ನಮ್ಮಲ್ಲಿ ಸಮಸ್ಯೆ ಇಲ್ಲ, ನಾಯಕತ್ವ ಗೊಂದಲ ‘ಮಾಧ್ಯಮಗಳ ಸೃಷ್ಟಿ’: ಡಿಕೆ ಶಿವಕುಮಾರ್

46

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕದನ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಇದರಲ್ಲಿ ಬಗೆಹರಿಸಿಕೊಳ್ಳುವಂಥದ್ದು ಏನಿದೆ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪ್ರಶ್ನಿಸಿದ್ದಾರೆ.

ಇಂದು ನಗರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ ಯಾವುದೇ ಗೊಂದಲ ಸೃಷ್ಟಿ ಮಾಡಿಲ್ಲ. ಇದು ಸ್ಥಳೀಯ ಮಟ್ಟದಲ್ಲೇ ಇದ್ದು, ಸ್ಥಳೀಯ ನಾಯಕರೇ ಇದನ್ನ ಬಗೆಹರಿಸಿಕೊಳ್ಳಬೇಕು ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಪಕ್ಷದೊಳಗೆ ಪರಿಹರಿಸಿಕೊಳ್ಳುವಂತಹ ಯಾವುದೇ ಸಮಸ್ಯೆಗಳಿಲ್ಲ, ಇದು ಕೇವಲ “ಮಾಧ್ಯಮಗಳ ಸೃಷ್ಟಿ” ಎಂದರು. “ಪರಿಹರಿಸಿಕೊಳ್ಳಲು ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ. ನೀವು(ಮಾಧ್ಯಮ) ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದೀರಿ. ನಾನು ಏನು ಹೇಳಬೇಕೊ ಅದನ್ನು ಹೇಳಿದ್ದೇನೆ. ನೀವು ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚಿಂತಿಸಬೇಡಿ ಎಂದು ಡಿಸಿಎಂ ಮಾಧ್ಯಮಗಳಿಗೆ ಸಲಹೆ ನೀಡಿದರು.
ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಎಲ್ಲರೂ ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಾಯಕತ್ವ ಬದಲಾವಣೆ ಗೊಂದಲದ ಬಗ್ಗೆ “ಹೈಕಮಾಂಡ್ ಮೇಲೆ ಆರೋಪ ಹೊರಿಸುವುದು ಎಷ್ಟು ಸರಿ?”. ಹೈಕಮಾಂಡ್ ಅನ್ನು ದೂಷಿಸುವ ಬದಲು ಸ್ಥಳೀಯ ನಾಯಕರು ಆಂತರಿಕ ಗೊಂದಲವನ್ನು ಸರಿಪಡಿಸಿಕೊಳ್ಳಬೇಕು ಎಂದು ಖರ್ಗೆ ಅವರು ನಿನ್ನೆ ತಾಕೀತು ಮಾಡಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...