ಚೆನ್ನೈ: ದಿತ್ವಾ ಚಂಡಮಾರುತವು ತಮಿಳುನಾಡು ಕಡೆಗೆ ಸಾಗುತ್ತಿದ್ದು, ಪರಿಣಾಮ ಭಾರಿ ಗಾಳಿ-ಮಳೆ ಸುರಿಯುತ್ತಿದೆ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಸಂಚಾರ ಸೇವೆಯಲ್ಲೂ ವ್ಯತ್ಯಯ ಉಂಟಾಗಿದ್ದು, ವಿಮಾನ ಹಾಗೂ ರೈಲುಗಳನ್ನು ಸ್ಥಗಿತಗೊಳಿಸಿದ್ದಾರೆ ತ.ನಾಡಿನತ್ತ ದಿತ್ವಾ ಚಂಡಮಾರುತ
ದಿತ್ವಾ ಚಂಡಮಾರುತದ ಅಬ್ಬರ ಜೋರಾಗಿದೆ. ದಿತ್ವಾ ಚಂಡಮಾರುತವು ತಮಿಳುನಾಡಿನ ಕರಾವಳಿ ಭಾಗದತ್ತ ನಿರಂತರವಾಗಿ ಸಾಗುತ್ತಿದ್ದು, ತಮಿಳುನಾಡು ಮತ್ತು ಪುದುಚೇರಿ ಕರಾವಳಿಗೆ ಅಪ್ಪಳಿಸುವ ಭೀತಿ ಎದುರಾಗಿದೆ. ಇದರಿಂದಾಗಿ ಭಾರೀ ಮಳೆ ಮತ್ತು ಬಿರುಗಾಳಿ ಬೀಸಲಾರಂಭಿಸಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ವಿಮಾನ, ರೈಲು ಮತ್ತು ಶಾಲಾ-ಕಾಲೇಜುಗಳ ವೇಳಾಪಟ್ಟಿಗಳಲ್ಲಿ ವ್ಯತ್ಯಯ ಉಂಟಾಗಿದೆ.
ದಿತ್ವಾ ಚಂಡಮಾರುತದ ಅಬ್ಬರ ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ದಿತ್ವಾ ಚಂಡಮಾರುತ ನ.28 ರ ಸಂಜೆ 6 ಗಂಟೆಯವರೆಗೆ ಗಂಟೆಗೆ 7 ಕಿ.ಮೀ ವೇಗದಲ್ಲಿ ಉತ್ತರ-ಈಶಾನ್ಯ ದಿಕ್ಕಿಗೆ ಚಲಿಸುತ್ತಿತ್ತು.ಆದರೆ ಶ್ರೀಲಂಕಾದ ಕರಾವಳಿ ಮತ್ತು ಆಗ್ನೇಯ ಬಂಗಾಳಕೊಲ್ಲಿಯನ್ನು ದಾಟಿ, ನ. 30ರ ಮುಂಜಾನೆ ವೇಳೆಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ತಲುಪುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಈಗಾಗಲೇ ತಮಿಳುನಾಡಿನ ಡೆಲ್ಟಾ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಾರಂಭಿಸಿದೆ. ಚಂಡಮಾರುತದ ಪರಿಣಾಮವಾಗಿ, ರಾಮೇಶ್ವರಂನ ಪಾಂಬನ್‌ನಲ್ಲಿ ಬಲವಾದ ಗಾಳಿ, ಮಳೆ ಮತ್ತು ಸಮುದ್ರದಲ್ಲಿ ಅಲೆಗಳ ಅಬ್ಬರದ ಕಂಡುಬರುತ್ತಿದೆ. ಈ ಭಾಗದಲ್ಲಿ ಅಲರ್ಟ್ ಘೊಷಣೆ ಮಾಡಿಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮುನ್ನೆಚ್ಚರಿಕಾ ಕ್ರಮವಾಗಿ, ಅರಿಯಲೂರು, ತಿರುಚಿ, ತಂಜಾವೂರು ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಅಲ್ಲದೆ, ಕಡಲೂರು, ತಿರುವರೂರು, ನಾಗೈ, ಮೈಲಾಡುತುರೈ, ಕಲ್ಲಕುರಿಚಿ, ಪುದುಕೋಟೈ, ಪೆರಂಬಲೂರು, ಪುದುಚೇರಿ ಮತ್ತು ಕಾರೈಕಲ್ ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮಳೆಯ ತೀವ್ರತೆಯನ್ನು ಆಧರಿಸಿ ಈ ರಜೆಯನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆನ್ಯಾರ್ ಬೆನ್ನಲ್ಲೇ ಬಂತು ಡಿಟ್ವಾ ಸೈಕ್ಲೋನ್! ದಕ್ಷಿಣ ಭಾರತದಲ್ಲಿ ಮಳೆ, ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್! ಸಂಚಾರ ಸೇವೆಯಲ್ಲಿ ವ್ಯತ್ಯಯ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಹಾಗೂ ರೈಲು ಸೇವೆಯಲ್ಲೂ ವ್ಯತ್ಯಯ ಉಂಟಾಗಿದೆ. ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನ.29 ರಂದು ನಿಗದಿಯಾಗಿದ್ದ ಹಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಇಂಡಿಗೋ ವಿಮಾನಯಾನ ಸಂಸ್ಥೆಯ ATR ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದರ ಜೊತೆಗೆ ದಕ್ಷಿಣ ರೈಲ್ವೆಯು ನ.28 ಮತ್ತು 29 ರಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಿದೆ. ಚಂಡಮಾರುತದ ತೀವ್ರತೆ ಹೆಚ್ಚಾದರೆ, ಇನ್ನೂ ಹೆಚ್ಚಿನ ಬದಲಾವಣೆಗಳು ಆಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.”

Leave a comment