‘ಸಂಚಾರ್ ಸಾಥಿ’ ಅಪ್ಲಿಕೇಷನ್  ಕಡ್ಡಾಯವಲ್ಲ : ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ 

56

ದೆಹಲಿ : ಸಂಚಾರ್ ಸಾಥಿ ಅಪ್ಲಿಕೇಷನ್ ಕಡ್ಡಾಯವಲ್ಲ ಬೇಡವಾದರೆ ಮೊಬೈಲ್ನಿಂದ ಡಿಲೀಟ್ ಮಾಡಬಹುದು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದರು. ಇದೀಗ ಸಾರ್ವಜನಿಕ ಸಲಹೆಗಳು ಮತ್ತು ಪ್ರತಿಕ್ರಿಯೆಗಳ ಆಧಾರದ ಮೇಲೆ ಈ ನಿಯಮವನ್ನು ತೆಗೆದು ಹಾಕಲಾಗಿದೆ ಎಂದು ಹೇಳಿದ್ದಾರೆ.

ತೀವ್ರ ವಿರೋಧ ಬೆನ್ನಲ್ಲೇ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ ನಿರ್ಧಾರ ವಾಪಾಸ್ ಪಡೆದ ಕೇಂದ್ರ ಕೇಂದ್ರ ಸರ್ಕಾರವು ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಮೊಬೈಲ್‌ಗಳಲ್ಲಿ ಪೂರ್ವ-ಸ್ಥಾಪನೆ ಮಾಡುವುದನ್ನು ಕಡ್ಡಾಯಗೊಳಿಸುವ ಆದೇಶವನ್ನು ಹಿಂತೆಗೆದುಕೊಂಡಿದೆ.

ಸಾರ್ವಜನಿಕರ ಸಲಹೆ ಮತ್ತು ಪ್ರತಿಕ್ರಿಯೆಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.

ಕಳೆದುಹೋದ ಫೋನ್‌ಗಳನ್ನು ಟ್ರ್ಯಾಕ್ ಮಾಡಲು ಮತ್ತು ನೈಜತೆಯನ್ನು ಪರಿಶೀಲಿಸಲು ಈ ಅಪ್ಲಿಕೇಶನ್ ಸಹಾಯಕವಾಗಿತ್ತು. ಇನ್ನು ಮುಂದೆ, ಇದು ಕಡ್ಡಾಯವಲ್ಲ ಮತ್ತು ಬೇಡವಾದರೆ ಡಿಲೀಟ್ ಮಾಡಬಹುದು.

ಮಾರಾಟವಾಗುತ್ತಿರುವ ಫೋನ್ಗಳ ನೈಜತೆ ಹಾಗೂ ಕಳೆದುಹೋಗಿರುವ ಫೋನ್ ಅನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುವಂತೆ ಸರ್ಕಾರ ಈ ಅಪ್ಲಿಕೇಷನ್ ಅನ್ನು ಸಿದ್ಧಪಡಿಸಿತ್ತು.

ಆದರೆ ಇದೀಗ ಸಂಚಾರ್ ಸಾಥಿ ಸೈಬರ್ ಸೆಕ್ಯುರಿಟಿ ಅಪ್ಲಿಕೇಶನ್‌ನ ಪೂರ್ವ-ಸ್ಥಾಪನೆಯನ್ನು ಕಡ್ಡಾಯಗೊಳಿಸುವ ಆದೇಶವನ್ನು ಸರ್ಕಾರ ಬುಧವಾರ ಹಿಂತೆಗೆದುಕೊಂಡಿದೆ .

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...