ನ್ಯಾಷನಲ್ ಹೆರಾಲ್ಡ್‌ ಕೇಸ್: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಪರ ದೆಹಲಿ ನ್ಯಾಯಾಲಯ ತೀರ್ಪು ಸ್ವಾಗತಾರ್ಹ -ಮಂಜುನಾಥ ಭಂಡಾರಿ

50

ಮಂಗಳೂರು: ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಪರಿಗಣಿಸಲು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ನಿರಾಕರಿಸಿರುವುದನ್ನು ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಸ್ವಾಗತಿಸಿದ್ದಾರೆ. ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಅವರು ಪತ್ರಿಕಾ ಹೇಳಿಕೆ ನೀಡಿದರು

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಮೂರ್ತಿ ವಿಶಾಲ್ ಗೋಗಾನೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇಡಿ ಸಲ್ಲಿಸಿರುವ ಆರೋಪಪಟ್ಟಿ ವಿಚಾರಣೆಗೆ ಅರ್ಹವಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇದರಿಂದ ಜನರಿಗೆ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವುಗಳ ಮೇಲೆ ವಿಶ್ವಾಸ ಹೆಚ್ಚಿದೆ. ಕಾಂಗ್ರೆಸ್ ಪಕ್ಷ ನ್ಯಾಯಪರ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು ಸದಾ ಸತ್ಯ ಮತ್ತು ನ್ಯಾಯದ ಹಾದಿಯಲ್ಲಿ ಮುನ್ನಡೆಯಲಿದೆ ಎಂದು ಭಂಡಾರಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನೀಟ್ ಪರೀಕ್ಷೆ ನಡೆಸುವ ಎನ್ ಟಿಎನಲ್ಲಿ ಮಹತ್ವದ ಬದಲಾವಣೆ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರಕಾರ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ದೇಶಾದ್ಯಂತ ಹಬ್ಬುತ್ತಿದ್ದಂತೆ ಎಚ್ಚೇತ ಕೇಂದ್ರ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ‘ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ...

ವಂದೇ ಮಾತರಂ’ಗೆ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ನಾಳೆ ಸಂಸತ್ತಿನಲ್ಲಿ ಮಸೂದೆ ಮಂಡನೆ

ನವದೆಹಲಿ: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು,...

ಕುಂಭಮೇಳ ವೈರಲ್ ಯುವತಿ ಮೊನಾಲಿಸಾ ದಂಪತಿಗಳಿಗೆ ನೀಡಿದ್ದ ಪೊಲೀಸ್ ರಕ್ಷಣೆಯನ್ನು ಹಿಂಪಡೆದುಕೊಂಡ ಕೇರಳ ಹೈ ಕೋರ್ಟ್

“ಕೊಚ್ಚಿ: ಕುಂಭಮೇಳ 2025 ರಲ್ಲಿ ಸಾಕಷ್ಟು ವೈರಲ್‌ ಆಗಿದ್ದ ಯುವತಿ ಮೊನಾಲಿಸಾ ಭೋಸ್ಲೆ ಹಾಗೂ ಆಕೆಯ...