ಛತ್ತೀಸ್‌ಗಢದ ನವ ರಾಯ್‌ಪುರ ಅಟಲ್ ನಗರದಲ್ಲಿ ನೂತನ ವಿಧಾನಸಭಾ ಕಟ್ಟಡವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

22

ರಾಯ್‌ಪುರ: ಛತ್ತೀಸ್‌ಗಢ ನೂತನ ವಿಧಾನಸಭೆ ಉದ್ಘಾಟಿಸಿದ ಪ್ರಧಾನಿ ಮೋದಿ ಅದಕ್ಕೂ ಮುನ್ನ, ವಿಧಾನಸಭಾ ಸಂಕೀರ್ಣದ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾದ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರತಿಮೆಯನ್ನು ಪ್ರಧಾನಿ ಅನಾವರಣಗೊಳಿಸಿದರು. ಛತ್ತೀಸ್‌ಗಢ ನೂತನ ವಿಧಾನಸಭೆ

ಈ ವೇಳೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಛತ್ತೀಸ್‌ಗಢ ವಿಧಾನಸಭಾ ಸ್ಪೀಕರ್ ರಮಣ್ ಸಿಂಗ್, ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮತ್ತು ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಚರಣ್ ದಾಸ್ ಮಹಂತ್ ಅವರು ಇದ್ದರು.

ಮಧ್ಯ ಪ್ರದೇಶ ಇಭ್ಭಾಗ ಮಾಡಿ ಛತ್ತೀಸ್‌ಗಢ ರಾಜ್ಯ ರಚನೆಯಾದ ನಂತರ ರಾಯ್‌ಪುರದ ಖಾಸಗಿ ಶಾಲೆಯನ್ನು ವಿಧಾನಸಭೆಯಾಗಿ ಮಾಡಿಕೊಳ್ಳಲಾಗಿತ್ತು. ಈಗ ತನ್ನದೇ ಆದ ಭವ್ಯ, ಆಧುನಿಕ ಮತ್ತು ಪರಿಸರ ಸ್ನೇಹಿ ನೂತನ ಕಟ್ಟಡಕ್ಕೆ ವಿಧಾನಸಭೆ ಸ್ಥಳಾಂತರಗೊಳ್ಳುತ್ತಿದೆ. ನವ ರಾಯ್‌ಪುರದಲ್ಲಿ 51 ಎಕರೆಗಳಷ್ಟು ವಿಸ್ತೀರ್ಣದಲ್ಲಿ ಹರಡಿಕೊಂಡಿರುವ ವಿಧಾನಸಭೆ ಕಟ್ಟವನ್ನು 324 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಇದು ಕೇವಲ ಒಂದು ಕಟ್ಟಡವಲ್ಲ, ಛತ್ತೀಸ್‌ಗಢದ ಸಾಂಸ್ಕೃತಿಕ ಗುರುತು ಮತ್ತು ಪ್ರಗತಿಪರ ಮನೋಭಾವದ ಸಂಕೇತವಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಹೊಸ ವಿಧಾನಸಭೆ ಕಟ್ಟಡದ ವಾಸ್ತುಶಿಲ್ಪಿ ಸಂದೀಪ್ ಶ್ರೀವಾಸ್ತವ ಅವರು, ಪ್ರಸ್ತುತ ಮತ್ತು ಭವಿಷ್ಯದ ಅಗತ್ಯತೆಗಳು ಮತ್ತು ಸೌಲಭ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...