ಬರೋಬ್ಬರಿ 18 ಕೆ.ಜಿ. 590 ಗ್ರಾಂ 18 ಕೋಟಿ ಮೌಲ್ಯದ ಮಾದಕವಸ್ತು (Drugs) ಜಪ್ತಿ

27

ಬೆಂಗಳೂರು: ಸಿಲಿಕಾನ್‌ ಸಿಟಿಗೆ ಅಂಟಿರೊ ಡ್ರಗ್ಸ್ ಪೆಡಂಭೂತ ಹೋಗುವ ಯಾವ ಲಕ್ಷಣವೂ ಕಂಡು ಬರ್ತಿಲ್ಲ. ಹೊಸ ವರ್ಷಕ್ಕಾಗಿ ಪಾರ್ಟಿಪ್ರಿಯರನ್ನ ಟಾರ್ಗೆಟ್ ಮಾಡಿ ತರಲಾಗಿದ್ದ 18 ಕೋಟಿ ಮೌಲ್ಯದ ಮಾದಕವಸ್ತು (Drugs) ಜಪ್ತಿ ಮಾಡಿರುವ ಭರ್ಜರಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು

18.75 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ (Hydro Ganja), ಸಾಮಾನ್ಯ ಗಾಂಜಾ ಮತ್ತು ಎಂಡಿಎಂಎ ಸೇರಿದಂತೆ ವಿವಿಧ ಮಾದಕವಸ್ತುಗಳನ್ನ ಜಪ್ತಿ ಮಾಡಿದ್ದಾರೆ. ಈ ಸಂಬಂಧ 10 ಮಂದಿ ಆರೋಪಿಗಳನ್ನ ಬಂಧಿಸಲಾಗಿದ್ದು, ಐದು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

ಬ್ಯಾಂಕಾಕ್‌ನಿಂದ ಹೈಡ್ರೋಗಾಂಜಾ ಸಾಗಾಟ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 18 ಕೆ.ಜಿ. 590 ಗ್ರಾಂ ಹೈಡ್ರೋಗಾಂಜಾವನ್ನ ಜಪ್ತಿ ಮಾಡಿದ್ದು, ಇದರ ಮೌಲ್ಯ 18.60 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಬ್ಯಾಂಕಾಕ್‌ನಿಂದ ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸಲಾಗಿದ್ದ ಈ ಹೈಡ್ರೋಗಾಂಜಾವನ್ನ ಏರ್‌ಪೋರ್ಟ್‌ನಿಂದ ಹೊರಬರುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ಓರ್ವ ಮಹಿಳೆ ಮತ್ತು ಓರ್ವ ಪುರುಷ ಸೇರಿದಂತೆ ಕೊರಿಯರ್‌ ಮಾಡ್ತಿದ್ದ ಇಬ್ಬರನ್ನೂ ಬಂಧಿಸಲಾಗಿದೆ.

ತನಿಖೆ ವೇಳೆ ಇವರು ಮಾದಕವಸ್ತು ವಾಹಕರು ಎಂದು ತಿಳಿದುಬಂದಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ”

Leave a comment

Leave a Reply

Your email address will not be published. Required fields are marked *

Related Articles

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...