ನಾಗರಿಕ ವಿಮಾನಯಾನ ನಿರ್ದೇಶನಾಲಯ ಇಂಡಿಗೋ ಸಿಇಒ : ಎಲ್ಬರ್ಸ್‌ ಅವರಿಗೆ ಪ್ರತಿಕ್ರಿಯಿಸಲು 24 ಗಂಟೆಗಳ ಕಾಲಾವಕಾಶ

46

ನವದೆಹಲಿ: ಇಂಡಿಗೋ ವಿಮಾನ ಬಿಕ್ಕಟ್ಟು ದೇಶಾದ್ಯಂತ ಕೋಲಾಹಲ ಸೃಷ್ಟಿಸಿದೆ. ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಪ್ರಮುಖ ಕಾರ್ಯಾಚರಣೆಯ ಬಿಕ್ಕಟ್ಟನ್ನು ಎದುರಿಸುತ್ತಿದೆ.

ಈ ನಡುವಲ್ಲೇ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇಂಡಿಗೋ ವಿಮಾನಯಾನ ಸಂಸ್ಥೆಯ ಬಿಕ್ಕಟ್ಟಿನ ಬಗ್ಗೆ ವಿವರಣೆ ನೀಡುವಂತೆ ಒತ್ತಾಯಿಸಿರುವ ಡಿಜಿಸಿಎ, ಎಲ್ಬರ್ಸ್‌ ಅವರಿಗೆ ಪ್ರತಿಕ್ರಿಯಿಸಲು 24 ಗಂಟೆಗಳ ಕಾಲಾವಕಾಶ ನೀಡಿದೆ.

ಒಂದು ವೇಳೆ ಉತ್ತರಿಸಲು ವಿಫಲವಾದಲ್ಲಿ ದಂಡನಾತ್ಮಕ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಸಿದೆ. ಇದರ ಜೊತೆಗೆ ಸಿಇಒ ಆಗಿ ವಿಮಾನಯಾನ ಸಂಸ್ಥೆಯ ಪರಿಣಾಮಕಾರಿ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ.

ವಿಶ್ವಾಸಾರ್ಹ ಕಾರ್ಯಾಚರಣೆಗಳನ್ನು ನಡೆಸಲು ಮತ್ತು ಪ್ರಯಾಣಿಕರಿಗೆ ಅಗತ್ಯವಾದ ಸೌಲಭ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ನೀವು ನಿಮ್ಮ ಕರ್ತವ್ಯದಲ್ಲಿ ವಿಫಲರಾಗಿದ್ದೀರಿ ಎಂದು ಬೇಸರ ವ್ಯಕ್ತಪಡಿಸಿದೆ.

ಇಂಡಿಗೋ ವಿಮಾನದ ಕಾರ್ಯಾಚರಣೆಗಳಲ್ಲಿ ಭಾರಿ ಅಡಚಣೆಗಳು ಕಂಡುಬಂದಿವೆ ಇದು ದೇಶಾದ್ಯಂತ ಪ್ರಯಾಣಿಕರಿಗೆ ತೀವ್ರ ಅನಾನುಕೂಲತೆ, ತೊಂದರೆ ಮತ್ತು ಯಾತನೆಯನ್ನು ಉಂಟುಮಾಡಿದೆ ಎಂದು ಡಿಜಿಸಿಎ ನೋಟಿಸ್ನಲ್ಲಿ ಉಲ್ಲೇಖಿಸಿದೆ”

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...