SSLC, ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

50

ಬೆಂಗಳೂರು:  ಅಂತಿಮ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು 2026ರ ಫೆಬ್ರವರಿ 28 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 17 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025-26ನೇ ಸಾಲಿನ ದ್ವಿತೀಯ PUC ಮತ್ತು SSLC ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಅಂತಿಮ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು 2026ರ ಫೆಬ್ರವರಿ 28 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 17 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ.

ದ್ವಿತೀಯ ಪಿಯುಸಿ ಪರೀಕ್ಷೆಯ ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು 2026ರ ಮಾರ್ಚ್ 18ರಂದು ಆರಂಭವಾಗಿ ಏಪ್ರಿಲ್ 2ರವರೆಗೆ ನಡೆಯುಲಿವೆ. 2026ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ. SSLC-PUC ಉತ್ತೀರ್ಣ ಅಂಕ ಇಳಿಕೆ ನಿರ್ಧಾರಕ್ಕೂ ಮುನ್ನ ಅಧ್ಯಯನ,

ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ (ನೋಟಿಸ್ ಬೋರ್ಡ್) ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ ಪರೀಕ್ಷಾ ಮಂಡಳಿ ತಿಳಿಸಿದೆ.

ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿ ಮಾರ್ಚ್ 18 (ಪ್ರಥಮ ಭಾಷೆ)- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ ಮಾರ್ಚ್ 23– ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ. ಮಾರ್ಚ್ 25 (ದ್ವಿತೀಯ ಭಾಷೆ)– ಇಂಗ್ಲೀಷ್, ಕನ್ನಡ ಮಾರ್ಚ್ 28– ಗಣಿತ, ಸಮಾಜಶಾಸ್ತ್ರ ಮಾರ್ಚ್ 30)ತೃತೀಯ ಭಾಷೆ)– ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ.

ಏಪ್ರಿಲ್ 01– ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರ್, ಎಲಿಮೆಂಟ್ಸ್ ಆಫ್ ಮೆಕ್ಯಾನಕಲ್ ಇಂಜಿನಿಯರ್, ಏಪ್ರಿಲ್ 2- ಸಮಾಜ ವಿಜ್ಞಾನ. ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಪ್ರಾಯೋಜಕತ್ವದಲ್ಲಿ 9 SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ! ಪಿಯುಸಿ ಪರೀಕ್ಷೆಯ ವೇಳಾಪಟ್ಟಿ 28-2-2026- ಕನ್ನಡ, ಅರಬಿಕ್ 2-3-26-ಭೂಗೋಳಶಾಸ್ತ್ರ, ಮನಶಾಸ್ತ್ರ, ಸಂಖ್ಯಾಶಾಸ್ತ್ರ. 3-3-26- ಇಂಗ್ಲೀಷ್.

4-3-26- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್. 5 -3-26- ಇತಿಹಾಸ. 6-3-26-ಭೌತಶಾಸ್ತ್ರ 7-3-26-ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ 9-3-26- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ. 10-3-26- ಅರ್ಥಶಾಸ್ತ್ರ. 11-3-26- ತರ್ಕಶಾಸತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹವಿಜ್ಞಾನ. 12-3-26-ಹಿಂದಿ. 13-3-26-ರಾಜ್ಯಶಾಸ್ತ್ರ. 14-3-26- ಲೆಕ್ಕಶಾಸ್ತ್ರ, ಗಣಿತ, 16-3-26- ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕವಿಜ್ಞಾನ. 17-3-26- ಹಿಂದೂಸ್ಥಾನಿ ಸಂಗೀತ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್ನೆಸ್.”

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...