ಬೆಂಗಳೂರಿನ ಕೇಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದು 102 ವಿಮಾನಗಳ ಸಂಚಾರ ರದ್ದು

42

ದೇವನಹಳ್ಳಿ : ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಸತತವಾಗಿ ಮುಂದುವರಿದಿದ್ದು, ಬೆಂಗಳೂರಿನ ಕೇಂಪೇಗೌಡ ವಿಮಾನ ನಿಲ್ದಾಣದಲ್ಲಿಯೇ ಇಂದು 102 ವಿಮಾನಗಳ ಸಂಚಾರ ರದ್ದಾಗಿದೆ.

50 ಡಿಪಾರ್ಚರ್ ಹಾಗೂ 52 ಅರೈವಲ್ ವಿಮಾನಗಳು ಕ್ಯಾನ್ಸಲ್ ಆಗಿದ್ದು, 30ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬಗೊಂಡಿದೆ. ಇದರಿಂದಾಗಿ ರೊಚ್ಚಿಗೆದ್ದ ಪ್ರಯಾಣಿಕರು ಇಂಡಿಗೋ ಕೌಂಟರ್ ಬಳಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಅರೈವಲ್ ಗೇಟ್ ಖಾಲಿ ಖಾಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆ‌ ಕೆಂಪೇಗೌಡ ಏರ್ಪೋರ್ಟ್ನ ಅರೈವಲ್ ಗೇಟ್ ಖಾಲಿ ಖಾಲಿ ಇರೋ ದೃಶ್ಯಗಳು ಕಂಡುಬಂದಿವೆ. ಹೊರ ರಾಜ್ಯಗಳಿಂದಲೂ ಇಂಡಿಗೋ ವಿಮಾನಗಳು ಬಾರದ ಹಿನ್ನಲೆ, ಪ್ರಯಾಣಿಕರಿಲ್ಲದೆ ಆಗಮನದ ದ್ವಾರಗಳು ಬಿಕೋ ಎನ್ನುತ್ತಿವೆ.

ಪ್ರಯಾಣಿಕರಿಲ್ಲದ ಕಾರಣ ಟ್ಯಾಕ್ಸಿ ಚಾಲಕರೂ ಬಾಡಿಗೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: 550 ಇಂಡಿಗೋ ವಿಮಾನಗಳ ಸಂಚಾರ ರದ್ದು, ಬೆಂಗಳೂರು ಸೇರಿ ಹಲವೆಡೆ ಪ್ರಯಾಣಿಕರ ಒದ್ದಾಟ ಟರ್ಮಿನಲ್ 1ರಲ್ಲಿ ಬಿಗಿ ಭದ್ರತೆ ವಿಮಾನಗಳ ಹಾರಾಟದಲ್ಲಿ ವ್ಯತ್ಯಯದ ಕಾರಣ ಪ್ರಯಾಣಿಕರು ತೀವ್ರ ಆಕ್ರೋಶಗೊಂಡಿದ್ದಾರೆ.

ಹೀಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಏರ್ಪೋರ್ಟ್ನಲ್ಲಿ ಮುಂಜಾಗೃತೆ ವಹಿಸಲಾಗಿದೆ. ಭದ್ರತೆಗೆ ಟರ್ಮಿನಲ್ 1ರಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸರ ಬಳಿಯೇ ಬಂದು ಪ್ರಯಾಣಿಕರು ಅಸಮಾಧಾನ ಹೊರಹಾಕ್ತಿರುವ ಪ್ರಸಂಗಗಳೂ ನಡೆಯುತ್ತಿವೆ.

ಏರ್ಪೋರ್ಟ್ ಬಸ್ಗಳು ಖಾಲಿ ಖಾಲಿ‌ ಒಂದೆಡೆ ಇಂಡಿಗೋ ಪ್ಲೈಟ್ಗಳಿಲ್ಲದೆ ಏರ್ಪೋರ್ಟ್ನಲ್ಲಿ ಪ್ರಯಾಣಿಕರು ಪರದಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಪ್ರಯಾಣಿಕರಿಲ್ಲದೆ ಏರ್ಪೋರ್ಟ್ ಬಸ್ಗಳು ಖಾಲಿ ಖಾಲಿ‌ಯಾಗಿವೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿವಿಧ ಭಾಗಗಳಿಗೆ ಸಂಚರಿಸುವ ಬಸ್ಗಳು ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿವೆ.

ಪ್ರಯಾಣಿಕರಿಗಾಗಿ ಬಿಎಂಟಿಸಿಯ ವಾಯುವಜ್ರ ಮತ್ತು ಕೆಎಸ್ಆರ್ಟಿಸಿಯ ಫ್ಲೈ ಬಸ್ಗಳ ಚಾಲಕರು ಕಾದು ಕುಳಿತಿದ್ದಾರೆ.

ಕಳೆದ ಮೂರು ದಿನಗಳಿಂದ ಬಿಎಂಟಿಸಿ ಕಲೆಕ್ಷನ್‌ ಸಂಪೂರ್ಣ ಕುಸಿತ ಕಂಡಿದ್ದು, ಪ್ರಯಾಣಿಕರಿಲ್ಲದ ಕಾರಣ ಬಸ್ಗಳು ಖಾಲಿಯಾಗಿ  ಸಂಚರಿಸಬೇಕಾದ ಸ್ಥಿತಿ ಉದ್ಭವವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...