ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನೆಲೆ ಸುಗಮ ಸಂಚಾರ ವ್ಯವಸ್ಥೆಗಾಗಿ ಮಾರ್ಗ ಬದಲಾವಣೆ ಸೂಚನೆ

63

ದಿನಾಂಕ:28-11-2025 ರಂದು ಭಾರತದ ಮಾನ್ಯ ಪ್ರಧಾನ ಮಂತ್ರಿಯವರಾದ ಶ್ರೀ ನರೇಂದ್ರ ಮೋದಿ ರವರು ಉಡುಪಿ ಜಿಲ್ಲೆಯ ಶ್ರೀ ಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರಿದ್ದು ಈ ಸಂಬಂಧ ಮಾನ್ಯರ ಉಡುಪಿ ಜಿಲ್ಲಾ ಭೇಟಿ ಸಮಯ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಟಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇದ 28-11-2025 ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 15.00 ಗಂಟೆಯವರೆಗೆ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧ ಮಾಡಲು ಸೂಕ್ತ ಆದೇಶ ಹೊರಡಿಸುವಂತೆ ಉಲ್ಲೇಖದ ಪತ್ರದಲ್ಲಿ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ರವರು ಕೋರಿರುತ್ತಾರೆ.

ಸದರಿಯವರ ಕೋರಿಕೆಯನ್ನಯ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸನ್ಮಾನ ಪ್ರಧಾನ ಮಂತ್ರಿಯವರ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ನಿಯಮ 221(ಎ)(2) & (5) ರನ್ವಯ, ದಿನಾಂಕ:28-11-2025 ರಂದು ಬೆಳಿಗೆ, 9.00 ಗಂಟೆಯಿಂದ ಅಪರಾಹ್ನ 03.00 ಗಂಟೆಯವರೆಗೆ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧಿಸಿ ಆದೇಶಿಸಿದೆ.

> ಆದಿ ಉಡುಪಿ ಹೆಲಿಪ್ಯಾಡ್ನನಿಂದ ಕರಾವಳಿ ಜಂಕ್ಷನ್-ಬನ್ನಂಜೆ-ಶಿರಿಬೀಡು-ಕಲಂಕ-ಶ್ರೀ ಕೃಷ್ಣ ಮಠದವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ವಾರ್ಕಿಂಗ್ ನಿಷೇಧಿಸಿದೆ.

> ಮಣಿಪಾಲದಿಂದ ಉಡುಪಿ ಕಡೆಗೆ ಬರುವ ಎಲ್ಲಾ ವಾಹನಗಳು ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆ ಮಾರ್ಗವಾಗಿ ಉಡುಪಿಗೆ ಬರುವುದು.

> ಕುಂದಾಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕರಾವಳಿ ಪ್ರೈ ಓವರ್-ಅಂಬಲಪಾಡಿ -ಬ್ರಹ್ಮಗಿರಿ- ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರುವುದು.

> ಮಂಗಳೂರಿನಿಂದ ಉಡುಪಿ ಕಡೆಗೆ ಬರುವ ವಾಹನಗಳು ಕಿನ್ನಿ ಮುಲ್ಕಿ, ಸ್ವಾಗತಗೋಪುರ ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರುವುದು.

> ಅಂಬಾಗಿಲಿನಿಂದ ಗುಂಡಿಬೈಲ್ ಮಾರ್ಗವಾಗಿ ಉಡುಪಿಗೆ ಬರುವ ಎಲ್ಲಾ ವಾಹನಗಳು ಗುಂಡಿಬೈಲ್ ರಸಿಕಾ ಬಾರ್ ಮುಖೇನಾ ದೊಡ್ಡಣಗುಡ್ಡೆ-ಎಂಜಿಎಂ-ಎಸ್‌ಕೆಎಂ-ಬೀಡಿನಗುಡ್ಡೆ ಮುಖೇನಾ ಉಡುಪಿಗೆ ಬರುವುದು,

> ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಕುತ್ಪಾಡಿ ಮಾರ್ಗವಾಗಿ ಅಂಬಲಪಾಡಿ ಮುಖೇನಾ ಉಡುಪಿಗೆ ಬರುವುದು,

ಈ ನಿಷೇಧವು ವಿವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ.

(ಸ್ವರೂಪ ಟಿ.ಕೆ ಭಾ.ಆ.ಸ)

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...