ಸ್ಥಳೀಯ ಬಸ್ ಆಗಿರಲಿ ಅಥವಾ ಐಷಾರಾಮಿ ಬಸ್ ಆಗಿರಲಿ, ತುರ್ತು ನಿರ್ಗಮನ ದ್ವಾರ ಕಡ್ಡಾಯ

51

ಬೆಂಗಳೂರು: ರಾಜ್ಯಾದ್ಯಂತ ನೋಂದಣಿ ಅರ್ಜಿಗಳು ಹೆಚ್ಚಾಗುತ್ತಿದ್ದು, ಅದರಲ್ಲಿ ಸುಮಾರು ಶೇ. 50ರಷ್ಟು ಹೊಸ ನೋಂದಣಿ ಅರ್ಜಿಗಳಾಗಿವೆ 2025-26ನೇ ಸಾಲಿನಲ್ಲಿ ಇಲಾಖೆಗೆ 14,457.73 ಕೋಟಿ ರೂ. ಆದಾಯ ಸಂಗ್ರಹದ ಗುರಿಯನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ 

ರಾಜ್ಯದಾದ್ಯಂತ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (ಆರ್‌ಟಿಒ) ಬಾಕಿ ಇರುವ ಎಲ್ಲಾ ವಾಹನ ನೋಂದಣಿ ಅರ್ಜಿಗಳನ್ನು ನವೆಂಬರ್ 30ರೊಳಗೆ ಪರಿಶೀಲಿಸಿ ವಿಲೇವಾರಿ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ರಾಜ್ಯಾದ್ಯಂತ ನೋಂದಣಿ ಅರ್ಜಿಗಳು ಹೆಚ್ಚಾಗುತ್ತಿದ್ದು, ಅದರಲ್ಲಿ ಸುಮಾರು ಶೇ. 50ರಷ್ಟು ಹೊಸ ನೋಂದಣಿ ಅರ್ಜಿಗಳಾಗಿವೆ ಎಂದು ಸಭೆಯಲ್ಲಿ ಗಮನಿಸಲಾಯಿತು. ಸಾರಿಗೆ ಇಲಾಖೆಯ ದತ್ತಾಂಶಗಳ ಡಿಜಿಟಲೀಕರಣದ ಸಂದರ್ಭದಲ್ಲಿ ಉಂಟಾದ ದೋಷಗಳು ಮತ್ತು ತಂತ್ರಾಂಶದ ಸಮಸ್ಯೆಯಿಂದಾಗಿ ಪ್ರಕರಣಗಳು ಬಾಕಿ ಉಳಿದಿವೆ, ಇಲಾಖೆಯು ಅದನ್ನು ಸರಿಪಡಿಸಲು ಕೆಲಸ ಮಾಡುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಸುರಕ್ಷತಾ ಕ್ರಮಗಳಿಗೆ ಒತ್ತು ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ತುರ್ತು ನಿರ್ಗಮನ ದ್ವಾರಗಳನ್ನು ಅಳವಡಿಸಿರುವುದನ್ನು ಖಚಿತಪಡಿಸಿಕೊಂಡ ನಂತರವೇ ಫಿಟ್ನೆಸ್ ಪ್ರಮಾಣಪತ್ರಗಳನ್ನು (ಎಫ್‌ಸಿ) ನೀಡುವಂತೆ ಸಚಿವರು ಅಧಿಕಾರಿಗಳಿಗೆ ಆದೇಶಿಸಿದರು. “ಅದು ಸ್ಥಳೀಯ ಬಸ್ ಆಗಿರಲಿ ಅಥವಾ ಐಷಾರಾಮಿ ಬಸ್ ಆಗಿರಲಿ, ತುರ್ತು ನಿರ್ಗಮನ ದ್ವಾರ ಕಡ್ಡಾಯವಾಗಿದೆ. ಅನೇಕ ಬಸ್‌ಗಳಲ್ಲಿ ತುರ್ತು ನಿರ್ಗಮನಕ್ಕಾಗಿ ಕಿಟಕಿಗಳನ್ನು ಮಾತ್ರ ಅಳವಡಿಸಲಾಗಿದೆ. ಅದು ಸಾಕಾಗುವುದಿಲ್ಲ.

ಮಕ್ಕಳು ಮತ್ತು ವೃದ್ಧರು ಅವುಗಳನ್ನು ಹೇಗೆ ಬಳಸುತ್ತಾರೆ? ಇದನ್ನು ಗಮನದಲ್ಲಿಟ್ಟುಕೊಂಡು, ನಾವು ತುರ್ತು ನಿರ್ಗಮನ ದ್ವಾರವನ್ನು ಕಡ್ಡಾಯಗೊಳಿಸಿದ್ದೇವೆ. ವಾಹನವು ಯಾವಾಗ ನೋಂದಣಿಯಾಗಿದೆ ಎಂಬುದು ಮುಖ್ಯವಲ್ಲ, ಕರ್ನಾಟಕದಲ್ಲಿ ಸಂಚರಿಸಬೇಕಾದರೆ, ನಮ್ಮ ನಿಯಮಗಳು ಮತ್ತು ಸುರಕ್ಷತಾ ಮಾನದಂಡಗಳನ್ನು ಪಾಲಿಸಲೇಬೇಕು,” ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಸಾರ್ವಜನಿಕ ಬಳಕೆಯ ಬಸ್‌ಗಳಲ್ಲಿ ಮಿತಿಮೀರಿದ ಹಾಗೂ ವಾಣಿಜ್ಯ ಸರಕುಗಳನ್ನು ಸಾಗಿಸುವುದರ ವಿರುದ್ಧವೂ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

ತೆರಿಗೆ ಸಂಗ್ರಹ ಮತ್ತು ಶಾಲಾ ವಾಹನಗಳ ತಪಾಸಣೆ ಅಖಿಲ ಭಾರತ ಪ್ರವಾಸಿ ಪರವಾನಗಿ ಹೊಂದಿರುವ ಬಸ್‌ಗಳಿಂದ ಕರ್ನಾಟಕ ರಾಜ್ಯ ತೆರಿಗೆಯನ್ನು ಕಡ್ಡಾಯವಾಗಿ ಸಂಗ್ರಹಿಸುವಂತೆ ರಾಜ್ಯದಾದ್ಯಂತದ ಅಧಿಕಾರಿಗಳಿಗೆ ಸೂಚಿಸಲಾಗಿದೆ

ಶಾಲಾ ವಾಹನಗಳ ಮಾಸಿಕ ತಪಾಸಣೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸಾರಿಗೆ ಆಯುಕ್ತರಿಗೆ ಸಚಿವರು ಸೂಚಿಸಿದರು. ಈ ಆರ್ಥಿಕ ವರ್ಷದಲ್ಲಿ ಇಲ್ಲಿಯವರೆಗೆ ಸಾರಿಗೆ ಇಲಾಖೆಯು 7451.45 ಕೋಟಿ ರೂ. ಆದಾಯ ಗಳಿಸಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. 2025-26ನೇ ಸಾಲಿನಲ್ಲಿ ಇಲಾಖೆಗೆ 14,457.73 ಕೋಟಿ ರೂ. ಆದಾಯ ಸಂಗ್ರಹದ ಗುರಿಯನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ.”

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....