಾಗಿರುವ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಕಳೆದ ಎರಡು ದಿನಗಳಿಂದ ಮುಷ್ಕರ ಹಮ್ಮಿಕೊಂಡಿದ್ದಾರೆ.

ಇದರಿಂದ 2 ದಿನಗಳಿಂದ 140ಕ್ಕೂ ಹೆಚ್ಚಿನ ಎಲೆಕ್ಟ್ರಿಕ್‌ ವಾಹನಗಳು ಡಿಪೋಗಳಲ್ಲೇ ನಿಂತಿದ್ದು, ಕಾರ್ಯಾಚರಣೆ ಸ್ಥಗಿತಗೊಂಡಿದೆ. ಅಲ್ಲದೆ, ಈ ಸಮಸ್ಯೆ ಬಗೆಹರಿಸುವಂತೆ ಖಾಸಗಿ ಸಂಸ್ಥೆಗಳಿಗೆ ಬಿಎಂಟಿಸಿ ಸೂಚನೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಶುಕ್ರವಾರ ಬಿಎಂಟಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಲೆಕ್ಟ್ರಿಕ್‌ ಬಸ್‌ ಗಳಲ್ಲಿ ನಡೆಯುತ್ತಿರುವ ಅವಘಡಗಳಿಗೆ ಕಾರಣಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಬಿಎಂಟಿಸಿಗೆ ಗ್ರಾಸ್‌ ಕಾಸ್ಟ್‌ ಕಾಂಟ್ರ್ಯಾಕ್ಟ್‌ (GCC) ಮಾದರಿಯಲ್ಲಿ ಎಲೆಕ್ಟ್ರಿಕ್‌ ಬಸ್‌ಗಳನ್ನು ಪಡೆಯಲಾಗುತ್ತಿದೆ. ಅದರಂತೆ ಬಸ್‌ಗಳನ್ನು ಪೂರೈಸುವ ಸಂಸ್ಥೆಯೇ ಅವುಗಳನ್ನು ನಿರ್ವಹಣೆ ಮಾಡುತ್ತಾರೆ ಹಾಗೂ ಅವುಗಳಿಗೆ ಚಾಲಕರನ್ನು ನೇಮಿಸುತ್ತಿದ್ದಾರೆ.

ಈ ವ್ಯವಸ್ಥೆಯು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ವಿವರಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧಾರ ಇನ್ನೂ ಸಭೆಯಲ್ಲಿ ನಡೆದ ಚರ್ಚೆಗಳ ನಂತರ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಸಂಬಂಧಪಟ್ಟ ಕೇಂದ್ರ ಸಚಿವರಿಗೆ ಪತ್ರ ಬರೆದು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಇನ್ನೂ ಈ ಪತ್ರದಲ್ಲಿ ಜಿಸಿಸಿ ಮಾದರಿಯಲ್ಲಿ ಬಸ್‌ ಗುತ್ತಿಗೆ ಪಡೆಯುವುದರಿಂದ ಕಂಪನಿಗಳು ಅವುಗಳಿಗೆ ಖಾಸಗಿ ಚಾಲಕರನ್ನು ನಿಯೋಜಿಸುವುದರಿಂದ ಎದುರಾಗುತ್ತಿರುವ ಸಮಸ್ಯೆಗಳ ಕುರಿತು, ಇನ್ನೂ ಇದರಿಂದ ಬಿಎಂಟಿಸಿ ಸೇರಿದಂತೆ ಸಾರಿಗೆ ನಿಗಮಗಳಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪತ್ರದಲ್ಲಿ ತಿಳಿಸಲು ನಿರ್ಧರಿಸಿದ್ದಾರೆ.

ಅಲ್ಲದೇ ಸದ್ಯ ಇರುವ ಜಿಸಿಸಿ ವ್ಯವಸ್ಥೆಯನ್ನು ಬದಲಿಸುವುದು ಅಥವಾ ಮುಂದೆ ಸಮಸ್ಯೆಯುಂಟಾಗುವುದನ್ನು ತಡೆಯುವಂತಹ ವ್ಯವಸ್ಥೆ ಜಾರಿಗೊಳಿಸುವಂತೆಯೂ ರಾಮಲಿಂಗಾರೆಡ್ಡಿ ಕೋರಲಿದ್ದಾರೆ ಎಂದು ತಿಳಿದುಬಂದಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದ್ದೇನು? ಇನ್ನೂ ಈ ಕುರಿತು ಸಭೆಯ ಬಳಿಕ ಮಾತನಾಡಿದ ರಾಮಲಿಂಗ ರೆಡ್ಡಿ “ಜಿಸಿಸಿ ಮಾದರಿಯಲ್ಲಿ ಬಸ್‌ಗಳನ್ನು ಪಡೆಯುವುದರಿಂದ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರಿಗೆ ತಿಳಿಸಲು ಮುಂದಾಗಿದ್ದೇನೆ. ಸಾರಿಗೆ ನಿಗಮಗಳಿಗಾಗುತ್ತಿರುವ ಸಮಸ್ಯೆಗಳು, ನಿಗಮಗಳಿಗೆ ಕೆಟ್ಟ ಹಸರು ಬರುತ್ತಿರುವ ಬಗ್ಗೆ ಅಂಕಿ-ಸಂಖ್ಯೆ ಸಹಿತ ವಿವರವುಳ್ಳ ಪತ್ರವನ್ನು ಕೇಂದ್ರ ಸಚಿವರಿಗೆ ಬರೆಯುತ್ತೇನೆ” ಎಂದು ಹೇಳೀದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...