ಬೆಂಗಳೂರು ಟೆಕ್ ಸಮ್ಮಿಟ್ 2025’ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

55

ಬೆಂಗಳೂರು: ಐಟಿ-ಬಿಟಿ ಇಲಾಖೆ ವತಿಯಿಂದ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ(ಬಿಇಐಸಿ) ಆಯೋಜಿಸಲಾಗಿರುವ ಏಷ್ಯಾದ ಅತಿದೊಡ್ಡ ಟೆಕ್ ಸಮ್ಮಿಟ್ ‘ಬೆಂಗಳೂರು ಟೆಕ್ ಸಮ್ಮಿಟ್ 2025’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಐಟಿ, ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡ ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ್ದ ತಂತ್ರಜ್ಞಾನ ವಲಯದ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ 28ನೇ ಆವೃತ್ತಿಯ ಟೆಕ್ ಸಮ್ಮಿಟ್‌ನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಡೀಪ್ ಟೆಕ್, ಎಐ, ಸೆಮಿಕಾನ್, ಡಿಜಿ-ಆರೋಗ್ಯ ಮತ್ತು ಜೈವಿಕ ತಂತ್ರಜ್ಞಾನ, ನವೋದ್ಯಮ ಪರಿಸರ, ರಕ್ಷಣೆ ಮತ್ತು ಬಾಹ್ಯಾಕಾಶ ಹೀಗೆ 9 ವಿಭಿನ್ನ ಪರಿಕಲ್ಪನೆಗಳ ಅಡಿಯಲ್ಲಿ ಪ್ರದರ್ಶನಗಳು ಮತ್ತು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ಈ ಬಾರಿಯ ಸಮ್ಮಿಟ್‌ನಲ್ಲಿ ‘ಫ್ಯೂಚರ್ ಮೇಕರ್ಸ್ ಕಾನ್‌ಕ್ಲೇವ್’ ಪ್ರಮುಖ ಆಕರ್ಷಣೆಯಾಗಲಿದೆ. ಇದು ನವೋದ್ಯಮಿಗಳಿಗೆ ಬೃಹತ್ ವೇದಿಕೆಯಾಗಲಿದೆ. 1,200ಕ್ಕೂ ಅಧಿಕ ಮಳಿಗೆಗಳಲ್ಲಿ ಪ್ರದರ್ಶನಗಳು ನಡೆಯಲಿದ್ದು, ನವೋದ್ಯಮಗಳು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಂದೆಡೆ ಸೇರಿಸುವ ವಿವಿಧ ವೇದಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸ್ಟಾರ್ಟ್‌ಅಪ್‌, ತಂತ್ರಜ್ಞಾನ ಉದ್ಯಮಗಳು ತಮ್ಮ ಉತ್ಪನ್ನಗಳನ್ನು ಅನಾವರಣಗೊಳಿಸಲು ಮತ್ತು ಮಾರುಕಟ್ಟೆಗೆ ಬಿಡುಗಡೆ ಮಾಡಲು ‘ಬೆಂಗಳೂರು ಟೆಕ್ ಸಮ್ಮಿಟ್ 2025’ ಅವಕಾಶ ಕಲ್ಪಿಸಿದೆ.

ಪ್ರಮುಖ ತಂತ್ರಜ್ಞಾನ ರಾಷ್ಟ್ರಗಳಾದ ಅಮೆರಿಕ, ಕ್ಯೂಬಾ, ಉರುಗ್ವೆ, ರಷ್ಯಾ, ಯುಕೆ, ಇಸ್ರೇಲ್, ಬೆಲ್ಜಿಯಂ, ಫಿನ್ಲ್ಯಾಂಡ್, ಫ್ರಾನ್ಸ್, ಇಯು, ದುಬೈ, ಶಾರ್ಜಾ, ದಕ್ಷಿಣ ಕೊರಿಯಾ, ಜಪಾನ್, ಸಿಂಗಾಪುರ ಮತ್ತು ಥೈಲ್ಯಾಂಡ್‌ ಸೇರಿದಂತೆ ಸುಮಾರು 60 ದೇಶಗಳ ಪ್ರತಿನಿಧಿಗಳು, ತಂತ್ರಜ್ಞಾನ ಕ್ಷೇತ್ರದ 10,000ಕ್ಕೂ ಅಧಿಕ ತಜ್ಞರು, 50,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಂತ್ರಜ್ಞಾನದ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಗಲಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಗ್ಯಾರೆಂಟಿ ಯೋಜನೆ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...