ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಪ್ರಬಲ ಭೂಕಂಪದ ಅಲೆಗಳು ಭಾರತದ ಪೂರ್ವ ಭಾಗದಲ್ಲಿಯೂ ಆತಂಕ ಸೃಷ್ಟಿ

35

ಢಾಕಾ/ಕೋಲ್ಕತ್ತಾ:   ಬಾಂಗ್ಲಾದೇಶದ ನರಸಿಂಗ್ಡಿ ಬಳಿ 10 ಕಿ.ಮೀ ಆಳದಲ್ಲಿತ್ತು ಭೂಕಂಪದ ಕೇಂದ್ರ ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆ ದಾಖಲು, ಬೆಳಿಗ್ಗೆ 10:08 ಕ್ಕೆ ಸಂಭವಿಸಿದ ಕಂಪನ ಪಶ್ಚಿಮ ಬಂಗಾಳ, ಮೇಘಾಲಯ, ತ್ರಿಪುರಾ ಮತ್ತು ಮಿಜೋರಾಂನಲ್ಲೂ ಕಂಪಿಸಿದ ಭೂಮಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ ಬಾಂಗ್ಲಾದೇಶದಲ್ಲಿ ಭೂಕಂಪಕ್ಕೆ ಕುಸಿದಿರುವ ಕಟ್ಟಡಗಳು

ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ (ಎನ್‌ಸಿಎಸ್‌) ಮಾಹಿತಿಯ ಪ್ರಕಾರ, ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರ ಕೇಂದ್ರ ಬಿಂದು ಬಾಂಗ್ಲಾದೇಶದ ನರಸಿಂಗ್ಡಿ ಬಳಿ ಪತ್ತೆಯಾಗಿದೆ. ಬೆಚ್ಚಿಬಿದ್ದ ಕೋಲ್ಕತ್ತಾ ನಿವಾಸಿಗಳು ಭಾರತೀಯ ಕಾಲಮಾನದ ಪ್ರಕಾರ ಬೆಳಿಗ್ಗೆ 10:08 ರ ಸುಮಾರಿಗೆ ಈ ಘಟನೆ ನಡೆದಿದೆ. ಭೂಕಂಪದ ಕೇಂದ್ರ ಬಿಂದು ಢಾಕಾದಿಂದ ಆಗ್ನೇಯಕ್ಕೆ 10 ಕಿ.ಮೀ ದೂರದಲ್ಲಿ ಮತ್ತು ಭೂಮಿಯ 10 ಕಿ.ಮೀ ಆಳದಲ್ಲಿ ದಾಖಲಾಗಿದೆ.

ಇದರ ತೀವ್ರತೆಗೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ಕೂಚ್ ಬೆಹಾರ್, ದಕ್ಷಿಣ ಮತ್ತು ಉತ್ತರ ದಿನಾಜ್‌ಪುರ ಜಿಲ್ಲೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಕಂಪನದ ತೀವ್ರತೆಗೆ ಮನೆಯಲ್ಲಿನ ಫ್ಯಾನುಗಳು ಮತ್ತು ಗೋಡೆಗೆ ಹಾಕಿದ್ದ ವಸ್ತುಗಳು ಅಲುಗಾಡಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಭೂಕಂಪನವಾಗುತ್ತಿದ್ದಂತೆಯೇ ಕೋಲ್ಕತ್ತಾದಲ್ಲಿ ಜನ ತಮ್ಮ ಮನೆ ಮತ್ತು ಕಚೇರಿಗಳಿಂದ ಹೊರಬಂದು ರಸ್ತೆಯಲ್ಲಿ ಜಮಾಯಿಸಿದ್ದಾರೆ. ಹಲವರು ತಮ್ಮ ಅನುಭವಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, “ಸುಮಾರು 30 ಸೆಕೆಂಡುಗಳ ಕಾಲ ಕಟ್ಟಡ ಜೋರಾಗಿ ಅಲುಗಾಡಿದ ಅನುಭವವಾಯಿತು, ಇದು ನನ್ನ ಜೀವನದಲ್ಲೇ ಅತ್ಯಂತ ಭಯಾನಕ ಅನುಭವ,” ಎಂದು ಎಕ್ಸ್ (ಟ್ವಿಟರ್) ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ.

ಅದೃಷ್ಟವಶಾತ್, ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಈಶಾನ್ಯ ರಾಜ್ಯಗಳಲ್ಲೂ ಕಂಪನ ಕೇವಲ ಪಶ್ಚಿಮ ಬಂಗಾಳ ಮಾತ್ರವಲ್ಲದೆ, ಬಾಂಗ್ಲಾದೇಶದ ಜೊತೆ ಗಡಿಯನ್ನು ಹಂಚಿಕೊಂಡಿರುವ ಈಶಾನ್ಯ ಭಾರತದ ರಾಜ್ಯಗಳಾದ ಮೇಘಾಲಯದ ಶಿಲ್ಲಾಂಗ್, ತ್ರಿಪುರಾ ಮತ್ತು ಮಿಜೋರಾಂನ ಐಜ್ವಾಲ್‌ನಲ್ಲೂ ಭೂಕಂಪದ ಅನುಭವವಾಗಿದೆ ಎಂದು ವರದಿಗಳು ತಿಳಿಸಿವೆ. ಪಾಕಿಸ್ತಾನದಲ್ಲೂ ಕಂಪಿಸಿದ ಭೂಮಿ ಇನ್ನೊಂದೆಡೆ, ಗುರುವಾರ ಮತ್ತು ಶುಕ್ರವಾರದಂದು ಪಾಕಿಸ್ತಾನದಲ್ಲೂ ಭೂಕಂಪ ಸಂಭವಿಸಿದೆ.

ಗುರುವಾರ 3.9 ತೀವ್ರತೆಯ ಭೂಕಂಪ ನೆರೆಯ ರಾಷ್ಟ್ರದಲ್ಲಿ ಸಂಭವಿಸಿದ್ದರೆ, ಶುಕ್ರವಾರ 5.2 ತೀವ್ರತೆಯ ಕಂಪನ ದಾಖಲಾಗಿದೆ ಎಂದು ಎನ್‌ಸಿಎಸ್ ತಿಳಿಸಿದೆ. ಭಾರತ ಮತ್ತು ಯುರೇಷಿಯನ್ ಟೆಕ್ಟೋನಿಕ್ ಪ್ಲೇಟ್‌ಗಳ ಸಂಗಮದ ವಲಯದಲ್ಲಿ ಈ ಪ್ರದೇಶಗಳು ಬರುವುದರಿಂದ ಇಲ್ಲಿ ಭೂಕಂಪಗಳು ಸಂಭವಿಸುವುದು ಸರ್ವೇ ಸಾಮಾನ್ಯವಾಗಿದೆ.”

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...