ಮುಖ್ಯಮಂತ್ರಿ ಸಿದ್ದರಾಮಯ್ಯ : ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಳ

30

ರೈತರಿಗೆ 1 ಲೀಟರ್ ಹಾಲಿಗೆ ಸಹಾಯಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು ರೈತರಿಗೆ ಹಸುಗಳನ್ನು ಸಾಕಿ ಮೇವು ನೀಡಲು ಹೆಚ್ಚು ಖರ್ಚುಗಳು ಆಗುತ್ತವೆ.

ಮೇವು ಸಾಕಾಣಿಕೆಗೆ ರೈತರಿಗೆ ನೆರವಾಗಲು, ಮೇವಿನ ಹಿಂಡಿ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಪ್ರತಿಲೀಟರ್ ಹಾಲಿನ ಮೇಲೆ 5 ರೂಪಾಯಿ ಸಹಾಯಧನವನ್ನು ಹಿಂದೆ ನೀಡಲಾಗುತ್ತಿತ್ತು. ಅದನ್ನೀಗ ಈ ವರ್ಷದ ಅವಧಿಯಲ್ಲೇ 7 ರೂಪಾಯಿಗೆ ಹೆಚ್ಚಿಸುತ್ತಿದ್ದೇವೆ ಎಂದರು.

ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು.

ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು.

ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇದರ ಜೊತೆಗೆ ಬಜೆಟ್‌ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು. ಪ್ರಸ್ತುತ (2023ರ ನಂತರ) ಪ್ರಣಾಳಿಕೆಯಲ್ಲಿನ 593 ಭರವಸೆಗಳ ಪೈಕಿ 293 ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ಉಳಿದ ಭರವಸೆಗಳನ್ನು ಮುಂದಿನ ಮೂರು ಬಜೆಟ್‌ಗಳಲ್ಲಿ ಈಡೇರಿಸಲಾಗುವುದು ಎಂದು ಹೇಳಿದರು.”

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...