ಷೇರು ಮಾರುಕಟ್ಟೆ ಹೂಡಿಕೆ ಬಗ್ಗೆ ಮಾತನಾಡುವಂತೆ ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೋ ವೈರಲ್ ವಂಚಕರ ವಿರುದ್ಧ ದೂರು

43

ಬೆಂಗಳೂರು:  ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೋ ವೈರಲ್ ವಂಚಕರ ವಿರುದ್ಧ ದೂರು ಮಲ್ಲೇಶ್ವರಂ ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು ನಿರ್ಮಲಾ ಅವರು ಷೇರು ಮಾರುಕಟ್ಟೆ ಹೂಡಿಕೆ ಬಗ್ಗೆ ಮಾತನಾಡುವಂತೆ ಎಐ ಬಳಸಿ ನಕಲಿ ವಿಡಿಯೋ ಇನ್ಫೋಸಿಸ್ ಸ್ಥಾಪಕ ನಾರಾಯಣಮೂರ್ತಿ ಅವರ ಹೆಸರಿನಲ್ಲೂ ಈ ಹಿಂದೆ ವಂಚನೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಸೈಬರ್‌ ಕ್ರಿಮಿಗಳ ಆಟಾಟೋಪ ಮುಂದುವರಿದಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಡೀಪ್‌ಫೇಕ್‌ ವಿಡಿಯೊ ಸೃಷ್ಟಿಸಿ ವಂಚನೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಲ್ಲೇಶ್ವರಂ ಠಾಣೆ ಪೊಲೀಸರು ಅಪರಿಚಿತರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

”ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾತನಾಡುತ್ತಿರುವ ವಿಡಿಯೊ ಫೇಸ್‌ಬುಕ್‌ನಲ್ಲಿಹರಿದಾಡುತ್ತಿತ್ತು. ಈ ವಿಡಿಯೊ ಪರಿಶೀಲಿಸಿದಾಗ ಕೃತಕ ಬುದ್ಧಿಮತ್ತೆ (ಎಐ) ಬಳಸಿ ನಿರ್ಮಲಾ ಸೀತಾರಾಮನ್‌ ಅವರ ಡೀಪ್‌ಫೇಕ್‌ ವಿಡಿಯೊ ರಚಿಸಲಾಗಿದೆ. ವಿಡಿಯೊದಲ್ಲಿಹಣ ಹೂಡಿಕೆ ಬಗ್ಗೆ ಮಾತನಾಡುತ್ತಿರುವಂತೆ ಬಿಂಬಿಸಲಾಗಿತ್ತು.

ಹೀಗಾಗಿ, ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ,’ಎಂದು ಪೊಲೀಸರು ತಿಳಿಸಿದ್ದಾರೆ. ನ್ಯೂಜಿಲೆಂಡ್‌ ಸಂಸತ್ತಿನಲ್ಲಿ ತನ್ನದೇ ನಗ್ನ ಫೋಟೋ ತೋರಿಸಿದ ಸಂಸದೆ, ಡೀಪ್‌ಫೇಕ್‌ ಸುಳಿಯಿಂದ ಪಾರಾಗಲು ಬರುತ್ತಾ ಕಾನೂನು? ಹೂಡಿಕೆದಾರರೇ ಎಚ್ಚರ ಎಚ್ಚರ ‘ಸೈಬರ್‌ ವಂಚಕರು ಷೇರು ಮಾರುಕಟ್ಟೆ ಹೂಡಿಕೆ ನೆಪದಲ್ಲಿಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ.

ಹಣ ಹೂಡಿಕೆ ಕುರಿತು ಗಣ್ಯರು ಸಲಹೆ ನೀಡುವಂತೆ ನಕಲಿ ವಿಡಿಯೊಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿಹರಿಬಿಡುತ್ತಿದ್ದಾರೆ. ಈ ಹಿಂದೆ ಇನ್ಫೋಸಿಸ್‌ ಸ್ಥಾಪಕ ನಾರಾಯಣಮೂರ್ತಿ ಸೇರಿದಂತೆ ಹಲವರ ಹೆಸರಿನಲ್ಲಿಡೀಪ್‌ಫೇಕ್‌ ವಿಡಿಯೊಗಳು ವೈರಲ್‌ ಆಗಿದ್ದವು. ಇಂತಹ ನಕಲಿ ವಿಡಿಯೊಗಳನ್ನು ಸಾರ್ವಜನಿಕರು ನಂಬಬಾರದು,’ ಎಂದು ಪೊಲೀಸರು ತಿಳಿಸಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯ ಪ್ರಾರಂಭಿಸಿದ ::ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೇ ದಿನವೇ ಆಡಳಿತ ಯಂತ್ರಕ್ಕೆ ಚುರುಕು...

ಜಾತಿ, ಧರ್ಮ ಯಾವುದೇ ಪ್ರಭಾವಕ್ಕೂ ಮಣಿಯಬೇಡಿ: ಅಧಿಕಾರಿಗಳಿಗೆ ಸೂಚನೆ ನೀಡಿದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಇಂದು ವಿಧಾನಸೌಧದಲ್ಲಿ...

ಸಂಪುಟ ರಚನೆಯ ಕಸರತ್ತು ದೆಹಲಿಗೆ ತೆರಳಿದ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಸಂಪುಟ ರಚನೆಯ ಕಸರತ್ತು ಆರಂಭಿಸಿದ್ದು, ಸೋಮವಾರ ದೆಹಲಿಗೆ ತೆರಳಿ...