ರಾಜ್ಯ ಸರ್ಕಾರ :  ಪಾರಿವಾಳಗಳಿಂದ ಕಾಯಿಲೆಗಳು ಹರಡುತ್ತಿದ್ದು,ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ನೀಡುವುದು ನಿಷೇಧ.

48

ಬೆಂಗಳೂರು: ಪಾರಿವಾಳಗಳಿಂದ ಕಾಯಿಲೆಗಳು ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ.

ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಹೊಸ ನಿಯಮದಂತೆ ನಿಯಮ ಉಲ್ಲಂಘಿಸಿ ಪಾರಿವಾಳಗಳಿಗೆ ಆಹಾರ ನೀಡಿದವರಿಗೆ, ಸಾಂಕ್ರಾಮಿಕ ರೋಗ ಹರಡಿದ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲಾಗುತ್ತದೆ. ಅವರಿಗೆ ದಂಡ ಹಾಗೂ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಯಾವುದೇ ವ್ಯಕ್ತಿಯು ಸಾರ್ವಜನಿಕರಿಗೆ ತೊಂದರೆ ಅಥವಾ ಆರೋಗ್ಯಕ್ಕೆ ಅಪಾಯವನ್ನು ಉಂಟುಮಾಡುವ ಪ್ರದೇಶಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡಬಾರದು ಅಥವಾ ಆಹಾರವನ್ನು ನೀಡಲು ಪ್ರೇರೇಪಿಸಬಾರದು.

ಪಾರಿವಾಳಗಳಿಗೆ ಆಹಾರವನ್ನು ನೀಡುವುದನ್ನು ಗೊತ್ತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ಷರತ್ತುಗಳೊಂದಿಗೆ ಅನುಮತಿಸಲಾಗುತ್ತದೆ. ನಿಗದಿಪಡಿಸಿದ ಪ್ರದೇಶಗಳ ನಿರ್ವಹಣೆ ಮತ್ತು ನಿರ್ದೇಶನಗಳ ಅನುಸರಣೆಯ ಜವಾಬ್ದಾರಿಯನ್ನು ಕೆಲವು ಎನ್‌ಜಿಓ ವಹಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ”

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....