ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ ಉಳಿದ ಎಲ್ಲ ಪಾಲಿಕೆಗಳಲ್ಲಿ 18 ಆರೋಗ್ಯಾಧಿಕಾರಿ ಹುದ್ದೆಗಳು ರದ್ದು

27

ಹುಬ್ಬಳ್ಳಿ/ಧಾರವಾಡ, ಡಿಸೆಂಬರ್ 1: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿನ ಆರೋಗ್ಯಾಧಿಕಾರಿ ಹುದ್ದೆಯನ್ನು ಸರ್ಕಾರ ರದ್ದುಪಡಿಸಿದೆ.

ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ (GBA) ಹೊರತುಪಡಿಸಿ ಉಳಿದ ಎಲ್ಲ ಪಾಲಿಕೆಗಳಲ್ಲಿ 18 ಆರೋಗ್ಯಾಧಿಕಾರಿ ಹುದ್ದೆಗಳನ್ನು ರದ್ದುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. 18 ಆರೋಗ್ಯಾಧಿಕಾರಿ ಹುದ್ದೆಗಳು ರದ್ದು ರಾಜ್ಯದ ಹಲವು ಮಹಾನಗರ ಪಾಲಿಕೆಗಳು ತಮ್ಮದೇ ಅನುದಾನಗಳಿಂದ ಆರೋಗ್ಯ ಕೇಂದ್ರಗಳನ್ನು ನಡೆಸುತ್ತವೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯೂ  ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ (ಯುಪಿಎಚ್‌ಸಿ) ಮೂಲಕ ಆರೋಗ್ಯ ಸೇವೆಗಳನ್ನು ನಿರ್ವಹಿಸುತ್ತದೆ ಮತ್ತು ಚಿಟಗುಪ್ಪಿ ಆಸ್ಪತ್ರೆ ಮತ್ತು ಹೆರಿಗೆ ಆಸ್ಪತ್ರೆಯನ್ನು ನಿರ್ವಹಿಸುತ್ತದೆ.

ಈ ಆರೋಗ್ಯ ಕೇಂದ್ರಗಳ ನಿರ್ವಹಣೆಗಾಗಿ ಆರೋಗ್ಯಾಧಿಕರಿಗಳನ್ನು ನೇಮಕ ಮಾಡಿ, ಪಾಲಿಕೆಯ ಆರೋಗ್ಯ ವಿಭಾಗದ ಎಲ್ಲಾ ಚಟುವಟಿಕೆಗಳನ್ನು ಅವರಿಗೆ ವಹಿಸಲಾಗುತ್ತಿತ್ತು.

ಹೊಸ ಆದೇಶದಂತೆ ಜಿಬಿಎ ಹೊರತುಪಡಿಸಿ ಉಳಿದ ಪಾಲಿಕೆಗಳ 18 ಆರೋಗ್ಯಾಧಿಕಾರಿ ಹುದ್ದೆಗಳನ್ನು ರದ್ದುಪಡಿಸಿ ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಸೀನಿಯರ್ ಪ್ರೋಗ್ರಾಮರ್ ಮತ್ತು ಆಡಳಿತಾಧಿಕಾರಿ ಹುದ್ದೆಗಳಾಗಿ ಮರುನಾಮಕರಣ ಮಾಡಲಾಗಿದೆ.

ಆರೋಗ್ಯ ವಿಭಾಗದ ಕೆಲಸ ಕಾರ್ಯಪಾಲಕ ಇಂಜಿನಿಯರ್‌ಗಳ ಅಧೀನದಲ್ಲಿ ಮುಂದುವರಿಯಲಿದೆ. ಹುದ್ದೆ ಮರುನಾಮಕರಣವಾದರೂ ಸಿಬ್ಬಂದಿಯ ವೇತನ ಶ್ರೇಣಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಈ Either ಅಗತ್ಯವಾದ ಟಿಪ್ಪಣಿಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಲಾಗಿದೆ.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...