ಕಡ್ಡಾಯ ಮುಟ್ಟಿನ ರಜೆ : ಸರ್ಕಾರದ ಆದೇಶಕ್ಕೆ ವಿರೋಧ

68

ಬೆಂಗಳೂರು : ಕರ್ನಾಟಕ ಸರ್ಕಾರವು ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ಮುಟ್ಟಿನ ರಜೆ ನೀಡುವ ಆದೇಶ ಹೊರಡಿಸಿತ್ತು. ಇದರ ವಿರುದ್ಧ ಬೆಂಗಳೂರು ಹೋಟೆಲ್‌ಗಳ ಸಂಘವು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಹೋಟೆಲ್ ಸಂಘದ ವಾದ ಆಲಿಸಿ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ವಕೀಲ ಪ್ರಶಾಂತ್ ಬಿ.ಕೆ. ಸಂಘದ ಪರ ವಾದ ಮಂಡಿಸಿದರು. ಮಹಿಳೆಯರಿಗೆ ಋತುಚಕ್ರ ರಜೆ ನೀಡಿದ್ದ ಸರ್ಕಾರಕ್ಕೆ ಹೈಕೋರ್ಟ್ನಲ್ಲಿ ಭಾರಿ ಹಿನ್ನಡೆ 

ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ಮುಟ್ಟಿನ ರಜೆಯನ್ನು (Menstrual Leave) ನೀಡಿದ ರಾಜ್ಯ ಸರ್ಕಾರದ ಇತ್ತೀಚಿನ ಆದೇಶದ ವಿರುದ್ಧ ಬೆಂಗಳೂರು ಹೋಟೆಲ್‌ಗಳ ಸಂಘವು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಬೆಂಗಳೂರು ಹೋಟೆಲ್ ಸಂಘದ ಪರ ವಕೀಲರ ವಾದ ಆಲಿಸಿದ ಹೈ ಕೋರ್ಟ್ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಹೋಟೆಲ್ ಸಂಘದ ಮಾನ್ಯ ಉಚ್ಚ ನ್ಯಾಯಾಲಯದ ಮುಂದೆ ಇಂದು ಅರ್ಜಿ ವಿಚಾರಣೆಗೆ ಬಂದಿದ್ದು, ಹೋಟೆಲ್ ಸಂಘದ ಪರ ವಕೀಲರಾದ ಪ್ರಶಾಂತ್ ಬಿ.ಕೆ ವಾದ ಮಂಡಿಸಿದ್ದರು.

ರಾಜ್ಯ ಸರ್ಕಾರಕ್ಕೆ ಅಂತಹ ಆದೇಶವನ್ನು ವಿಧಿಸಲು ಅಧಿಕಾರವಿಲ್ಲವೆಂದ ಸಂಸ್ಥೆ ಕರ್ನಾಟಕ ಸರ್ಕಾರ ನವೆಂಬರ್ 12ರಂದು ವೇತನ ಸಹಿತ ಮುಟ್ಟಿನ ರಜೆ ಕಡ್ಡಾಯಗೊಳಿಸುವ ನಿರ್ಧಾರ ತೆಗೆದುಕೊಂಡಿತ್ತು.

ಕಾರ್ಮಿಕ ಇಲಾಖೆಯು ಕಾರ್ಖಾನೆ ಕಾಯ್ದೆ, ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆ ಸೇರಿದಂತೆ ಹಲವಾರು ಕಾರ್ಮಿಕ ಕಾನೂನುಗಳ ವ್ಯಾಪ್ತಿಗೆ ಬರುವ ಸಂಸ್ಥೆಗಳು ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆಯನ್ನು ಒದಗಿಸುವಂತೆ ಆದೇಶವನ್ನು ಹೊರಡಿಸಿತ್ತು.

ಆದರೆ ಇತ್ತೀಚೆಗೆ ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರಕ್ಕೆ ಅಂತಹ ಆದೇಶವನ್ನು ವಿಧಿಸಲು ಕಾರ್ಮಿಕ ಕಾನೂನುಗಳ ಪ್ರಕಾರ ಅಧಿಕಾರವಿಲ್ಲವೆಂದು ಬೆಂಗಳೂರು ಹೋಟೆಲ್ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತ್ತು.

ಸರ್ಕಾರವು 1948 ರ ಕಾರ್ಖಾನೆ ಕಾಯ್ದೆ, 1961 ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1951 ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966 ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961 ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿಯಲ್ಲಿ ನಡೆಯುವ ಎಲ್ಲಾ ಸಂಸ್ಥೆಗಳಿಗೆ ಮೇಲೆ ತಿಳಿಸಿದ ನೀತಿಯನ್ನು ಅನುಸರಿಸಲು ನಿರ್ದೇಶನ ನೀಡುವ ಅಧಿಸೂಚನೆಯನ್ನು ಹೊರಡಿಸಿದೆ. ಆದರೆ ರಜೆ ನೀತಿಗಳು ವೈಯಕ್ತಿಕ ಸಂಸ್ಥೆಗಳಿಗೆ ಆಂತರಿಕ ಆಡಳಿತಾತ್ಮಕ ವಿಷಯವಾಗಿ ಉಳಿಯಬೇಕು ಎಂದು ಹೋಟೆಲ್ ಅಸ್ಸೋಸಿಯೇಶನ್ ಅರ್ಜಿ ಸಲ್ಲಿಸಿತ್ತು.”

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...