ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ಬಲಿಷ್ಠಗೊಳಿಸುವುದು ನಮ್ಮ ಗುರಿ ಉಡುಪಿಯಲ್ಲಿ:: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ

79

ಉಡುಪಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡ ರವರು ತನ್ನ ರಾಜ್ಯ ವ್ಯಾಪಿ ವಿಧಾನಸಭಾ ಕ್ಷೇತ್ರ ಭೇಟಿ ಕಾರ್ಯಕ್ರಮ ನಿಮಿತ್ತ ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾರ್ಯಕ್ರಮಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ವೇಳೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಹಾಗೂ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ವಿ ಅಮೀನ್ ರವರು ಅದ್ಧೂರಿಯಾಗಿ ಸ್ವಾಗತಿಸಿದರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮಂಜುನಾಥ್ ಗೌಡ ಅವರು, ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ, ಪಕ್ಷವನ್ನ ಬಲಿಷ್ಠಗೊಳಿಸಲಾಗುವುದು. ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಉತ್ತೇಜನ ನೀಡುವ ಕೆಲಸ ಮಾಡಲಾಗುತ್ತದೆ

. ಮಾತ್ರವಲ್ಲದೆ ರಾಜ್ಯ ಸರ್ಕಾರದ ೫ ಗ್ಯಾರಂಟಿಗಳನ್ನ ಮನೆ ಮನೆಗೆ ತಲುಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು… ಇನ್ನು ಬಿಹಾರದಲ್ಲಿ ಮತಕಳ್ಳತನ ಮೂಲಕ ಆಡಳಿತ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಮಂಗಳೂರಿನ ಸುರತ್ಕಲ್ ನಲ್ಲಿ ಇಂದು ಸಂಜೆ ದೊಡ್ಡ ಮಟ್ಟಿನ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು. ಈ ವೇಳೆ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಸೇರಿದಂತೆ ಮೊದಲಾದವರು ಮಂಜುನಾಥ ಗೌಡ ಅವರು ಜೊತೆಯಲ್ಲಿದ್ದರು.

ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಜ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸುರಯ್ಯ ಅಂಜುಮ್ ,ಅಜಿತ್ ಶೆಟ್ಟಿ, ಕಲ್ಯಾಣ್, ಅನಿಲ್, ಅಭಿನಂದನ್, ಪ್ರಸಾದ್ ಪಂಜೆ ,ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ ಶೆಟ್ಟಿ , ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಕರ್ಕೇರ, ನವೀನ್ ಸಾಲಿಯಾನ್ , ನವೀನ್ ಬಂಗೇರ ,ರಚನ್ ಸಾಲಿಯಾನ್,ಪ್ರವೇಶ್ ಶೆಟ್ಟಿ, ಶಶಿ ಶರ್ಮಾ, ಅಪ್ಪು ಶೆಟ್ಟಿ, ಉದಯ್ ಆಚಾರ್ಯ,ಪ್ರಶಾಂತ್, ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು…

Leave a comment

Leave a Reply

Your email address will not be published. Required fields are marked *

Related Articles

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...