ರಾಜ್ಯದ ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ‘ಕಲಿಕಾ ಭಾಗ್ಯ’ ಯೋಜನೆಯಡಿ ಆರ್ಥಿಕ ನೆರವು

39

ಕಟ್ಟಡ ನಿರ್ಮಾಣದಂತಹ ಕೆಲಸದಲ್ಲಿ ತೊಡಗಿರುವ ದಿನಗೂಲಿ ಕಾರ್ಮಿಕರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಶೈಕ್ಷಣಿಕ ಸಹಾಯಧನವನ್ನು ಒದಗಿಸುತ್ತಿದೆ.

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬಲು ‘ಕಲಿಕಾ ಭಾಗ್ಯ’ ಯೋಜನೆಯಡಿ ಆರ್ಥಿಕ ನೆರವು ನೀಡುತ್ತಿದೆ. 2025-26ನೇ ಸಾಲಿನ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹರಿರುವ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.

ಕಲಿಕಾ ಭಾಗ್ಯ ಯೋಜನೆ ಏನಿದು ಕಲಿಕಾ ಭಾಗ್ಯ ಯೋಜನೆ? ಕಲಿಕಾ ಭಾಗ್ಯ ಯೋಜನೆ ಕರ್ನಾಟಕ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿ ಜಾರಿಗೊಳಿಸಿರುವ ಒಂದು ವಿದ್ಯಾರ್ಥಿವೇತನ ಯೋಜನೆಯಾಗಿದ್ದು, ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಸಹಾಯಧನ ನೀಡುತ್ತದೆ.

ನರ್ಸರಿಯಿಂದ ಸ್ನಾತಕೋತ್ತರ ಪದವಿವರೆಗೆ ಶಿಕ್ಷಣ ಪಡೆಯುತ್ತಿರುವ ಅರ್ಹ ಮಕ್ಕಳಿಗೆ ಶಾಲಾ ಶಿಕ್ಷಣ ಮುಂದುವರಿಸಲು ಆರ್ಥಿಕ ಸಹಾಯ ಒದಗಿಸುವುದೇ ಇದರ ಮುಖ್ಯ ಉದ್ದೇಶ.

ಈ ಯೋಜನೆಯಡಿ, ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳವರೆಗೆ ಮಾತ್ರ ವಿದ್ಯಾರ್ಥಿವೇತನ ಲಭ್ಯವಿದೆ. ಈ ಯೋಜನೆಯಡಿ, ಪ್ರೌಢಶಾಲೆಯಿಂದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸ್‌ಗಳವರೆಗೆ ಗರಿಷ್ಠ 50,000 ರೂ. ವರೆಗೆ ಸಹಾಯಧನವನ್ನು ಪಡೆಯಲು ಅವಕಾಶವಿದೆ.

ಆರ್ಥಿಕ ಒತ್ತಡದಿಂದ ಮುಕ್ತರಾಗಿ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಈ ಯೋಜನೆ ಸಹಕಾರಿಯಾಗಿದೆ. ‘ಕಲಿಕಾ ಭಾಗ್ಯ’ ಯೋಜನೆಯು 1965ರ ಕಾರ್ಮಿಕ ಕಲ್ಯಾಣ ಕಾಯ್ದೆ ಅಡಿ ಸ್ಥಾಪನೆಯಾದ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಒಂದು ಭಾಗವಾಗಿದೆ.

ಸಂಘಟಿತ ಕ್ಷೇತ್ರದ ಕಾರ್ಮಿಕರ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುವ ಮಂಡಳಿಯು ಕಾರ್ಮಿಕರ ಮಕ್ಕಳ ಶೈಕ್ಷಣಿಕ ಆಕಾಂಕ್ಷೆಗಳನ್ನು ಈ ಮೂಲಕ ನೆರವೇರಿಸಲು ಮುಂದಾಗಿದೆ. ಅರ್ಹತಾ ಮಾನದಂಡಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿರಬೇಕು.

ಕುಟುಂಬದ ವಾರ್ಷಿಕ ಆದಾಯವು 1 ಲಕ್ಷ ರೂ.ಕ್ಕಿಂತ ಕಡಿಮೆ ಇರಬೇಕು. ನೋಂದಾಯಿತ ಕಾರ್ಮಿಕರ ಗರಿಷ್ಠ ಇಬ್ಬರು ಮಕ್ಕಳಿಗೆ ಮಾತ್ರ ಈ ಯೋಜನೆಯ ಧನಸಹಾಯ ಲಭ್ಯ. ಕರ್ನಾಟಕದ ಸರ್ಕಾರದಿಂದ ನೋಂದಾಯಿತ ಶಾಲಾ/ಕಾಲೇಜುಗಳಲ್ಲಿ ಭೌತಿಕವಾಗಿ ಹಾಜರಾಗಿ ವ್ಯಾಸಂಗ ಮಾಡುತ್ತಿರಬೇಕು (ಪ್ರಸ್ತುತ ಸಾಲಿನಲ್ಲಿ).

ದೂರ ಶಿಕ್ಷಣ, ಆನ್‌ಲೈನ್ ಶಿಕ್ಷಣ, ಹೋಮ್ ಸ್ಟಡಿ ಇತ್ಯಾದಿಗಳಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಇರುವುದಿಲ್ಲ. ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಶೇ. 75ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಮಕ್ಕಳು (ಪ್ರತಿಭಾವಂತ ಮಕ್ಕಳ ಪ್ರತ್ಯೇಕ ವಿಭಾಗ ಹೊರತುಪಡಿಸಿ, ಹೆಚ್ಚಿನ ಸಹಾಯಧನಕ್ಕಾಗಿ ಈ ಮಾನದಂಡ ಅನ್ವಯಿಸುತ್ತದೆ).”

Leave a comment

Leave a Reply

Your email address will not be published. Required fields are marked *

Related Articles

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...