ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟು ಗಳಿಗೆ ಸರ್ಕಾರಿ ಹುದ್ದೆಗಳಲ್ಲಿ ನೇರ ನೇಮಕಾತಿ

50

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಘೋಷಣೆ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದು ಹೇಳಿದರು.

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ನೀಡಲಾಗುತ್ತದೆ. ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ ಪಟುಗಳಿಗೆ ಉತ್ತಮ ನಗದು ಬಹುಮಾನವನ್ನೂ ನೀಡುತ್ತಿದ್ದೇವೆ.

ರಾಷ್ಟ್ರಮಟ್ಟದಲ್ಲಿ ರಾಜ್ಯಕ್ಕೆ ಪ್ರಶಸ್ತಿ ತರುವವರಿಗೆ ರಾಜ್ಯ ಸರ್ಕಾರವು ಚಿನ್ನಕ್ಕೆ 7 ಲಕ್ಷ, ಬೆಳ್ಳಿಗೆ 5 ಲಕ್ಷ ಮತ್ತು ಕಂಚಿನ ಪದಕ ವಿಜೇತರಿಗೆ 2 ಲಕ್ಷ ರೂ.ಗಳನ್ನು ನೀಡುತ್ತೇವೆ. ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿ ಇರಬೇಕು ಎನ್ನುವುದು ನಮ್ಮ ಬಯಕೆ. ಇದಕ್ಕೆ ಬೇಕಾದ ಎಲ್ಲ ನೆರವನ್ನು ನಾವು ನೀಡಲಿದ್ದೇವೆಂದು ತಿಳಿಸಿದರು.”

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....