ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವ ಬಗ್ಗೆ  ಗುಡ್ ನ್ಯೂಸ್

55

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಐಪಿಎಲ್ (IPL) ಮತ್ತು ಇತರ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಮಹತ್ವದ ಹೇಳಿಕೆ ನೀಡಿದ್ದಾರೆ. ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿ ಸಚಿವ ಸಂಪುಟ ಈಗಾಗಲೇ ನಿರ್ಧಾರ ಕೈಗೊಂಡಿದೆ.

ಕ್ರಿಕೆಟ್ ಪ್ರಿಯರಿಗೆ ಶುಭ ಸುದ್ದಿ ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ. ಕ್ರೀಡಾಂಗಣದಲ್ಲಿ ಭವಿಷ್ಯದಲ್ಲಿ ಯಾವುದೇ ಅನಾಹುತಗಳು ಸಂಭವಿಸುವುದನ್ನು ತಡೆಯಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸಂಬಂಧಪಟ್ಟ ಎಲ್ಲರನ್ನು ಕರೆದು ಮಾತನಾಡಲಿದ್ದಾರೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿ ಸಲ್ಲಿಸಿರುವ ಶಿಫಾರಸುಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಕೆಎಸ್ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ನೇತೃತ್ವದ ತಂಡ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರು ಸಭೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಬೆಂಗಳೂರಿನ ಗೌರವವನ್ನು ಕಾಪಾಡುವುದು ತಮ್ಮ ಕರ್ತವ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಗೃಹ ಸಚಿವರು ಕೈಗೊಳ್ಳಲಿರುವ ನಿರ್ಧಾರಗಳು ಕ್ರೀಡಾಂಗಣದಲ್ಲಿನ ಸುರಕ್ಷತೆಯನ್ನು ಖಚಿತಪಡಿಸುವುದು ಮತ್ತು ಭವಿಷ್ಯದ ಕಾರ್ಯಕ್ರಮಗಳಿಗೆ ಸೂಕ್ತ ವ್ಯವಸ್ಥೆಗಳನ್ನು ರೂಪಿಸುವುದನ್ನು ಒಳಗೊಂಡಿವೆ ಎಂದು ಅವರು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಹೇಳಿಕೆಯ ವಿಡಿಯೋ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಸಚಿವ ಸಂಪುಟ ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿತ್ತು.

ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿ ವರದಿ ಶಿಫಾರಸುಗಳನ್ನು ಅಳವಡಿಸಿಕೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಡಿಸುವುದಕ್ಕೆ ಸಂಪುಟ ಅವಕಾಶ ನೀಡಿದೆ. ಈ ಬಗ್ಗೆ ಗೃಹ ಇಲಾಖೆಗೆ ಜವಾಬ್ದಾರಿ ವಹಿಸಿದೆ.”

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...