‘ಪಿಎಂ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯ 21ನೇ  ಕಂತಿನ ಹಣ ಬಿಡುಗಡೆ

36

ಹೊಸದಿಲ್ಲಿ: ನವೆಂಬರ್ 19, 2025 ರಂದು ಪ್ರಧಾನಿ ಮೋದಿಯವರಿಂದ ಪಿಎಂ-ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಕೇಂದ್ರ ಸರ್ಕಾರದ ಈ ಯೋಜನೆಯಡಿ, ಅರ್ಹ ರೈತರಿಗೆ ವಾರ್ಷಿಕವಾಗಿ ₹6,000 ಆರ್ಥಿಕ ನೆರವು ಇಲ್ಲಿಯವರೆಗೆ 20 ಕಂತುಗಳ ಮೂಲಕ 11 ಕೋಟಿಗೂ ಹೆಚ್ಚು ರೈತ ಕುಟುಂಬಗಳಿಗೆ 3.70 ಲಕ್ಷ ಕೋಟಿ ವಿತರಣೆ ರೈತರ ಅನುಕೂಲಕ್ಕಾಗಿ ‘ಕೃಷಿಕರ ನೋಂದಣಿ’ ಎಂಬ ಹೊಸ ಡೇಟಾಬೇಸ್ ರಚಿಸಲು ಮುಂದಾಗಿದೆ ಕೃಷಿ ಸಚಿವಾಲಯ ಸದ್ಯದಲ್ಲೇ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿಯ 21ನೇ ಕಂತಿನ ಹಣ ಬಿಡುಗಡೆಯಾಗಲಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ (ಪಿಎಂ-ಕಿಸಾನ್) ಯೋಜನೆಯ 21ನೇ ಕಂತಿನ ಹಣವನ್ನು ಇದೇ ನವೆಂಬರ್ 19ರಂದು ಬಿಡುಗಡೆ ಮಾಡಲಿದ್ದಾರೆ ಎಂದು ಕೃಷಿ ಸಚಿವಾಲಯ ಶುಕ್ರವಾರ ಖಚಿತಪಡಿಸಿದೆ . ಈ ಯೋಜನೆಯ ಮೂಲಕ ದೇಶದ ಕೋಟ್ಯಂತರ ಅರ್ಹ ರೈತರಿಗೆ ವಾರ್ಷಿಕವಾಗಿ 6,000 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ – ಕಿಸಾನ್ ಅನ್ನು 2019ರ ಫೆಬ್ರವರಿ 24ರಂದು ಆರಂಭಿಸಲಾಯಿತು. ಈ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ದೇಶದ 11 ಕೋಟಿಗೂ ಅಧಿಕ ರೈತ ಕುಟುಂಬಗಳಿಗೆ 20 ಕಂತುಗಳಲ್ಲಿ ಒಟ್ಟು 3.70 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ.

ಈ ಹಣವು ರೈತರಿಗೆ ಕೃಷಿ ಪರಿಕರಗಳನ್ನು ಖರೀದಿಸಲು, ಮಕ್ಕಳ ಶಿಕ್ಷಣ, ವೈದ್ಯಕೀಯ ವೆಚ್ಚಗಳು ಮತ್ತು ಮದುವೆಯಂತಹ ಇತರ ಖರ್ಚುಗಳನ್ನು ನಿಭಾಯಿಸಲು ನೆರವಾಗಿದೆ. Union Budget 2025: ರೈತರಿಗೆ ಗುಡ್‌ನ್ಯೂಸ್‌ ನೀಡ್ತಾರಾ ನಿರ್ಮಲಾ ಸೀತಾರಾಮನ್‌? ಕಿಸಾನ್‌ ಸಮ್ಮಾನ್‌ ನಿಧಿ 12 ಸಾವಿರ ರೂ.ಗೆ ಏರಿಕೆ ಸಾಧ್ಯತೆ? ಪಿಎಂ-ಕಿಸಾನ್ ಪೋರ್ಟಲ್‌ನಲ್ಲಿ ತಮ್ಮ ಜಮೀನಿನ ವಿವರಗಳನ್ನು ದಾಖಲಿಸಿದ ಹಾಗೂ ಆಧಾರ್‌ನೊಂದಿಗೆ ಬ್ಯಾಂಕ್ ಖಾತೆಗಳನ್ನು ಜೋಡಣೆ ಮಾಡಿದ ರೈತರಿಗೆ ಮಾತ್ರ ಈ ಯೋಜನೆಯ ಪ್ರಯೋಜನಗಳು ದೊರೆಯುತ್ತಿವೆ.

ಅರ್ಹ ರೈತರನ್ನು ಗುರುತಿಸಿ ಯೋಜನೆಯಡಿ ಸೇರಿಸಲು ಕೇಂದ್ರ ಸರ್ಕಾರವು ಕಾಲಕಾಲಕ್ಕೆ ಗ್ರಾಮ ಮಟ್ಟದಲ್ಲಿ ವಿಶೇಷ ಅಭಿಯಾನಗಳನ್ನು ನಡೆಸುತ್ತಿದೆ. 2019ರಲ್ಲಿ ‘ಅಂತಾರಾಷ್ಟ್ರೀಯ ಆಹಾರ ನೀತಿ ಸಂಶೋಧನಾ ಸಂಸ್ಥೆ’ (ಐಎಫ್‌ಪಿಆರ್‌ಐ) ನಡೆಸಿದ ಅಧ್ಯಯನದ ಪ್ರಕಾರ, ಪಿಎಂ-ಕಿಸಾನ್ ಯೋಜನೆಯಡಿ ವಿತರಿಸಲಾದ ಹಣವು ಗ್ರಾಮೀಣ ಆರ್ಥಿಕ ಬೆಳವಣಿಗೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಿದೆ.

ಇದು ರೈತರ ಮೇಲಿನ ಸಾಲದ ಹೊರೆಯನ್ನು ಕಡಿಮೆ ಮಾಡಲು ಮತ್ತು ಕೃಷಿ ಪರಿಕರಗಳಲ್ಲಿ ಹೂಡಿಕೆ ಹೆಚ್ಚಿಸಲು ಸಹಾಯ ಮಾಡಿದೆ ಎಂದು ಅಧ್ಯಯನವು ತಿಳಿಸಿದೆ ಸರ್ಕಾರಿ ಯೋಜನೆಗಳ ಪ್ರಯೋಜನಗಳು ಕಟ್ಟಕಡೆಯ ರೈತನಿಗೂ ತಲುಪಬೇಕು ಎಂಬುದು ಕೇಂದ್ರ ಸರ್ಕಾರದ ಮುಖ್ಯ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ, ಕೃಷಿ ಸಚಿವಾಲಯವು ‘ಕೃಷಿಕರ ನೋಂದಣಿ’ ಎಂಬ ಹೊಸ ವ್ಯವಸ್ಥೆಯನ್ನು ರಚಿಸಲು ಮುಂದಾಗಿದೆ. ಇದರ ಅಡಿಯಲ್ಲಿ ಸುಸಂಘಟಿತ ಡೇಟಾಬೇಸ್ ರಚಿಸಲು ಹೊರಟಿದ್ದು, ಇದರ ಮೂಲಕ ರೈತರು ಕಲ್ಯಾಣ ಯೋಜನೆಗಳನ್ನು ಸುಲಭವಾಗಿ ಪಡೆಯಲು ಸಾಧ್ಯವಾಗಲಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ .”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...