ಮೆಟ್ರೋ ಸೌಕರ್ಯ ಬಳಸಿ ತ್ವರಿತ ಅಂಗಾಂಗ ರವಾನೆ ಜೀವ ಉಳಿಸಲು ನೆರವಾಾದ BMRCL

45

ಬೆಂಗಳೂರು: ಸಾಮಾನ್ಯವಾಗಿ ಅಂಗಾಂಗಳನ್ನು ಆ್ಯಂಬುಲೆನ್ಸ್‌ ಮೂಲಕವೇ ಸಾಗಣೆ ಮಾಡುವುದುಂಟು. ಆದರೆ, ಇತ್ತೀಚಿನ ಸಂಚಾರ ಸಮಸ್ಯೆಯಿಂದಾಗಿ ಆ್ಯಂಬುಲೆನ್ಸ್‌ ಗಳೂ ರಸ್ತೆಯಲ್ಲಿ ಶೀಘ್ರಗತಿಯಲ್ಲಿ ಸಂಚಾರ ನಡೆಸುವುದು ಕಷ್ಟಕರವಾಗಿ ಹೋಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿಗಳು ನಮ್ಮ ಮೆಟ್ರೋ ಸೌಕರ್ಯ ಬಳಸಿಕೊಳ್ಳಲು ಮುಂದಾಗುತ್ತಿದ್ದಾರೆ. ಇದರಂತೆ ಗುರುವಾರ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಹೃದಯ ಮತ್ತು ಶ್ವಾಸಕೋಶ ಸಾಗಣೆ ಮಾಡಲಾಗಿದೆ.

ಇದರಿಂದ ಜೀವವೊಂದು ಉಳಿದಂತಾಗಿದೆ. ಒಂದು ಶ್ವಾಸಕೋಶ ಮತ್ತು ಹೃದಯವನ್ನ ಯಶವಂತಪುರದ ಸ್ಪರ್ಶ್‌ ಆಸ್ಪತ್ರೆಯಿಂದ ನಾರಾಯಣ ಹೆಲ್ತ್‌ ಸಿಟಿ ಮತ್ತು ಆಸ್ಟರ್‌ ಆರ್‌ವಿ ಆಸ್ಪತ್ರೆಗೆ ನಮ್ಮ ಮೆಟ್ರೋದಲ್ಲೇ ಕೊಂಡೊಯ್ಯಲಾಗಿದೆ. ಪ್ರಯಾಣಿಕರು ಸಂಚಾರ ಮಾಡುತ್ತಿದ್ದ ಮೆಟ್ರೋ ರೈಲಿನ ಒಂದು ಭೋಗಿಯಲ್ಲಿ ಶ್ವಾಸಕೋಶ-ಹೃದಯ ತುಂಬಿದ ವೈದ್ಯಕೀಯ ಬಾಕ್ಸ್‌ ಇಟ್ಟುಕೊಂಡು, ಆಸ್ಪತ್ರೆಯ ಸಿಬ್ಬಂದಿ ಸಂಚರಿಸಿದ್ದಾರೆ.

ಎರಡು ಆಸ್ಪತ್ರೆಗಳ ನಡುವಿನ ಸುಮಾರು 30-33 ಕಿಮೀ ದೂರವನ್ನ ಕೇವಲ 61 ನಿಮಿಷದಲ್ಲಿ ತಲುಪಿದ್ದಾರೆ. ಈ ಸಂದರ್ಭದಲ್ಲಿ ಶ್ವಾಸಕೋಶ ಕಸಿ ಮಾಡುವ ಐವರು ಸಿಬ್ಬಂದಿಯೊಂದಿಗೆ BMRCL ಹೋಮ್‌ ಗಾರ್ಡ್‌ಗಳೂ ಇದ್ದರು. ಏತನ್ಮಧ್ಯೆ ಸಮನ್ವಯ ಮತ್ತು ಸಹಾಯಕ್ಕಾಗಿ ನಾರಾಯಣ ಹೆಲ್ತ್ ಆಸ್ಪತ್ರೆಯು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಅಧಿಕಾರಿಗಳಿಗೆ ಕೃತಜ್ಞತೆ ತಿಳಿಸಿದೆ”

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....