ಇನ್ನು ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳು ಸೋಮವಾರ ಬೆಳಿಗ್ಗೆ 5:05 ಗಂಟೆಗೆ ಆರಂಭ

56

ಬೆಂಗಳೂರು: ಹಬ್ಬ ಹಾಗೂ ವಾರಾಂತ್ಯ ರಜೆ ವೇಳೆ ಜನರು ಊರು ಹಾಗೂ ಪ್ರವಾಸಕ್ಕೆ ತೆರಳಿದ ಜನರು ಸೋಮವಾರ ಬೆಂಗಳೂರಿಗೆ ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇರುತ್ತದೆ.

ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಳದಿ ಮಾರ್ಗದ ರೈಲು ಸಂಚಾರವನ್ನು ಸೋಮವಾರದಂದು ಬೇಗ ಆರಂಭಿಸಲು ನಿರ್ಧರಿಸಿದೆ.

ಇನ್ನು ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳು ಸೋಮವಾರ ಬೆಳಿಗ್ಗೆ 5:05 ಗಂಟೆಗೆ ಆರಂಭವಾಗಲಿವೆ. ಮೊದಲ ಮೆಟ್ರೋ ರೈಲು ಸೇವೆ ಆರ್.ವಿ ರಸ್ತೆಯಿಂದ ಡೆಲ್ಯಾ ಎಲೆಕ್ಟ್ರಾನಿಕ್ಸ್, ಬೊಮ್ಮಸಂದ್ರ ನಿಲ್ದಾಣಗಳಿಂದ ಹೊರಡಲಿದೆ.

ಈ ವಿಶೇಷ ವ್ಯವಸ್ಥೆ ಕೇವಲ ಸೋಮವಾರಕ್ಕೆ ಮಾತ್ರ ಅನ್ವಯವಾಗುತ್ತದೆ. ಮರು ದಿನ ಮಂಗಳವಾರದಿಂದ ಹಳದಿ ಮಾರ್ಗದ ಮೆಟ್ರೋ ಸೇವೆಗಳು ಎಂದಿನಂತೆ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭವಾಗಲಿವೆ.

ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಸೇವೆಗಳು ಬೇಗನೆ ಪ್ರಾರಂಭವಾಗುವುದರಿಂದ, ಹಳದಿ ಮಾರ್ಗದಲ್ಲೂ ಸೇವೆ ಒದಗಿಸುವಂತೆ ಪ್ರಯಾಣಿಕರು ಆಗ್ರಹಿಸಿದ್ದರು, ಪ್ರಯಾಣಿಕರ ಪ್ರತಿಭಟನೆ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಸೋಮವಾರ ಬೆಳಿಗ್ಗೆ ತಮ್ಮ ಊರುಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರ ಸಂಖ್ಯೆಯಲ್ಲಿನ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರಿಷ್ಕೃತ ಸೋಮವಾರದ ವೇಳಾಪಟ್ಟಿಯನ್ನು ಎಲ್ಲಾ ಹಳದಿ ಮಾರ್ಗದ ನಿಲ್ದಾಣಗಳಲ್ಲಿ ಪ್ರದರ್ಶಿಸಲಾಗಿದೆ ಎಂದು ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...