ಬೆಂಗಳೂರು :  ಡಿಸೆಂಬರ್ 4 ರಿಂದ 8 ರವರೆಗೆ ಬೆಸ್ಕಾಂ ನಿಗದಿತ ವಿದ್ಯುತ್ ವ್ಯತ್ಯಯ

32

ಡಿಸೆಂಬರ್ 4 ರಿಂದ ಅಂದರೆ ಇಂದಿನಿಂದ ಐದು ದಿನಗಳವರೆಗೆ ನಿಗದಿತ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಹೇಳಿದೆ. ಮಳೆಗಾಲ ಮತ್ತು ಬೇಸಿಗೆ ತಿಂಗಳುಗಳಲ್ಲಿ ವಿಳಂಬ ಆಗಿರುವ ದುರಸ್ಥಿತಿ ಕಾರ್ಯವನ್ನು ಈಗ ಮುಂದುವರಿಸಲಿದ್ದೇವೆ ಎಂದು ಹೇಳಿದ್ದಾರೆ. ಡಿಸೆಂಬರ್ 8ರವರೆಗೆ ದುರಸ್ಥಿತಿ ಕಾರ್ಯ ನಡೆಯಲಿದೆ. ಒಂದು ವೇಳೆ ಸಮಯಕ್ಕಿಂತ ಮುಂಚಿತವಾಗಿ ಕೆಲಸಗಳು ಪೂರ್ಣಗೊಂಡರೆ ವಿದ್ಯುತ್ ಸರಬರಾಜು ಮುಂದುವರಿಸಲಾಗುವುದು.

ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಪ್ರದೇಶದ ಪರಿಸ್ಥಿತಿಗಳಿಗೆ ಅನುಗುಣವಾಗಿ ವಿದ್ಯುತ್ ಕಡಿತವು 1 ರಿಂದ 5 ಗಂಟೆಗಳವರೆಗೆ ಬದಲಾಗಬಹುದು ಎಂದು ಹೇಳಿದ್ದಾರೆ.

ಬೆಂಗಳೂರು ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳು: ಬೆಂಗಳೂರಿನ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಮತ್ತು ಮಧ್ಯ ಭಾಗಗಳಲ್ಲಿ ವಿದ್ಯುತ್ ಕಡಿತಗೊಳ್ಳುವ ನಿರೀಕ್ಷೆಯಿದೆ.ವೈಟ್‌ಫೀಲ್ಡ್, ಹೂಡಿ, ಐಟಿಪಿಎಲ್ ಮತ್ತು ಮಹದೇವಪುರ, ಶಿವಾಜಿನಗರ, ರಿಚ್‌ಮಂಡ್ ಟೌನ್ ಮತ್ತು ಎಂಜಿ ರಸ್ತೆಯ ಕೆಲವು ಭಾಗಗಳಲ್ಲಿ ಈ ವಿದ್ಯುತ್ ಕಡಿತಗೊಳ್ಳಲಿದೆ.

ಇನ್ನು ಕೆಲವು ಕಡೆ ಕೇಬಲ್‌ಗಳು, ಸೇವಾ ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಾಯಿಸಲು, ಫೀಡರ್ ಲೈನ್‌ಗಳನ್ನು ನವೀಕರಿಸಲು ಹಾಗೂ ನಗರದಲ್ಲಿ ವಿದ್ಯುತ್ ಲೋಡಿಂಗ್ ಇರುವ ಕಾರಣದಿಂದ ವಿದ್ಯುತ್ ಕಡಿತಗೊಳಿಸಲಾಗುವುದು ಎಂದು ಹೇಳಿದ್ದಾರೆ. ಜೆಪಿ ನಗರ, ಜಯನಗರ, ಬನಶಂಕರಿ, ಕುಮಾರಸ್ವಾಮಿ ಲೇಔಟ್, ಉತ್ತರಹಳ್ಳಿ, ಪದ್ಮನಾಭನಗರ, ಅರೇಹಳ್ಳಿ, ರಾಜಾಜಿನಗರ, ವಿಜಯನಗರ, ಬಸವೇಶ್ವರನಗರ, ನಾಗರಭಾವಿ, ಚಂದ್ರಾ ಲೇಔಟ್, ಮಾಗಡಿ ರಸ್ತೆಯ ಭಾಗಗಳು, ಹೆಬ್ಬಾಳ, ಸಂಜಯನಗರ, ಯಲಹಂಕ, ವಿದ್ಯಾರಣ್ಯಪುರ, ಆರ್‌ಟಿ ನಗರ, ಸಹಕಾರ ನಗರ, ವೈಟ್ ಫೀಲ್ಡ್, ಹೂಡಿ, ಕೆಆರ್ ಪುರಂ, ಐಟಿಪಿಎಲ್, ಮಹದೇವಪುರ, ವರ್ತೂರು, ಶಿವಾಜಿನಗರ, ಶಾಂತಿನಗರ, ರಿಚ್ಮಂಡ್ ಟೌನ್, ಲ್ಯಾಂಗ್ಫೋರ್ಡ್ ರಸ್ತೆ, ಎಂಜಿ ರಸ್ತೆಯ ಕೆಲವು ಭಾಗಗಳಲ್ಲಿ ವಿದ್ಯುತ್ ಕಡಿತವಾಗಲಿದೆ.”

Leave a comment

Leave a Reply

Your email address will not be published. Required fields are marked *

Related Articles

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...