2025 ರ ಮಹಿಳಾ ಕಬ್ಬಡ್ಡಿ ಫೈನಲ್ : ಸತತ 2ನೇ ಬಾರಿಗೆ ಪ್ರಶಸ್ತಿ ತನ್ನದಾಗಿಸಿದೆ

35

ಢಾಕಾ:”ಕಬಡ್ಡಿ ವಿಶ್ವ ಕಪ್ 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ 11 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ ಅಜೇಯ ಓಟ ಮುಂದುವರೆಸಿದ ಭಾರತ, ನಿರೀಕ್ಷೆಯಂತೆಯೇ ಫೈನಲ್ ನಲ್ಲೂ ಗೆಲುವು ಸಾಧಿಸಿದೆ. ವಿಜಯದ ಸಂಭ್ರಮದಲ್ಲಿ ಭಾರತದ ತಂಡ .2025 ರ ಮಹಿಳಾ ಕಬ್ಬಡ್ಡಿ ಫೈನಲ್  ಪಂದ್ಯದಲ್ಲಿ ಭಾರತ ಚೈನೀಸ್ ತೈಪೆ ವಿರುದ್ಧ ಗೆಲುವು ಸಾಧಿಸಿದ್ದು, ಈ ಮೂಲಕ ಸತತ 2ನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

11 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ ಅಜೇಯ ಓಟ ಮುಂದುವರೆಸಿದ ಭಾರತ, ನಿರೀಕ್ಷೆಯಂತೆಯೇ ಫೈನಲ್ ನಲ್ಲೂ ಗೆಲುವು ಸಾಧಿಸಿದೆ.

ಈ ಮೂಲಕ 13 ವರ್ಷಗಳ ಬಳಿಕ ನಡೆದ ಟೂರ್ನಿಯಲ್ಲಿ ಟ್ರೋಫಿ ತನ್ನದಾಗಿಸಿಕೊಂಡಿದೆ. ಮೊದಲ ಆವೃತ್ತಿಯು 2012ರಲ್ಲಿ ಭಾರತದಲ್ಲೇ ನಡೆದಿತ್ತು. ಸೆಮಿಫೈನಲ್ ನಲ್ಲಿ ಭಾರತ 33-21ರಲ್ಲಿ ಇರಾನ್ ವಿರುದ್ಧ ಗೆಲುವು ಸಾಧಿಸಿತ್ತು.

ಮತ್ತೊಂದೆಡೆ ಬಾಂಗ್ಲಾವನ್ನು ಮಣಿಸಿ ತೈಪೆ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿತ್ತು. ಭಾರತ ಹಾಗೂ ಚೈನೀಸ್ ತೈಪೆ ತಂಡಗಳು ಗ್ರೂಪ್ ಹಂತದಲ್ಲಿ ಅಜೇಯ ಗೆಲುವಿನ ದಾಖಲೆಯನ್ನು ಕಾಯ್ದುಕೊಂಡಿದ್ದವು.

ಭಾರತ ತಂಡವು ‘ಎ’ ಗುಂಪಿನಲ್ಲಿ ಆಡಿರುವ ಎಲ್ಲ 4 ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿತ್ತು. ಚೈನೀಸ್ ತೈಪೆ ‘ಬಿ’ ಗುಂಪಿನಲ್ಲಿ ಎಲ್ಲ ಐದು ಪಂದ್ಯಗಳನ್ನು ಗೆದ್ದುಕೊಂಡಿತ್ತು”

Leave a comment

Leave a Reply

Your email address will not be published. Required fields are marked *

Related Articles

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...