ಹಾಸನ : ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಾಣ – ಸಿಎಂ ಸಿದ್ದರಾಮಯ್ಯ ಘೋಷಣೆ. 700 ಎಕರೆ ಜಾಗದಲ್ಲಿ ಉದ್ಯಾನವನ ನಿರ್ಮಾಣ. ಹಾಸನ ಜಿಲ್ಲೆಯಲ್ಲಿ ಡಿ. 6ರಂದು ನಾನಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಘೋಷಣೆ.
ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದ ಬಳಿ 700 ಎಕರೆ ಜಾಗವಿದ್ದು, ಅಲ್ಲಿ ಪ್ರವಾಸೋದ್ಯಮದ ಪ್ರೋತ್ಸಾಹಕ್ಕೆ ಉದ್ಯಾನವನ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಅವರು ಇಂದು ಹಾಸನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಸನ ವತಿಯಿಂದ ಆಯೋಜಿಸಲಾದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಹೇಮಾವತಿಯಲ್ಲಿ ವಿಶ್ವದರ್ಜೆಯ ಉದ್ಯಾನವನ ನಿರ್ಮಿಸುವ ಬಗ್ಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರವರು ಕೋರಿಕೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳುವ ಭರವಸೆಯನ್ನು ನೀಡಿ ಮುಖ್ಯಮಂತ್ರಿಗಳು ನೀಡಿದರು.”

Leave a comment