ಮೆಕ್ಕೆಜೋಳ ಕ್ವಿಂಟಾಲ್‌ಗೆ 2400 ರೂ. ಬೆಲೆ ನಿಗದಿ, ದಾವಣಗೆರೆಯಲ್ಲಿ ಖರೀದಿ ಕೇಂದ್ರ ತೆರೆಯಲು ಒತ್ತಾಯ

39

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಲೆಗೆ ಬೆಂಬಲ ಬೆಲೆ ನೀಡುವಂತೆ ಬೀದಿಗೆ ಇಳಿದು ಒತ್ತಾಯಿಸಿದ್ರು ರೈತರು ಇದೀಗ ಕರ್ನಾಟಕ ಹಾಲು ಮಹಾಮಂಡಳಕ್ಕೆ 2025-26ರಲ್ಲಿ ಬೇಕಾದ ಮೆಕ್ಕೆಜೋಳ ಖರೀದಿಗೆ ಆದೇಶ ಕೆಎಂಎಫ್‌ಗೆ ಅಗತ್ಯವಿರುವ ಒಂದು ಲಕ್ಷ ಮೆ.ಟನ್‌ ಮೆಕ್ಕೆ ಜೋಳ ಖರೀದಿ ಕ್ವಿಂಟಾಲ್‌ಗೆ 2400 ರೂ. ಬೆಲೆ ನಿಗದಿ, ದಾವಣಗೆರೆಯಲ್ಲಿ ಖರೀದಿ ಕೇಂದ್ರ ತೆರೆಯಲು ಒತ್ತಾಯ ದರ ಕುಸಿತದಿಂದ ಮೆಕ್ಕೆಜೋಳ ರೈತರು ಸಂಕಷ್ಟದಲ್ಲಿದ್ದಾರೆ.

ಮೆಕ್ಕೆಜೋಳ ಬೆಲೆ ಕುಸಿದು ಕಂಗಾಲಾಗಿರುವ ರೈತರು ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ನೀಡಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಸರಕಾರ ಪ್ರಸ್ತುತ ವರ್ಷ ಕೆಎಂಎಫ್‌ಗೆ ಅಗತ್ಯವಿರುವ ಮೆಕ್ಕೆಜೋಳವನ್ನು ರೈತರಿಂದ ನೇರ ಖರೀದಿಸಲು ಆದೇಶ ಹೊರಡಿಸಿದೆ. ಮೆಕ್ಕೆಜೋಳ ಬೆಲೆ ಕುಸಿತದಿಂದ ರೈತ ಅಪಾರ ನಷ್ಟಕ್ಕೆ ಸಿಲುಕಿದ್ದು, ಬೆಂಬಲ ಬೆಲೆ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಹಾಗಾಗಿ ನ. 25ರಂದು ಆರ್ಥಿಕ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎನ್‌.ಎಂ. ಶಾಂತಮ್ಮ ಅವರು, ಕರ್ನಾಟಕ ಹಾಲು ಮಹಾಮಂಡಳಿಗೆ ಅಗತ್ಯವಿರುವ ಮೆಕ್ಕೆಜೋಳವನ್ನು ರೈತರಿಂದ ನೇರ ಖರೀದಿ ಮಾಡಲು ಅಧಿಸೂಚನೆ ಹೊರಡಿಸಿದ್ದಾರೆ. ಇದರಿಂದ ರೈತರಿಗೆ ಕೊಂಚ ನೆರವಾದರೂ, ಸರಕಾರ ಆಧಿಕೃತವಾಗಿ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ನೀಡಿದರೆ ಮಾತ್ರ ಆರ್ಥಿಕವಾಗಿ ಲಾಭ ಸಿಗಲಿದೆ.

ಲಕ್ಷ ಮೆ.ಟನ್‌ 2025-26ರಲ್ಲಿ ಕರ್ನಾಟಕ ಹಾಲು ಮಹಾಮಂಡಳಿಗೆ ಅಗತ್ಯವಿರುವ ಒಂದು ಲಕ್ಷ ಮೆಟ್ರಿಕ್‌ ಟನ್‌ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್‌ಗೆ 2400 ರೂ. ಬೆಲೆಯಂತೆ ನೇರ ರೈತರಿಂದ ಖರೀದಿಸಲು ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4 (ಜಿ) ಅಡಿ ಪದತ್ತವಾದ ಅಧಿಕಾರ ಚಲಾಯಿಸಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ಪಾರದರ್ಶಕ ಕಾಯಿದೆಯಿಂದ ವಿನಾಯಿತಿ ನೀಡಲಾಗಿದೆ.

ಹಾಗಾಗಿ ಉತ್ತಮ ಗುಣಮಟ್ಟದ ಮೆಕ್ಕೆಜೋಳವನ್ನು ಸಮಂಜಸ ದರದಲ್ಲಿ ಸಂಗ್ರಹಿಸಲು ಈ ಎರಡೂ ಇಲಾಖೆ ದೃಢಪಡಿಸಿಕೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.

ಶಿವಮೊಗ್ಗದಲ್ಲಿ ನಡೆಯಲಿದೆ ದೇಶದ ಮೆಕ್ಕೆಜೋಳಗಳ ಬಗ್ಗೆ ಸಂಶೋಧನೆ, ಶೀಘ್ರದಲ್ಲೇ ಪ್ರಾದೇಶಿಕ ಸಂಶೋಧನಾ ಕೇಂದ್ರ: ಬಿ.ವೈ.ರಾಘವೇಂದ್ರ ಖರೀದಿ ಕೇಂದ್ರಕ್ಕೆ ಆಗ್ರಹ ಈ ಹಿಂದೆಯೂ ಇದೇ ರೀತಿ ಕೆಎಂಎಫ್‌ನಿಂದ ನೇರ ಖರೀದಿಸಲು ಸರಕಾರ ಸೂಚನೆ ನೀಡಿತ್ತು. ಆದರೆ ರಾಜ್ಯದಲ್ಲಿ 45 ಲಕ್ಷ ಮೆಟ್ರಿಕ್‌ ಟನ್‌ ಮೆಕ್ಕೆಜೋಳ ಉತ್ಪಾದನೆ ಆಗಲಿದ್ದು, ಅದರಲ್ಲಿ ಕೇವಲ ಒಂದು ಲಕ್ಷ ಮೆಟ್ರಿಕ್‌ ಟನ್‌ ಖರೀದಿ ಮಾಡುವುದರಿಂದ ರೈತರಿಗೆ ಹೆಚ್ಚಿನ ಲಾಭ ಆಗುವುದಿಲ್ಲ.

ಜತೆಗೆ ಕೆಂಎಂಎಫ್‌ ಏಜೆನ್ಸಿಯಿಂದ ಖರೀದಿಸದೆ ಖರೀದಿ ಕೇಂದ್ರ ತೆರೆದು ಖರೀದಿ ಮಾಡಬೇಕು. ಹೆಚ್ಚು ಮೆಕ್ಕೆಜೋಳ ಬೆಳೆಯುವುದು ದಾವಣಗೆರೆ, ಹಾವೇರಿ ಮತ್ತು ಚಿತ್ರದುರ್ಗ ಜಿಲ್ಲೆಗಳಾಗಿರುವುದರಿಂದ ಮೂರು ಜಿಲ್ಲೆಗಳ ರೈತರಿಗೆ ಅನುಕೂಲ ಆಗುವಂತೆ, ದಾವಣಗೆರೆಯಲ್ಲಿ ಖರೀದಿ ಕೇಂದ್ರ ತೆರೆಯಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ರೈತರ ತೀವ್ರ ಹೋರಾಟ ಮೆಕ್ಕೆಜೋಳ ಕಣಜ ದಾವಣಗೆರೆಯಲ್ಲಿ ಹೋರಾಟ

ಉತ್ಪನ್ನಕ್ಕೆ ಬೆಲೆ ಕುಸಿಯುತ್ತಿದ್ದಂತೆ ರೈತರು ಬೀದಿಗಳಿದು ಪ್ರತಿಭಟನೆ ನಡೆಸಿ ಬೆಂಬಲ ಬೆಲೆ ನೀಡಬೇಕು, ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿದ್ದರು. ಪ್ರತಿಪಕ್ಷ ಬಿಜೆಪಿ ಹೊನ್ನಾಳಿ, ನ್ಯಾಮತಿ ಬಂದ್‌ಗೆ ಕರೆ ನೀಡಿತ್ತು. ದಾವಣಗೆರೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸೇರಿ ರಾಜ್ಯ ನಾಯಕರು ಆಗಮಿಸಿ ಪ್ರತಿಭಟನೆ ನಡೆಸಿದ್ದರು. ರೈತ ಸಂಘಟನೆಗಳು ಧರಣಿ, ಪ್ರತಿಭಟನೆ ನಡೆಸಿದ್ದವು. ದಿನೇ ದಿನೆ ಹೋರಾಟ ಮುಗಿಲು ಮುಟ್ಟಿತ್ತು. ಈಗ ಸರಕಾರ ಕೆಎಂಎಫ್‌ಗೆ ಅಗತ್ಯವಿರುವ ಒಂದು ಲಕ್ಷ ಮೆಟ್ರಿಕ್‌ ಟನ್‌ ಖರೀದಿಗೆ ಸೂಚಿಸಿದೆ.

ಇದರ ಜತೆಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆಯೊಂದಿಗೆ ಸರಕಾರ ಪ್ರೋತ್ಸಾಹ ಧನ ನೀಡಿ ಖರೀದಿ ಮಾಡಬೇಕು ಎಂಬ ಬೇಡಿಕೆ ಹಾಗೇ ಉಳಿದುಕೊಂಡಿದೆ. ದಾವಣಗೆರೆ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯುವ ಜಿಲ್ಲೆಗಳಲ್ಲಿ ಒಂದು.

ನೆರೆಯ ಜಿಲ್ಲೆಗಳಲ್ಲೂ ಮೆಕ್ಕೆಜೋಳ ಬೆಳೆಯುವುದರಿಂದ ಕೆಎಂಎಫ್‌ ಮೊದಲು ದಾವಣಗೆರೆಯಲ್ಲಿ ಖರೀದಿ ಕೇಂದ್ರ ತೆರೆದು ಮೆಕ್ಕೆಜೋಳ ಖರೀದಿಸಬೇಕು. ತುಮಕೂರು ಇನ್ನಿತರೆ ಜಿಲ್ಲೆಗಳಲ್ಲಿ ಆರಂಭಿಸಿದರೆ ಹೋರಾಟ ಮುಂದುವರಿಸಲಾಗುವುದು ಎಂದು ರೈತ ಸಂಘ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್‌ ಎಚ್ಚರಿಕೆ ನೀಡಿದ್ದಾರೆ. ”

Leave a comment

Leave a Reply

Your email address will not be published. Required fields are marked *

Related Articles

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ...