ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನೆಲೆ :   ಕಾಡಿನಲ್ಲಿ ಐದು ತಿಂಗಳಿನಿಂದ ಅನಾಥವಾದ ಅರ್ಜುನನ ಪುತ್ಥಳಿ ಶೀಘ್ರ ಲೋಕಾರ್ಪಣೆಗೆ ಸ್ಥಳೀಯರ ಒತ್ತಾಯ

51

ಹಾಸನ :  2023ರ ಡಿಸೆಂಬರ್ 4ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕಾದಾಡಿ ಮಡಿದ  ದಸರಾ ಆನೆ ಕ್ಯಾಪ್ಟನ್ ಅರ್ಜುನನಿಗೆ ಸ್ಮಾರಕ ನಿರ್ಮಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಸರ್ಕಾರ ಪ್ರಾಜೆಕ್ಟ್‌ಗೆ ಅನುಮೋದನೆ ನೀಡಿತ್ತು. ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆಯ ಅರಣ್ಯದಲ್ಲಿ ಹುತಾತ್ಮ ಕಾಡಾನೆ ಅರ್ಜುನನ ಸ್ಮಾರಕ ನಿರ್ಮಾಣ ಪೂರ್ಣಗೊಂಡಿದ್ದು, ಈಗ ಉದ್ಘಾಟನೆಗಾಗಿ ಸ್ಥಳೀಯರು ಸರ್ಕಾರಕ್ಕೆ  ಒತ್ತಾಯಿಸಿದ್ದಾರೆ.

ಅರ್ಜುನನ ಸ್ಮಾರಕದಲ್ಲಿ ಮೂಲ ಸೌಕರ್ಯಗಳ ಕೊರತೆ ಸ್ಥಳೀಯರು 5 ಕೋಟಿ ರೂ. ವೆಚ್ಚದಲ್ಲಿ ಭವ್ಯ ಸ್ಮಾರಕ ನಿರ್ಮಿಸಬೇಕೆಂದು ಆಗ್ರಹಿಸಿದ್ದರು. ಸರ್ಕಾರ ಮೊದಲ ಹಂತದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಶುರುಮಾಡಿತ್ತು.

ಇದೀಗ ಮೂಲ ಸೌಲಭ್ಯಗಳ ಕೊರತೆ ಇದ್ದರೂ ಸ್ಮಾರಕ ಉದ್ಘಾಟನೆಗೆ ಸಿದ್ದವಾಗಿದೆ. ಡಿಸೆಂಬರ್ 6 ರಂದು ಹಾಸನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸ್ಮಾರಕ ಲೋಕಾರ್ಪಣೆ ಮಾಡಬೇಕೆಂಬ ಆಗ್ರಹ ಹೊರಹೊಮ್ಮಿದೆ.

ಅರ್ಜುನ ಹುತಾತ್ಮನಾಗಿ ಎರಡು ವರ್ಷ ಪೂರ್ತಿಯಾಗುತ್ತಿರುವುದರಿಂದ ಪುತ್ಥಳಿಯ ಉದ್ಘಾಟನೆ ವಿಳಂಬವಾಗಬಾರದೆಂದು ಸ್ಥಳೀಯರು ಹೇಳುತ್ತಿದ್ದಾರೆ. 10 ತಿಂಗಳ ಹಿಂದೆಯೇ ತಯಾರಾಗಿರುವ ಪುತ್ಥಳಿ ದಕ್ಷಿಣ ಕನ್ನಡ ಮೂಲದ ಶಿಲ್ಪಿ ಧನಂಜಯ್ ಪಡು ಅವರ ತಂಡ 10 ತಿಂಗಳ ಹಿಂದೆಯೇ 9.8 ಅಡಿ ಎತ್ತರ, 12.4 ಅಡಿ ಉದ್ದದ ಅರ್ಜುನನ ಪುತ್ಥಳಿ ನಿರ್ಮಾಣ ಪೂರ್ಣಗೊಳಿಸಿದೆ.

ಅರ್ಜುನನ ಸಮಾದಿ ಮೇಲೆಯೇ ಮೂರ್ತಿಯನ್ನು ನಿಲ್ಲಿಸಲಾಗಿದೆ. ಸರ್ಕಾರ ಇದುವರೆಗೆ 50 ಲಕ್ಷ ರೂ. ವೆಚ್ಚದಲ್ಲಿ ಸ್ಮಾರಕದ ಪ್ರಮುಖ ಭಾಗಗಳನ್ನು ನಿರ್ಮಿಸಿದ್ದು, ಇನ್ನೂ ಶೌಚಾಲಯ, ವಿಶ್ರಾಂತಿ ಗೃಹ, ಭದ್ರತಾ ಸಿಬ್ಬಂದಿ ಕೊಠಡಿ ಸೇರಿದಂತೆ ಹಲವಾರು ಮೂಲ ಸೌಲಭ್ಯಗಳು ಬಾಕಿ ಇವೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾತನಾಡಿರುವ ಶಾಸಕ ಸಿಮೆಂಟ್ ಮಂಜು, ಅರ್ಜುನ ಈ ದೇಶದ ಆಸ್ತಿ. ಅದಕ್ಕೆ ಗೌರವ ಇದ್ದರೆ ಸರ್ಕಾರ ಶೀಘ್ರ ಸ್ಮಾರಕ ಉದ್ಘಾಟನೆ ಮಾಡಬೇಕು. ಕಂಚಿನ ಪ್ರತಿಮೆ ಬೇಡಿಕೆ ಇದ್ದರೂ ಫೈಬರ್ ಮೂರ್ತಿ ನಿರ್ಮಾಣವಾಗಿದೆ. ಈ ವಿಷಯವನ್ನು ಅರಣ್ಯ ಸಚಿವರ ಗಮನಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಗ್ಯಾರೆಂಟಿ ಯೋಜನೆ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...