ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿನೆಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಕೆ

44

ಬೆಂಗಳೂರು: 114ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಶುಕ್ರವಾರ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ ಮಹಾನ್ ಪರಿಸರ ಪ್ರೇಮಿಗೆ ಅಂತಿಮ ನಮನ ಸಲ್ಲಿಸಿದ ತರುವಾಯ ಮಾತನಾಡಿದ ಅವರು, ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಬೆಳೆಸಿ ವಿಶ್ವಕ್ಕೇ ವೃಕ್ಷಗಳ ಮಹತ್ವ ಸಾರಿದ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ಸಸಿನೆಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಲಿದೆ ಎಂದರು.

ಮರಗಳಲ್ಲೇ ಮಕ್ಕಳನ್ನು ಕಂಡ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ; ಅನಾಥವಾಯ್ತು ಪರಿಸರ ಲೋಕ! ಇಲಾಖೆ ಅವರನ್ನು ಪರಿಸರ ರಾಯಭಾರಿಯಾಗಿ ಪುರಸ್ಕರಿಸಿತ್ತು. ಅಜ್ಜಿಯ ಪ್ರೇರಣೆಯಿಂದ ನೂರಾರು ಜನರು ತಮ್ಮ ಕೈಲಾದಷ್ಟು ಸಸಿ ನೆಟ್ಟು ಪೋಷಿಸುತ್ತಿದ್ದಾರೆ.

ಲಕ್ಷಾಂತರ ಪರಿಸರ ಪ್ರೇಮಿಗಳಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕ ಅವರ ನಿಧನದಿಂದ ರಾಜ್ಯ ನಿಷ್ಠಾವಂತ ಪರಿಸರ ಕಾಳಜಿಯ ಮಹಾಜೀವಿಯನ್ನು ಕಳೆದುಕೊಂಡಿದೆ ಎಂದು ದುಃಖ ವ್ಯಕ್ತಪಡಿಸಿದರು.

ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಈಶ್ವರ ಬಿ ಖಂಡ್ರೆ ತಿಳಿಸಿದರು 19 ಜಿಂಕೆ ಸಾವು ತನಿಖೆಗೆ ಈಶ್ವರ ಖಂಡ್ರೆ ಆದೇಶ ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....