ಗಂಗೊಳ್ಳಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ ಆರೋಪಿಗಳು ಪರಾರಿ ಐದು ಮಂದಿ ವಶಕ್ಕೆ

40

“ಗಂಗೊಳ್ಳಿ:  ಪವನ್‌ ನಾಯಕ್, ಪೊಲೀಸ್‌ ಉಪನಿರೀಕ್ಷಕರು (ಕಾ&ಸು), ಗಂಗೊಳ್ಳಿ ಪೊಲೀಸ್‌ ಠಾಣೆ ಇವರಿಗೆ ಆಲೂರು ಗ್ರಾಮದ ಆಲೂರು ಮಾವಿನಗುಳಿ ಕಡೆಗೆ ಹೋಗುವ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ಆಟ ಆಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಸ್ಥಳವನ್ನು ತಲುಪಿ ನೋಡಿದಾಗ ಜನರು ಗುಂಪು ಸೇರಿದ್ದು ಇಬ್ಬರು 2 ಕೋಳಿ ಹುಂಜಗಳ ಕಾಲಿಗೆ ಕೋಳಿ ಬಾಳ (ಕತ್ತಿ) ನ್ನು ಕಟ್ಟಿ ಜೂಜಾಟಕ್ಕೆ ಬಿಟ್ಟಿದ್ದು ಉಳಿದವರು ಸುತ್ತುವರಿದು ತಮ್ಮ ಕೋಳಿಗಳನ್ನು ಕೈ ನಲ್ಲಿ ಹಿಡಿದುಕೊಂಡು ಕಾದಾಟಕ್ಕೆ ಬಿಟ್ಟಿದ ಕೋಳಿಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಕೋಳಿ ಅಂಕ ಜುಗಾರಿ ಆಟ ನಡೆಸುತ್ತಿದ್ದವರ ಮೇಲೆ ದಾಳಿ ಆರೋಪಿತರನ್ನು ವಶಕ್ಕೆ ಪಡೆದಿದ್ದಾರೆ
1)ದಿವಾಕರ (56), 2) ಗಣೇಶ್‌ (40), 3) ಗಣೇಶ್‌ (29), 4)ಪ್ರಶಾಂತ್‌ (37),5) ಎಚ್‌. ಬಾಬು (55) ಇವರನ್ನು ವಶಕ್ಕೆ ಪಡೆದುಕೊಂಡಿದ್ದು, ಜಯಶೀಲ ಶೆಟ್ಟಿ ಹಾಗೂ ಇತರರು ಸ್ಥಳದಿಂದ ಓಡಿ ಹೋಗಿರುತ್ತಾರೆ. ಕೋಳಿ ಜುಗಾರಿ ಆಟಕ್ಕೆ ಬಳಸಿದ ಕೋಳಿ ಹುಂಜ – 7 ,ಕತ್ತಿ – 05 (ಕೋಳಿಬಾಳು) ಹಾಗೂ ಕೋಳಿಯ ಕಾಲಿಗೆ ಕೋಳಿ ಬಾಳನ್ನು ಕಟ್ಟಲು ಉಪಯೋಗಿಸಿದ ಹಗ್ಗ – 5 ಹಾಗೂ ಕೋಳಿಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿದ್ದು ನಗದು ಹಣ 2400/- ರೂಪಾಯಿ ವಶಪಡಿಸಿಕೊಂಡಿದ್ದು ಆಪಾದಿತರು ಬಂದ 1)KA-25-L-7198, 2)KA-20-EG-2233, 3)KA-20-EG-8400, 4)KA-51-EJ-2633, 5)KA-19-EV-7731 ನೇ ಪಲ್ಸರ್‌ ಮೋಟಾರು ಸೈಕಲ್‌, 6)KA-20-EB-2320, 7) KA-20-HD-2786 ನೇ ಮೋಟಾರು ಸೈಕಲನ್ನು ಸ್ವಾಧೀನಪಡಿಸಿಕೊಂಡಿದ್ದು, ಆರೋಪಿತರು ಕೋಳಿಗಳಿಗೆ ಆಹಾರ ನೀರು ಕೊಡದೇ ಕಾಲಿಗೆ ಕತ್ತಿಕಟ್ಟಿ ಹಿಂಸೆ ನೀಡಿ ಕೋಳಿಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ಆಟ ನಡೆಸಿರುವುದಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 112/2025 ಕಲಂ:11(1)(a) ಪ್ರಾಣಿ ಹಿಂಸೆ ತಡೆ ಕಾಯ್ದೆ ಮತ್ತು 87,93 KP ACT ರಂತೆ ಪ್ರಕರಣ ದಾಖಲಾಗಿರುತ್ತದೆ

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...