ರಾಮ ಮಂದಿರದ ಕಾಮಗಾರಿ ಸಂಪೂರ್ಣ : ಇಂದು ಪ್ರಧಾನಿ ನರೇಂದ್ರ ಮೋದಿ ಧಾರ್ಮಿಕ  ಧ್ವಜಾರೋಹಣ ಮಾಡಲಿದ್ದಾರೆ

25

ರಾಮ ಮಂದಿರ ನಿರ್ಮಾಣದ ಇತಿಹಾಸವು ಶತಮಾನಗಳಷ್ಟು ಹಿಂದಿನದು. ಮೊಘಲ್ ಚಕ್ರವರ್ತಿ ಬಾಬರ್‌ನ ಸೇನಾಧಿಪತಿಯಾಗಿದ್ದ ಮೀರ್ ಬಾಕಿ ಹಳೆಯ ದೇವಾಲಯವನ್ನು ಕೆಡವಿ ಬಾಬರಿ ಮಸೀದಿಯನ್ನು ನಿರ್ಮಿಸಿದ್ದ ಎಂದು ಹೇಳಲಾಗುತ್ತದೆ.

ಅಯೋಧ್ಯೆ, ನವೆಂಬರ್ 25: ಅಯೋಧ್ಯೆ(Ayodhya)ಯಲ್ಲಿ ಭವ್ಯ ರಾಮ ಮಂದಿರ(Ram Mandir)ದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ಇಂದು ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ರಾಮ ಮಂದಿರ ನಿರ್ಮಾಣದ ಇತಿಹಾಸವು ಶತಮಾನಗಳಷ್ಟು ಹಿಂದಿನದು.

ಮೊಘಲ್ ಚಕ್ರವರ್ತಿ ಬಾಬರ್‌ನ ಸೇನಾಧಿಪತಿಯಾಗಿದ್ದ ಮೀರ್ ಬಾಕಿ ಹಳೆಯ ದೇವಾಲಯವನ್ನು ಕೆಡವಿ ಬಾಬರಿ ಮಸೀದಿಯನ್ನು ನಿರ್ಮಿಸಿದ್ದ ಎಂದು ಹೇಳಲಾಗುತ್ತದೆ. ಅಂದಿನಿಂದ ಈ ಸ್ಥಳವು ವಿವಾದದಲ್ಲೇ ಇತ್ತು. ಬರೋಬ್ಬರಿ 500 ವರ್ಷಗಳ ಹೋರಾಟ, ಬಲಿದಾನಗಳ ನಂತರ ಆಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಗೊಂಡು 2024ರಲ್ಲಿ ಉದ್ಘಾಟನೆಗೊಂಡಿತ್ತು.

ಉದ್ಘಾಟನೆ ವೇಳೆ ರಾಮ ಮಂದಿರದ ಕಾಮಗಾರಿ ಸಂಪೂರ್ಣವಾಗಿರಲಿಲ್ಲ. ಇದೀಗ ಸರಿಸುಮಾರು ಒಂದು ವರ್ಷದ ಬಳಿಕ ರಾಮಮಂದಿರದ ಕಾಮಗಾರಿ ಸಂಪೂರ್ಣಗೊಂಡಿದೆ. ಅಯೋಧ್ಯೆ ರಾಮ ಮಂದಿರ ವೈಶಿಷ್ಟ್ಯ ರಾಮ ಮಂದಿರ ನಿರ್ಮಾಣ ಪ್ರದೇಶವು ಸುಮಾರು 57,000 ಚದರ ಅಡಿ ಆಗಿದ್ದು, ಕಟ್ಟಡವು ಮೂರು ಅಂತಸ್ತಿನ ರಚನೆಯಾಗಿದೆ. ಇದು ಕುತುಬ್ ಮಿನಾರ್‌ಗಿಂತಲೂ ಶೇಕಡ 70 ಹೆಚ್ಚು ಎತ್ತರದ್ದಾಗಿದೆ.

ರಾಮ ಮಂದಿರವು ಬೃಹತ್ ಕಂಬಳ ಮೇಲೆ ನಿಂತಿದ್ದು, ಶ್ರೀ ರಾಮ ದೇವರು ಇರುವ ಅತ್ಯಂತ ಪವಿತ್ರ ಭಾಗವನ್ನು ಗರ್ಭ ಗೃಹ ಅಥವಾ ಗರ್ಭ ಗುಡಿ ಎಂದು ಹೇಳಲಾಗುತ್ತದೆ. ಮಂದಿರದ ಮೂರನೇ ಮಹಡಿಯಲ್ಲಿ ಅತಿ ಎತ್ತರದ ಶಿಖರ ರೂಪದ ಗೋಪುರವಿದೆ. ಐದು ಮಂಟಪಗಳ ಮೇಲೆ ಐದು ಶಿಖರಗಳಿದ್ದು, ಒಟ್ಟು 300 ಕಂಬಗಳು ಮತ್ತು 44 ತೇಗದ ಬಾಗಿಲುಗಳನ್ನು ಹೊಂದಿದೆ.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...