ಕರ್ನಾಟದಲ್ಲಿ ವಿಶೇಷ ಚೇತನರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ

59

ಬೆಂಗಳೂರು: 20 ಅಥವಾ ಅದಕ್ಕಿಂತ ಹೆಚ್ಚು ಸಿಬ್ಬಂದಿಯಿರುವ ಖಾಸಗಿ ಸಂಸ್ಥೆಗಳಲ್ಲಿ ಶೇ.5 ರಷ್ಟು ಹುದ್ದೆಗಳು ವಿಶೇಷ ಚೇತನರಿಗೆ ಮೀಸಲು ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಪ್ರತಿ ಕೋರ್ಸ್‌ನಲ್ಲಿ ಶೇ. 10ರಷ್ಟು ಸೀಟುಗಳ ಮೀಸಲಾತಿ ಕಡ್ಡಾಯ ನಿಯಮ ಉಲ್ಲಂಘಿಸಿದರೆ ಖಾಸಗಿ ಕಂಪನಿಗಳಿಗೆ 10,000 ರೂ. ನಿಂದ 5 ಲಕ್ಷ ರೂ. ವರೆಗೆ ದಂಡ ಸುಳ್ಳು ಅಂಗವೈಕಲ್ಯ ಪ್ರಮಾಣಪತ್ರ ಬಳಸಿದರೆ 1 ಲಕ್ಷ ರೂ. ದಂಡ ಮತ್ತು 2 ವರ್ಷ ಜೈಲು ಶಿಕ್ಷೆ.

ವಿದ್ಯಾರ್ಥಿಗಳಿಗೆ ಪ್ರವೇಶಾತಿಯಲ್ಲಿ 5 ವರ್ಷಗಳ ವಯೋಮಿತಿ ಸಡಿಲಿಕೆ ಮತ್ತು ಕಟ್-ಆಫ್ ಅಂಕಗಳಲ್ಲಿ ಶೇ.5 ರಿಯಾಯಿತಿ ವಿಶೇಷ ಚೇತನರ ಹಿತದೃಷ್ಟಿಯಿಂದ ಮಹತ್ವದ ಕರಡು ಮಸೂದೆಯೊಂದನ್ನು ಪ್ರಕಟಿಸಿದೆ ಕರ್ನಾಟಕ ಸರ್ಕಾರ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರ ಚರ್ಚೆಯಲ್ಲಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ವಿಶೇಷ ಚೇತನರ ಹಿತದೃಷ್ಟಿಯಿಂದ ಮಹತ್ವದ ಕರಡು ಮಸೂದೆಯೊಂದನ್ನು ಪ್ರಕಟಿಸಿದೆ. ‘ಕರ್ನಾಟಕ ಉದ್ಯೋಗ ಮತ್ತು ಶಿಕ್ಷಣದಲ್ಲಿ ಅಂಗವಿಕಲರ ಹಕ್ಕುಗಳ ವಿಧೇಯಕ-2025’ರ ಕರಡನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಖಾಸಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಪ್ರಸ್ತಾಪಿಸಿದೆ.

ಖಾಸಗಿ ಉದ್ಯೋಗದಲ್ಲಿ ಶೇ. 5ರಷ್ಟು ಮೀಸಲು ರಾಜ್ಯ ಕಾರ್ಮಿಕ ಇಲಾಖೆ ಹೊರಡಿಸಿರುವ ಈ ಕರಡು ಮಸೂದೆಯ ಪ್ರಕಾರ, 20 ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಪ್ರತಿಯೊಂದು ಖಾಸಗಿ ಸಂಸ್ಥೆಯು ಶೇ. 5ರಷ್ಟು ಹುದ್ದೆಗಳನ್ನು ವಿಶೇಷ ಚೇತನ ವ್ಯಕ್ತಿಗಳಿಗೆ ಮೀಸಲಿಡಬೇಕಾಗುತ್ತದೆ.ಇದು ನೇರ ನೇಮಕಾತಿ ಮತ್ತು ಕಾಯಂ ಹುದ್ದೆಗಳಿಗೆ ಅನ್ವಯವಾಗಲಿದ್ದು, ಹಂತ ಹಂತವಾಗಿ ಇದನ್ನು ಜಾರಿಗೊಳಿಸಲು ಸೂಚಿಸಲಾಗಿದೆ.”

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಗ್ಯಾರೆಂಟಿ ಯೋಜನೆ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...