ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಇಂದು 8ನೇ ದಿನಕ್ಕೆ ಕಾಲಿಟ್ಟಿದೆ.

46

ಬೆಳಗಾವಿ: ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂದು 8ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿ ಟನ್‌ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು 8 ನೇ ದಿನಕ್ಕೆ ಕಾಲಿಟ್ಟಿದೆ.

ಬೆಳಗಾವಿ ಜಿಲ್ಲೆಯ ಅಥಣಿ, ರಾಯಬಾಗ, ಬೆಳಗಾವಿ ಸೇರಿದಂತೆ ಎಲ್ಲಾ ಕಡೆಯೂ ಹೋರಾಟ ನಡೆಯುತ್ತಿದೆ. ರೈತರ ಕಿಚ್ಚು ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಸರ್ಕಾರ, ಹಿರಿಯ ಸಚಿವ ಹೆಚ್‌.ಕೆ ಪಾಟೀಲ್‌ರನ್ನು ನಿನ್ನೆ ಸಂಧಾನಕ್ಕೆ ಕಳುಹಿಸಿದ್ದು ಮಾತುಕತೆ ವಿಫಲವಾಗಿದೆ. ಸಿಎಂ ಸಿದ್ದರಾಮಯ್ಯ ಮಧ್ಯೆ ಪ್ರವೇಶಿಸಲಿ; ಪ್ರತಿ ಟನ್ ಕಬ್ಬಿಗೆ 3,500 ರೂ ದರ ನಿಗದಿ ಮಾಡಲಿ: ಬಸವರಾಜ ಬೊಮ್ಮಾಯಿ  ಸಂಧಾನ ವಿಫಲ ಆಗುತ್ತಿದ್ದಂತೆಯೇ ಸಚಿವರು ಕಾರು ಹತ್ತಿ ವಾಪಸ್ ಆಗುತ್ತಿದ್ದಾಗ ಅವರ ಕಾರಿನ ಮುಂದೆ ಮಲಗಿ, ಕಾರಿಗೆ ಗುದ್ದಿ ರೈತರು ಆಕ್ರೋಶ ಹೊರಹಾಕಿದ್ದಾರೆ.

ಬೇಕೇ ಬೇಕು ನ್ಯಾಯ ಬೇಕು ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಸಚಿವರ ಕಾರಿಗೆ ಮುತ್ತಿಗೆ ಹಾಕಿದ ರೈತರನ್ನು ಪೊಲೀಸರು ಎಳೆದು ಹಾಕುತ್ತಿದ್ದಂತೆಯೇ ತಳ್ಳಾಟ, ನೂಕಾಟವಾಯಿತು. ಸಿಎಂ ಜತೆ ಮಾತುಕತೆಗೆ ರೈತರ ನಕಾರ: ಇಂದು ಹೆದ್ದಾರಿ ಬಂದ್‌ ನಿನ್ನೆ ರೈತರ ಜೊತೆ ಸಂಧಾನಕ್ಕೆ ಬಂದಿದ್ದ ಸಚಿವ ಪಾಟೀಲ್‌, ಸಿಎಂ ಅವರ ಬಳಿ‌ ರೈತರ ನಿಯೋಗ ಕರೆದುಕೊಂಡು ಬನ್ನಿ ಎಂದು ಮನವಿ ಮಾಡಿದ್ದರು.

ಆದರೆ, ನೀವು 3,500 ರೂ. ಬೆಲೆ ನಿಗದಿ ಘೋಷಣೆಯ ನಿರ್ಧಾರ ಮಾಡಿ. ಇಂದು ಸಂಜೆ 7 ಗಂಟೆಯೊಳಗೆ ನಿರ್ಧಾರ ಮಾಡಿ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸಂಧಾನಕ್ಕೆ ಬಂದಿದ್ದ ಹೆಚ್‌ಕೆ ಪಾಟೀಲ್‌ ವಾಪಸ್ ಆಗಿದ್ದಾರೆ.

ಇಂದಿನಿಂದ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ರೈತರು, ನಾಳೆಯಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆ ಪ್ರತಿ ಟನ್ ಕಬ್ಬಿಗೆ 3,500 ರೂ. ನಿಗದಿಪಡಿಸಿ ಆದೇಶ ಹೊರಡಿಸಬೇಕು. ಕಬ್ಬಿನ ತೆರಿಗೆ ಹಣದಲ್ಲಿ ರೈತರಿಗೆ 1 ಸಾವಿರ ರೂ. ನೀಡಬೇಕು. ಕಬ್ಬಿನ ತೂಕದಲ್ಲಿ ಮೋಸ ಮಾಡುತ್ತಿರುವುದು ಬಂದ್ ಆಗಬೇಕು. ಸರ್ಕಾರವೇ ಸಕ್ಕರೆ ಕಾರ್ಖಾನೆ ಬಳಿ ತೂಕದ ಮೆಷಿನ್ ಇಡಬೇಕು.

ತೂಕ ಸೇರಿ ಪ್ರತಿಯೊಂದು ಮಾಹಿತಿ ಡಿಜಿಟಲೀಕರಣ ಮಾಡಬೇಕು. ಸಕ್ಕರೆ ಆಯುಕ್ತರ ಕಚೇರಿಗೆ 100 ಸಿಬ್ಬಂದಿ ನೇಮಕ‌ ಮಾಡಬೇಕು. ಇಂದು ಸಚಿವ ಸಂಪುಟ ಸಭೆ ಇದೆಲ್ಲದರ ನಡುವೆ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದೇ ಸಭೆಯಲ್ಲಿ ಸರ್ಕಾರ ಬೆಲೆ ನಿಗದಿ ಮಾಡುವ ಸಾಧ್ಯತೆ ಇದೆ. ಇಂದು ಸಂಜೆಯೊಳಗೆ ಸರ್ಕಾರ ರೈತರ ಬೇಡಿಕೆಗೆ ಒಪ್ಪಿಕೊಳ್ಳದಿದ್ದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ”

Leave a comment

Leave a Reply

Your email address will not be published. Required fields are marked *

Related Articles

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ...