ಗ್ರೇಟರ್‌ ಮೈಸೂರು ಪ್ರಸ್ತಾವದ ಬೆನ್ನಲ್ಲೇ ಮೈಸೂರು ಮಹಾನಗರ ಪಾಲಿಕೆ ಮತ್ತೆ ಇ-ಖಾತೆ ಅಭಿಯಾನ ಆರಂಭ

56

ಮೈಸೂರು:ಮೈಸೂರು ಮಹಾ ನಗರ ಪಾಲಿಕೆ ಈಗಾಗಲೇ ಇ-ಖಾತೆ ನೀಡುವಲ್ಲಿ ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿದ್ದು, ಶೇ.100ರಷ್ಟು ಗುರಿಯ ಸಾಧನೆಕ್ಕಾಗಿ ಮುಂದಿನ ವಾರದಿಂದ ವಲಯವಾರು ಅಭಿಯಾನವನ್ನು ಆರಂಭಿಸಲು ಉದ್ದೇಶಿಸಿದೆ. ಸಭೆಗಳಲ್ಲಿ ಚುನಾಯಿತ ಪ್ರತಿನಿಧಿಗಳ ನೇತೃತ್ವದಲ್ಲಿ ಜಾಗೃತಿ ಮೂಡಿಸುವ ಮೂಲಕ ಇ-ಖಾತೆ ಕೊಡುವ ಪ್ರಮಾಣ ಹೆಚ್ಚಿಸುವ ಪ್ರಯತ್ನಗಳು ನಡೆಯುತ್ತವೆ. ಮೈಸೂರು ನಗರದ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2,27,893 ಆಸ್ತಿಗಳನ್ನು ಹೊಂದಿದ್ದು, ಶಾಸನಾರೂಪದಲ್ಲಿ ನೀಡುತ್ತಿರುವ ಇ-ಖಾತೆಗಳ ಸಂಖ್ಯೆಯನ್ನು ಹೆಚ್ಚಿಸಲು ಕಾರ್ಯಾಚರಣೆ ಆರಂಭಿಸಲಾಗಿದೆ.

   ಗ್ರೇಟರ್‌ ಮೈಸೂರು ಪ್ರಸ್ತಾವನೆಯ ಬೆನ್ನ ಹಿಂದೆಯೇ ಮೈಸೂರು ಮಹಾ ನಗರ ಪಾಲಿಕೆ ಮತ್ತೆ ಇ-ಖಾತೆ ಅಭಿಯಾನವನ್ನು ಆರಂಭಿಸಿದೆ. ಈಗಾಗಲೇ ಇ-ಖಾತೆ ನೀಡುವಲ್ಲಿ ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿರುವ ಪಾಲಿಕೆಯೂ ಶೇ.100ರಷ್ಟು ಗುರಿ ಸಾಧಿಸಲು ಮುಂದಿನ ವಾರದಿಂದ ವಲಯವಾರು ಅಭಿಯಾನ ನಡೆಸಲು ನಿರ್ಧರಿಸಿದೆ.

ಪಾಲಿಕೆ ವ್ಯಾಪ್ತಿಯ ಪ್ರತಿ ವಾರ್ಡ್‌ಗಳಲ್ಲಿಯೂ ಚುನಾಯಿತ ಪ್ರತಿನಿಧಿಗಳ ನೇತೃತ್ವದಲ್ಲಿ ಜಾಗೃತಿ ಸಭೆಗಳನ್ನು ನಡೆಸಿ, ಈ ಮೂಲಕ ಶೇ.100ರಷ್ಟು ಗುರಿ ಸಾಧಿಸಲು ಕ್ರಮ ವಹಿಸಲಾಗಿದೆ ಎನ್ನುತ್ತಾರೆ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತ ಸೋಮಶೇಖರ್‌ ಜಿಗಣಿ.

ಮೈಸೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2,27,893 ಆಸ್ತಿಗಳಿದ್ದು, ಅದರಲ್ಲಿ ಅತಿ ಹೆಚ್ಚು ಎ-ಖಾತೆ ನೀಡುವ ಪಟ್ಟಿಯಲ್ಲಿದ್ದರೆ, ರೆವಿನ್ಯೂ ಬಡಾವಣೆಗಳಲ್ಲಿ ಇರುವ ಆಸ್ತಿಯೂ ಬಿ ಖಾತೆ ನೀಡುವ ಪಟ್ಟಿಯಲ್ಲಿವೆ. ಸರಕಾರದ ಆದೇಶದಂತೆ ಮೈಸೂರು ನಗರದ ಇ-ಖಾತೆ ನೀಡಲು ವಿಶೇಷ ಅಭಿಯಾನದೊಂದಿಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದ ಪಾಲಿಕೆ ಅಧಿಕಾರಿಗಳು, ಅತಿ ಹೆಚ್ಚು ಇ-ಖಾತೆಯನ್ನು ನೀಡುವ ಮೂಲಕ ಮೈಸೂರನ್ನು ರಾಜ್ಯದ ಮೊದಲನೇ ಸ್ಥಾನಕ್ಕೆ ತಂದಿದ್ದರು.

ಜಾತಿ ಸಮೀಕ್ಷೆಯಿಂದಾಗಿ ಇಡೀ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರಿಂದ ಅಭಿಯಾನ ನಡೆಸಲು ಸಾಧ್ಯವಾಗಿರಲಿಲ್ಲ. ಈಗ ಮತ್ತೇ ಇ-ಖಾತೆ ಸಂಬಂಧ ಅಭಿಯಾನ ನಡೆಸಲು ನಿರ್ಧರಿಸಿರುವ ಪಾಲಿಕೆ ಉಪ ಆಯುಕ್ತ ಸೋಮಶೇಖರ್‌ ಜಿಗಣಿ ಅವರು, ಮುಂದಿನ ಶುಕ್ರವಾರದಿಂದ ಪ್ರತಿ ವಲಯವಾರು ಅಭಿಯಾನ ನಡೆಸಲು ನಿರ್ಧರಿಸಿದ್ದು, ಪ್ರತಿಯೊಂದು ವಲಯಕ್ಕೂ ಸಹ ಒಬ್ಬರು ಅಧಿಕಾರಿಯನ್ನು ನಿಯೋಜಿಸಿದ್ದಾರೆ.

ಅಭಿಯಾನ ಆಯಾ ವಲಯ ಕಚೇರಿಯಲ್ಲಿಯೇ ನಡೆಯಲಿದೆ. ಇ-ಖಾತೆ ನೀಡುವ ಸಂಬಂಧ ಎಲ್ಲಅಧಿಕಾರಿಗಳು ಮತ್ತು ಸಿಬ್ಬಂದಿ ವಲಯ ಕಚೇರಿಯಲ್ಲಿಯೇ ಇದ್ದು, ಸಾರ್ವಜನಿಕರಿಂದ ಬರುವ ಇ-ಖಾತೆ ಅರ್ಜಿಗಳನ್ನು ಸ್ವೀಕರಿಸಿ, ಮೂರ್ನಾಲ್ಕು ದಿನಗಳಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಗ್ಯಾರೆಂಟಿ ಯೋಜನೆ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ಮೂಕಾಂಬಿಕಾ ತಾಯಿಯ ದರ್ಶನ ಪಡೆದ ಉದ್ಯಮಿ ಅನಂತ ಅಂಬಾನಿ

“ಉಡುಪಿ: ಸದ್ದು ಗದ್ದಲವಿಲ್ಲದೆ ದೇಶದ ಪ್ರತಿಷ್ಠಿತ ಉದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಂಬಾನಿ ಕುಟುಂಬದ ಅನಂತ ಅಂಬಾನಿ...