ಡಿಸೆಂಬರ್ 24 – 25 ರಂದು  ವಿ ಶೇಷ ರೈಲು ಸಂಚಾರ : ಬೆಂಗಳೂರು – ಬೀದರ್

52

ಬೆಂಗಳೂರು: ಕ್ರಿಸ್‌ಮಸ್‌ ಹಬ್ಬದ ಸಂದರ್ಭದಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು – ಬೀದರ್ ನಡುವೆ ವಿಶೇಷ ರೈಲು ಓಡಿಸಲಾಗುತ್ತಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದಿಂದ ಮಾಹಿತಿ ನೀಡಲಾಗಿದೆ. “ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲಾಗುತ್ತಿದೆ ” ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಕ್ರಿಸ್‌ಮಸ್‌ ಹಬ್ಬದ ಸಂದರ್ಭದಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ವಿಶೇಷ ರೈಲು. ಬೆಂಗಳೂರು – ಬೀದರ್ ನಡುವೆ ವಿಶೇಷ ರೈಲು ಓಡಿಸಲಾಗುತ್ತಿದೆ. ಡಿಸೆಂಬರ್ 24 ಹಾಗೂ 25 ರಂದು ಈ ವಿಶೇಷ ರೈಲು ಸಂಚಾರ.

ಬೆಂಗಳೂರು – ಬೀದರ್ ರೈಲಿನ ವೇಳಾಪಟ್ಟಿ ಏನು? ಡಿಸೆಂಬರ್ 24 ಬುಧವಾರ ರೈಲು ಸಂಖ್ಯೆ 06291 ಬೆಂಗಳೂರು ಕಂಟೋನ್ಮೆಂಟ್‌ – ಬೀದರ್ ವಿಶೇಷ ಎಕ್ಸ್ ಪ್ರೆಸ್ ಬೆಂಗಳೂರಿನಿಂದ ರಾತ್ರಿ 9:15ಕ್ಕೆ ಹೊರಟು, ಮರುದಿನ ಬೆಳಿಗ್ಗೆ 11:30ಕ್ಕೆ ಬೀದರ್ ತಲುಪಲಿದೆ.

ಮತ್ತೊಂದೆಡೆ, ಮರಳಿ ಸಂಚರಿಸುವ 06292 ಬೀದರ್ – ಬೆಂಗಳೂರು ಕ್ಯಾಂಟ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 25 ಗುರುವಾರ ಬೀದರ್‌ನಿಂದ ಮಧ್ಯಾಹ್ನ 1:00ಕ್ಕೆ ಹೊರಟು, ಮರುದಿನ ಬೆಳಗಿನ ಜಾವ 4:00ಕ್ಕೆ ಬೆಂಗಳೂರು ಕ್ಯಾಂಟ್ ತಲುಪಲಿದೆ.

ಕರ್ನಾಟಕದ ಬುಲೆಟ್‌ ರೈಲಿಗೆ ಮತ್ತಷ್ಟು ವೇಗ! ನನಸಿನತ್ತ ಮೈಸೂರು – ಚೆನ್ನೈ ನಡುವೆ ಅತಿ ವೇಗದ ರೈಲು ಯೋಜನೆ! ಎರಡೂವರೆ ತಾಸು ಪ್ರಯಾಣ! ಎಲ್ಲೆಲ್ಲಿ ನಿಲುಗಡೆ? ಮಾರ್ಗ ಮಧ್ಯದಲ್ಲಿ, ಈ ವಿಶೇಷ ರೈಲು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಾಬಾದ, ಕಲಬುರಗಿ ಮತ್ತು ಹುಮನಾಬಾದ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಈ ವಿಶೇಷ ರೈಲು 22 ಬೋಗಿಗಳನ್ನು ಒಳಗೊಂಡಿರಲಿದೆ, ಇದರಲ್ಲಿ ಒಂದು ಎಸಿ 2-ಟೈರ್, ಎರಡು ಎಸಿ 3-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ಆರು ಜನರಲ್ ಸೆಕೆಂಡ್ ಕ್ಲಾಸ್, ಮತ್ತು ಎರಡು ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ”

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಗ್ಯಾರೆಂಟಿ ಯೋಜನೆ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...