ಬ್ಯಾಂಕ್ ಸಿಬ್ಬಂದಿಗಳಿಗೆ ಸ್ಥಳೀಯ ಭಾಷೆ ಚೆನ್ನಾಗಿ ತಿಳಿದಿರಬೇಕು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

41

ಮುಂಬಯಿ: ಇದರಿಂದ ಗ್ರಾಹಕರೊಂದಿಗೆ ಉತ್ತಮ ಸಂವಹನ ಸಾಧ್ಯವಾಗುತ್ತದೆ ಎಂದು ಪ್ರತಿಪಾದಿಸಿದ ಹಣಕಾಸು ಸಚಿವರು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸಲು, ಕೈಗಾರಿಕಾ ವಲಯಕ್ಕೆ ಸಾಲದ ಹರಿವನ್ನು ಹೆಚ್ಚಿಸುವುದು ಮುಖ್ಯ ಎಂದ ಸಚಿವರು ಬ್ಯಾಂಕ್‌ಗಳು ಸ್ಥಳೀಯ ಭಾಷೆ ಬಲ್ಲವರ ನೇಮಕಕ್ಕೆ ಒತ್ತು ನೀಡಬೇಕು ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಬ್ಯಾಂಕ್‌ ಸಿಬ್ಬಂದಿಗಳಿಗೆ ಸ್ಥಳೀಯ ಭಾಷೆ ಚೆನ್ನಾಗಿ ಗೊತ್ತಿರಬೇಕು. ಇದರಿಂದ ಗ್ರಾಹಕರೊಂದಿಗೆ ಸಂವಹನ ಸುಲಭವಾಗುತ್ತದೆ. ಹೀಗಾಗಿ ಸ್ಥಳೀಯ ಭಾಷೆ ಬಲ್ಲವರ ನೇಮಕಕ್ಕೆ ಒತ್ತು ನೀಡಬೇಕು ಎಂದು ಸ್ವತಃ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ದೃಢವಾಗಿ ಪ್ರತಿಪಾದಿಸಿದ್ದಾರೆ. ಬ್ಯಾಂಕಿಂಗ್‌ ವಲಯಕ್ಕೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು.

”ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ದೊಡ್ಡ ಬದಲಾವಣೆ ಆಗಬೇಕಾಗಿದೆ. ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯ ಭಾಷೆ ಮಾತನಾಡುವವರಿಗೆ ಹೆಚ್ಚು ಪ್ರಾಧಾನ್ಯತೆ ನೀಡಬೇಕು,” ಎಂದು ಕೇಂದ್ರ ಹಣಕಾಸು ಸಚಿವರು ಹೇಳಿದ್ದಾರೆ.

”ಯಾವುದೇ ಶಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಅಲ್ಲಿನ ಗ್ರಾಹಕರನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಭಾಷೆಯಲ್ಲಿ ಮಾತನಾಡಬೇಕು. ಸಂವಹನದಲ್ಲಿ ತೊಡಕು ಉಂಟಾದರೆ ಗ್ರಾಹಕರೊಂದಿಗೆ ಯೋಗ್ಯ ಸಂಪರ್ಕವೇ ಏರ್ಪಡುವುದಿಲ್ಲ,” ಎಂದು ಅಭಿಪ್ರಾಯಪಟ್ಟ ನಿರ್ಮಲಾ ಸೀತಾರಾಮನ್‌, “ಬ್ಯಾಂಕ್‌ಗಳು ತಮ್ಮ ಸಿಬ್ಬಂದಿಗಳ ದಕ್ಷತೆಯನ್ನು ಮಾಪನ ಮಾಡುವಾಗ ಸ್ಥಳೀಯ ಭಾಷೆ ತಿಳಿವಿನ ಮಾನದಂಡವನ್ನು ನಾನು ಬಲವಾಗಿ ಬೆಂಬಲಿಸುವೆ,” ಎಂದು ತಿಳಿಸಿದ್ದಾರೆ.

ಶೀಘ್ರದಲ್ಲೇ ಬ್ಯಾಂಕ್‌ಗಳ ಮೆಗಾ ವಿಲೀನ; 4 ಪ್ರಮುಖ ಬ್ಯಾಂಕ್‌ಗಳು ಬಂದ್‌, ಮೋದಿ ಸರ್ಕಾರದ ಬಿಗ್‌ ನಿರ್ಧಾರ! ಯಾವೆಲ್ಲಾ ಮರ್ಜ್‌? “ಬ್ಯಾಂಕ್‌ನ ಮೇಲಧಿಕಾರಿಗಳಿಗೆ ಸ್ಥಳೀಯ ಭಾಷೆ ಗೊತ್ತಿಲ್ಲದೇ ಇದ್ದಾಗ ಶಾಖೆಯ ಮಟ್ಟದ ಅಧಿಕಾರಿಗಳು ಸಂವಹನ ನಡೆಸುವಷ್ಟು ಸಾಮರ್ಥ್ಯವನ್ನು ಹೊಂದಿರಬೇಕು,” ಎಂದು ಹಣಕಾಸು ಸಚಿವರು ಪ್ರತಿಪಾದಿಸಿದ್ದಾರೆ. ದೇಶಕ್ಕೆ ವಿಶ್ವದರ್ಜೆಯ ಬ್ಯಾಂಕ್‌ ಅಗತ್ಯ ಇದೇ ವೇಳೆ ಅವರು, “ದೇಶದಲ್ಲಿ ದೊಡ್ಡ ಹಾಗೂ ವಿಶ್ವ ದರ್ಜೆಯ ಬ್ಯಾಂಕ್‌ಗಳ ಅಗತ್ಯವಿದೆ.

ಇದಕ್ಕೆ ಸಂಬಂಧಿಸಿದಂತೆ ನಾವು ಹೇಗೆ ಮುಂದಡಿ ಇಡಬೇಕು ಎಂಬುದರ ಕುರಿತು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಜತೆ ಮಾತುಕತೆ ನಡೆಸುತ್ತಿದ್ದೇವೆ,” ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಈ ಮೂಲಕ ಮತ್ತೊಂದು ಸುತ್ತಿನ ಬ್ಯಾಂಕ್‌ಗಳ ವಿಲೀನದ ಸುಳಿವು ನೀಡಿದ್ದಾರೆ. ”ಭಾರತದ ಆರ್ಥಿಕ ಪಯಣ ಈಗ ಹೊಸ ತಿರುವು ಪಡೆಯುತ್ತಿದೆ. ಹೆಚ್ಚುತ್ತಿರುವ ನಿರೀಕ್ಷೆಗಳು ಮತ್ತು ತ್ವರಿತ ಅಭಿವೃದ್ಧಿಯೊಂದಿಗೆ ದೇಶದ ಬ್ಯಾಂಕಿಂಗ್‌ ವ್ಯವಸ್ಥೆಯನ್ನು ಬಲಪಡಿಸುವುದು ಅತ್ಯಗತ್ಯ.

ಕೈಗಾರಿಕಾ ವಲಯಕ್ಕೆ ಸಾಲದ ಹರಿವನ್ನು ಹೆಚ್ಚಿಸಬೇಕು. ನಾವು ಅನೇಕ ಸ್ವಾವಲಂಬಿ ಅಭ್ಯಾಸಗಳನ್ನು ಹೊಂದಿದ್ದೇವೆ. ಇವುಗಳನ್ನು ಅನುಸರಿಸಬೇಕು,” ಎಂದು ಬ್ಯಾಂಕ್‌ ಹಾಗೂ ಹಣಕಾಸು ಸಂಸ್ಥೆಗಳಿಗೆ ಕೇಂದ್ರ ಹಣಕಾಸು ಸಚಿವರು ಇದೇ ಸಂದರ್ಭದಲ್ಲಿ ಕರೆ ನೀಡಿದ್ದಾರೆ. ”2047ರ ವೇಳೆಗೆ ವಿಕಸಿತ ಭಾರತದ ಕನಸನ್ನು ನನಸು ಮಾಡುವುದಕ್ಕೆ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳು ಪ್ರಮುಖ ಆಧಾರ ಸ್ತಂಭಗಳಲ್ಲಿ ಒಂದಾಗಿವೆ,” ಎಂದು ನಿರ್ಮಲಾ ಸೀತಾರಾಮನ್‌ ಅವರು ಬಣ್ಣಿಸಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ತುಳುನಾಡು ಪ್ರಾಪರ್ಟೀಸ್ ಉದ್ಯಮಿ ಉದಯ ಕೆ ಶೆಟ್ಟಿ ಹಿರಿಯಡ್ಕರಿಗೆ ಅಟಲ್ ಭಾರತ್ ಗೌರವ ಸಮ್ಮಾನ್ ಪ್ರಶಸ್ತಿ

ಅಟಲ್ ಭಾರತ್ ಗೌರವ ಸಮ್ಮಾನ್ – ಇದು ಭಾರತದ ಶ್ರೇಷ್ಠ ರಾಷ್ಟ್ರೀಯ ಗೌರವಗಳಲ್ಲಿ ಒಂದು! ಅವಾರ್ಡ್ಸ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...