ನ್ಯಾಯಬೆಲೆ ಅಂಗಡಿಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು ಕ್ಯೂಆರ್ ಸ್ಕ್ಯಾನ್ ಕಡ್ಡಾಯ.

57

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಯೋಜನೆ. ನ್ಯಾಯಬೆಲೆ ಅಂಗಡಿಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು QR ಸ್ಕ್ಯಾನ್ ಕಡ್ಡಾಯ. ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ಸಿಗಲಿದೆ. ಪ್ರತಿ ತಿಂಗಳ 10 ನೇ ತಾರೀಖಿನೊಳಗೆ ವಿತರಣೆಗೆ ಸೂಚನೆ.

ನ್ಯಾಯಬೆಲೆ ಅಂಗಡಿಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು QR ಸ್ಕ್ಯಾನ್ ಕಡ್ಡಾಯ ಮಾಡುವಂತೆ ಸಿಎಂ ಸಿದ್ದರಾಮಯ್ಯ ಆಹಾರ ಇಲಾಖೆಗೆ ಸೂಚನೆ ನೀಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಈ ಹಿನ್ನೆಲೆ ಬೆಂಗಳೂರಿನಲ್ಲಿ ಸೋಮವಾರ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತಾಗಿ ನಡೆಸಿದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಸಚಿವ ಕೆಎಚ್‌ ಮುನಿಯಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಡಿಕೆಶಿ ಈ ವೇಳೆ ಇಂದಿರಾ ಆಹಾರ ಕಿಟ್‌ನಲ್ಲಿ ಉತ್ತಮ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಸಿಎಂ ತಿಳಿಸಿದರು. ಹೊಸ ತಂತ್ರಾಂಶ ಅಳವಡಿಕೆ ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಬೇಕು.

ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ. ಜತೆಗೆ ಫುಡ್‌ ಕಿಟ್‌ಗಳನ್ನು ನಿಗಮದ ಗೋದಾಮು/ಸಗಟು ಮಳಿಗೆಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳ 10 ನೇ ತಾರೀಕು ಒಳಗಾಗಿ ವಿತರಣೆ ಮಾಡಬೇಕು ಎಂದು ತಿಳಿಸಲಾಗಿದೆ.

ಇಂದಿರಾ ಕಿಟ್‌ನಲ್ಲಿ ಏನೆಲ್ಲಾ ಸಾಮಗ್ರಿ ಸಿಗಲಿವೆ? ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು. ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ ಅಗತ್ಯವಿದ್ದು, ಇದಕ್ಕಾಗಿ ಪ್ರತಿ ತಿಂಗಳು ರೂ.466 ಕೋಟಿ ವೆಚ್ಚ ಅಂದಾಜಿಸಲಾಗಿದೆ.

ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18628 ಮೆ.ಟನ್ ತೊಗರಿ ಬೇಳೆ ಮತ್ತು ತಲಾ 12419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯ ಅಂದಾಜಿಸಲಾಗಿದೆ. ಆಹಾರ ಕಿಟ್‌ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಏನೆಲ್ಲಾ ಪ್ರಮುಖ ಅಂಶಗಳು ಚರ್ಚೆ? ನಾಫೆಡ್/ಎನ್ಸಿಸಿಎಫ್‌ನಂತಹ ಕೇಂದ್ರ ಸರಬರಾಜು ಸಂಸ್ಥೆಗಳ ಮೂಲಕ ಅಥವಾ ಖರೀದಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೆಟಿಪಿಪಿ ಅನ್ವಯ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು. ಉತ್ತಮ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು.

ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿಯಾಗಬಾರದು. ಇದೇ ರೀತಿ ಅಳತೆಯಲ್ಲಿ ಹೆಚ್ಚು ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು. ಅತ್ಯುತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು. ಯಾವುದೇ ರೀತಿಯ ದೂರಿಗೆ ಅವಕಾಶವಾಗದಂತೆ ಪಾರದರ್ಶಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.”

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಗ್ಯಾರೆಂಟಿ ಯೋಜನೆ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...