ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷನ ದೇಶದ್ರೋಹ ಪ್ರಕರಣ ಸಮಗ್ರ ತನಿಖೆಗೆ  ಜಿಲ್ಲಾ ಯುವ ಕಾಂಗ್ರೆಸ್ ನಿಂದ  ಪೊಲೀಸ್ ವರಿಷ್ಠಾಧಿಕಾರಿಗೆ  ಮನವಿ

43

ಉಡುಪಿ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಎಂಬಾತನು ನಡೆಸುತ್ತಿರುವ ರೆಸಾರ್ಟ್ ನಲ್ಲಿ ಯಾವುದೇ ಮಾನ್ಯ ದಾಖಲೆಗಳಿಲ್ಲದ ವಿದೇಶಿಗರನ್ನು ಅಕ್ರಮವಾಗಿ ಕೆಲಸಕ್ಕೆ ಇಟ್ಟುಕೊಂಡು ದೇಶದ ಭದ್ರತೆಗೆ ಆತಂಕ ಒಡ್ಡಿರುವ ಘಟನೆ ದೇಶದ್ರೋಹವಾಗಿದ್ದು ಕೂಡಲೇ ಆತನನ್ನು ಬಂಧಿಸಿ ತನಿಖೆ ನಡೆಸಬೇಕು ಹಾಗು ಇದರ ಹಿಂದಿರುವ ಷಡ್ಯಂತ್ರ ಬಯಲಿಗೆ ಎಳೆಯಬೇಕೆಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಒತ್ತಾಯ

. ಯಾವುದೇ ದೇಶದ ಪ್ರಜೆಗಳು ಅಕ್ರಮವಾಗಿ ದೇಶದಲ್ಲಿ ವಾಸಿಸುವುದು ದೇಶದ ಆಂತರಿಕ ಭದ್ರತೆ ಮಾರಕವಾಗುವ ಸಾಧ್ಯತೆ ಇರುವುದರಿಂದ, ಇಂತಹವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದು ಅಗತ್ಯವಾಗಿದೆ. ರೆಸಾರ್ಟ್/ಲಾಡ್ಜ್ ಗಳು ಯಾವುದೇ ಮಾಹಿತಿಗಳಿಲ್ಲದ ವ್ಯಕ್ತಿಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಪರಾಧವಾಗಿದೆ. ಅಂತಹ ರೆಸಾರ್ಟ್/ಲಾಡ್ಜ್ ಗಳ ಮಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ರೆಸಾರ್ಟ್/ಲಾಡ್ಜ್ ಗಳಲ್ಲಿ ಯಾವುದೇ ದೇಶದ ಪ್ರಜೆಗಳು ಬಂದಲ್ಲಿ ಅವರಿಂದ ಇ ಫಾರ್ಮ್ ಪಡೆದು ಜಿಲ್ಲಾ ಪೊಲೀಸ್ ಕಚೇರಿಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು.

ಯಾವುದೇ ದೇಶದ ಪ್ರಜೆ ಬಂದಿದ್ದು, ಅವರಲ್ಲಿ ಸಮರ್ಪಕ ದಾಖಲಾತಿ ಇಲ್ಲದೇ ಇದ್ದಲ್ಲಿ ಕೂಡಲೇ ಸ್ಥಳೀಯ ಪೊಲೀಸ್ ಮತ್ತು ಜಿಲ್ಲಾ ಪೊಲೀಸ್ ಕಚೇರಿಗೆ ಕೂಡಲೇ ಮಾಹಿತಿ ನೀಡಬೇಕು ಹಾಗು ರೆಸಾರ್ಟ್/ಲಾಡ್ಜ್ ಗಳಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವಂತಹ ರೆಸಾರ್ಟ್/ಲಾಡ್ಜ್ ಗಳ ಮ್ಯಾನೇಜರ್ ಹಾಗೂ ಮಾಲಕರ ವಿರುದ್ದ ಪ್ರಕರಣ ದಾಖಲಿಸುವಂತೆ ಯುವ ಕಾಂಗ್ರೆಸ್ ಒತ್ತಾಯಿಸಿದೆ . ಆದುದರಿಂದ ಜಿಲ್ಲೆಯ ಯಾವುದೇ ರೆಸಾರ್ಟ್/ಲಾಡ್ಜ್ ಗಳಲ್ಲಿ ಯಾವುದೇ ರೀತಿಯ ಅನೈತಿಕ/ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಬಾರದು.

ಉಡುಪಿ ಜಿಲ್ಲೆಯಲ್ಲಿ ರೆಸಾರ್ಟ್/ಲಾಡ್ಜ್ ಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಕಟ್ಟುನಿಟ್ಟಿನ ಕ್ರಮ ತೆಗುದುಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಯುವ ಕಾಂಗ್ರೆಸ್ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ,ನವೀನ್ ಸಾಲಿಯಾನ್,ಮಮತಾ ನಾಯ್ಕ್,ಶಮಂತ್ ಕುಂದಾಪುರ,ಅಫ್ರಿದ್,ಪ್ರವೀಣ್ ಬಾರ್ಕೂರ್ ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...