ಸಕಲೇಶಪುರ- ಸುಬ್ರಹ್ಮಣ್ಯ ಘಾಟ್ ಸೆಕ್ಷನ್ ನಡುವೆ ರೈಲ್ವೆ ವಿದ್ಯುದ್ದೀಕರಣ : ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿ ವಿಸ್ತರಣೆ

24

ಬೆಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ನವೆಂಬರ್ 2, 2025 ರಿಂದ ಡಿಸೆಂಬರ್ 15, 2025 ರವರೆಗೆ ಪ್ರತಿದಿನ ನಾಲ್ಕು ಗಂಟೆಗಳ ಕಾಲ ಮಾರ್ಗವನ್ನು ಬಂದ್ ಮಾಡುತ್ತಿದೆ. ಈ ಕಾರಣದಿಂದಾಗಿ ಈ ಕೆಳಗೆ ತಿಳಿಸಲಾದ ಕೆಲವು ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿಯನ್ನು ವಿಸ್ತರಿಸಲಾಗಿದೆ.

ಅವುಗಳ ಅವಧಿ ಈ ಕೆಳಗಿನಂತಿವೆ: ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 02.11.2025 ರವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ.

ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರವರೆಗೆ ರದ್ದುಗೊಂಡಿತ್ತು. ಈಗ 02.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್–ಯಶವಂತಪುರ ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರವರೆಗೆ ರದ್ದುಗೊಂಡಿತ್ತು.

ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ. ಸಕಲೇಶಪುರ-ಸುಬ್ರಮಣ್ಯ ರಸ್ತೆಯ ಘಾಟ್ ಸೆಕ್ಷನ್ ನಲ್ಲಿ ಸಿಗ್ನಲಿಂಗ್ ಯೋಜನೆ ಮೇಲ್ದರ್ಜೆಗೆ ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ವೀಕ್ಲಿ ಎಕ್ಸ್’ಪ್ರೆಸ್ ಮೊದಲು 31.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಎಕ್ಸ್’ಪ್ರೆಸ್ ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 04.11.2025 ರಿಂದ 16.12.2025 ರವರೆಗೆ ರದ್ದುಗೊಳ್ಳಲಿದೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...