ಬೆಂಗಳೂರು ಮತ್ತು ಮೈಸೂರು ನಡುವೆ ವಿಶೇಷ ಮೆಮು ರೈಲುಗಳ ಸಂಚಾರ

53

 ಬೆಂಗಳೂರು: ಕೆಎಸ್‌ಆರ್ ಬೆಂಗಳೂರು ಮತ್ತು ಅಶೋಕಪುರಂ (ಮೈಸೂರು) ನಡುವೆ ಮೀಸಲಾತಿ ರಹಿತ ವಿಶೇಷ ಮೆಮು ರೈಲು ಓಡಾಟ ಈ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಮಧ್ಯಾಹ್ನ 12.15ಕ್ಕೆ ಹೊರಟು, ಮೈಸೂರಿನ ಅಶೋಕಪುರಂ ನಿಲ್ದಾಣಕ್ಕೆ ಸಂಜೆ 3.40ಕ್ಕೆ ತಲುಪಲಿದೆ. ಬ್ಯಾಡರಹಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ನಾಗನಹಳ್ಳಿ, ಮೈಸೂರು ಮತ್ತು ಚಾಮರಾಜಪುರಂ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ.

ವಾರಾಂತ್ಯದ ಪ್ರಯಾಣಿಕರ ದಟ್ಟಣೆ ಹಾಗೂ ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯದಲ್ಲಿ ನಡೆಯಲಿರುವ ಶ್ರೀ ಸತ್ಯ ಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಗಳ ಹಿನ್ನೆಲೆಯಲ್ಲಿ, ನೈಋತ್ಯ ರೈಲ್ವೆ , ಕೆಎಸ್‌ಆರ್ ಬೆಂಗಳೂರು ಮತ್ತು ಅಶೋಕಪುರಂ (ಮೈಸೂರು) ನಡುವೆ ಮೀಸಲಾತಿ ರಹಿತ ವಿಶೇಷ ಮೆಮು ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳು ನವೆಂಬರ್ 14 ರಿಂದ ಡಿಸೆಂಬರ್ 28 ರವರೆಗೆ ಪ್ರತಿ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಸಂಚರಿಸಲಿವೆ.

ಆದರೆ, ನವೆಂಬರ್ 21, 22 ಮತ್ತು 23 ರಂದು ಈ ರೈಲುಗಳ ಸೇವೆ ಲಭ್ಯವಿರುವುದಿಲ್ಲ ಎಂದು ನೈಋತ್ಯ ರೈಲ್ವೆ ಸ್ಪಷ್ಟಪಡಿಸಿದೆ. ರೈಲಿನ ವೇಳಾಪಟ್ಟಿ ರೈಲು ಸಂಖ್ಯೆ 06213: ಈ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಮಧ್ಯಾಹ್ನ 12.15ಕ್ಕೆ ಹೊರಟು, ಮೈಸೂರಿನ ಅಶೋಕಪುರಂ ನಿಲ್ದಾಣಕ್ಕೆ ಸಂಜೆ 3.40ಕ್ಕೆ ತಲುಪಲಿದೆ. ರೈಲು ಸಂಖ್ಯೆ 06214: ಈ ರೈಲು ಅಶೋಕಪುರಂನಿಂದ ಸಂಜೆ 4.10ಕ್ಕೆ ಹೊರಟು, ಕೆಎಸ್‌ಆರ್ ಬೆಂಗಳೂರು ನಿಲ್ದಾಣವನ್ನು ರಾತ್ರಿ 8 ಗಂಟೆಗೆ ತಲುಪಲಿದೆ.

ರೈಲಿನ ನಿಲುಗಡೆಗಳು ಈ ವಿಶೇಷ ಮೆಮು ರೈಲುಗಳು ಕೃಷ್ಣದೇವರಾಯ , ನಾಯಂಡಹಳ್ಳಿ, ಜ್ಞಾನಭಾರತಿ , ಕೆಂಗೇರಿ, ಹೆಜ್ಜಾಲ, ಬಿಡದಿ, ಕೇತೋಹಳ್ಳಿ, ರಾಮನಗರ, ಚನ್ನಪಟ್ಟಣ, ಶೆಟ್ಟಿಹಳ್ಳಿ, ನಿಡಘಟ್ಟ , ಮದ್ದೂರು, ಹನಕೆರೆ, ಮಂಡ್ಯ, ಯಲಿಯೂರು, ಬ್ಯಾಡರಹಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ನಾಗನಹಳ್ಳಿ, ಮೈಸೂರು ಮತ್ತು ಚಾಮರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ.”

Leave a comment

Leave a Reply

Your email address will not be published. Required fields are marked *

Related Articles

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ...