ಅತ್ಯಾಚಾರ ಪ್ರಕರಣದ ಆರೋಪದಲ್ಲಿ ಬಂಧಿತ ಪ್ರದೀಪ್ ಪೂಜಾರಿಗೂ ಹಿಂದೂ ಜಾಗರಣ ವೇದಿಕೆಗೆ ಸಂಬಂಧವಿಲ್ಲ

63

ಉಡುಪಿ ಅತ್ಯಾಚಾರ ಕೊಲೆ ಯತ್ನಪ್ರಕರಣದ ಆರೋಪಿಗು ಹಿಂದೂ ಜಾಗರಣ ವೇದಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಸಂಚಾಲಕ ರಾಜೇಶ್ ಉಚ್ಚಿಲ

ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ ವಿಚಾರವಾದ ಯುವತಿಯ ಅತ್ಯಾಚಾರಗೈದು ಕೊಲೆ ಯತ್ನ ಆರೋಪದಡಿ ಬಂಧಿತನಾಗಿರುವ ಪೆರ್ಡೂರಿನ ಪ್ರದೀಪ್ ಪೂಜಾರಿಗೂ ಹಿಂದು ಜಾಗರಣ ವೇದಿಕೆಗೂ ಯಾವುದೇ ಸಂಬಂಧವಿರುವುದಿಲ್ಲವೆಂದು ಉಡುಪಿ ಜಿಲ್ಲಾ ಹಿಂದು ಜಾಗರಣ ವೇದಿಕೆ ಸ್ಪಷ್ಟಪಡಿಸುತ್ತದೆ. (ನವೆಂಬರ್ 30ರಂದು ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ)


ಹಿಂದೂ ಸಂಘಟನೆಗಳ ವಿರೋಧಿ ಮನಸ್ಥಿತಿಯುಳ್ಳ ಯಾರೋ ಇದನ್ನು ಉದ್ದೇಶ ಪೂರ್ವಕವಾಗಿಯೇ ಮಾಧ್ಯಮಗಳಲ್ಲಿ ಪ್ರಕಟವಾಗುವ ಹಾಗೆ ಮಾಡಿದ್ದಾರೆ. ಇದು ಅಕ್ಷಮ್ಯ. ಈತ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತ ಅಲ್ಲದಿದ್ದರೂ ದುರುದ್ದೇಶ ಪೂರ್ವಕವಾಗಿಯೇ ಇಂತಹ ಹೇಳಿಕೆಗಳನ್ನು ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟಿಸಿರುವುದನ್ನು ಹಿಂದು ಜಾಗರಣ ವೇದಿಕೆ ಬಲವಾಗಿ ಖಂಡಿಸುತ್ತದೆ ಅಷ್ಟೇ ಅಲ್ಲದೆ ಇಂತಹ ಹೇಳಿಕೆಗಳನ್ನು ಪ್ರಕಟಿಸದಂತೆ ಆಗ್ರಹಪಡಿಸುತ್ತದೆ. ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕರಾದ ರಾಜೇಶ್ ಉಚ್ಚಿಲರವರು ತಿಳಿಸಿರುತ್ತಾರೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...